ಜ.20 ರಂದು “ತುಳು-ಕೊಡವ ಭಾಷೆಗಳ ಅಳಿವು ಉಳಿವು” ಪುಸ್ತಕ ಬಿಡುಗಡೆ

14/01/2022

ಮಡಿಕೇರಿ ಜ.14 : ಹಿರಿಯ ರಾಜಕಾರಣಿ ಬಿ.ಕೆ.ಹರಿಪ್ರಸಾದ್ ಅವರ ಸಂಸತ್ ಭಾಷಣಗಳು ಭಾಗ-1 ರ, ಹಿರಿಯ ಪತ್ರಕರ್ತ ಆರ್.ಜಯಕುಮಾರ್ ಸಂಪಾದಕತ್ವದ “ತುಳು-ಕೊಡವ ಭಾಷೆಗಳ ಅಳಿವು ಉಳಿವು” ಪುಸ್ತಕ ಬಿಡುಗಡೆ ಕಾರ್ಯಕ್ರಮವು ಜ.20 ರಂದು ಮಡಿಕೇರಿಯಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 10.30ಕ್ಕೆ ನಗರದ ಮಯೂರ ವ್ಯಾಲಿವ್ಯೂ ಸಭಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಂಸದ ಬಿ.ಕೆ.ಹರಿಪ್ರಾಸದ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಸರಾಂತ ನ್ಯಾಯವಾದಿ ಮತ್ತು ಸಾಹಿತಿ ಕೆ.ಪಿ.ಬಾಲಸುಬ್ರಹ್ಮಣ್ಯ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಕೊಡವ, ಸುಪ್ರಿಂ ಕೋರ್ಟ್ ನ್ಯಾಯವಾದಿಗಳು ಮತ್ತು ಅಂಕಣಕಾರ ಪಿ.ಬ್ರಿಜೇಶ್ ಕಾಳಪ್ಪ, ಹಿರಿಯ ಪತ್ರಕರ್ತರು ಹಾಗೂ ಕೃತಿ ಸಂಪದಾಕ ಆರ್.ಜಯಕುಮಾರ್ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ತುಳು ಮತ್ತು ಕೊಡವ ಭಾಷೆಗಳನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಕುರಿತು ವಿಷಯ ಪ್ರಸ್ತಾಪಿಸಲಾಗುವುದು.