ಸೋಮವಾರಪೇಟೆ : ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಬೇಕು

15/01/2022

ಸೋಮವಾರಪೇಟೆ ಜ.15 : ವಿದ್ಯಾರ್ಥಿಗಳು ಸೇವಾ ಮನೋಭಾವ ಹಾಗೂ ಶಿಸ್ತನ್ನು ರೂಢಿಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಗಳಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿದೆಯೆಂದು ಮಾಜಿ ಸೈನಿಕ ಹಾಗೂ ತರಬೇತುದಾರ ಚಂದ್ರಕುಮಾರ್ ಹೇಳಿದರು.
ಸಂತಜೋಸೆಫರ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗು ಹಯೂತ್ ರೆಡ್ ಕ್ರಾಸ್ ಘಟಕಗಳ ವತಿಯಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪಾಠದೊಂದಿಗೆ ಪಠ್ಯೇತರ ಚಟುವಟಿಗಳಲ್ಲೂ ಲವಲವಿಕೆಯಿಂದ ತೊಡಗಿಸಿಕೊಂಡರೆ ಮಾತ್ರ ದೈಹಿಕ ಹಾಗೂ ಮಾನಸಿಕವಾಗಿ ಸದೃಢ ಸಾಧ್ಯವೆಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಸಂತಜೋಸೆಫ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ಫಾದರ್ ಎಂ.ರಾಯಪ್ಪ ಅವರು ಘಟಕಗಳ ಸ್ವಯಂಸೇವಕ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಭೋಧಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಪಿ.ಜೆ.ಜಸ್ಟಿನ್ ಸ್ವಯಂಸೇವಕರಿಗೆ ಬ್ಯಾಡ್ಜ್ಗಳನ್ನು ತೊಡಿಸಿ ಶುಭ ಹಾರೈಸಿದರು.
ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಆನಂದ್,ಯೂತ್ ರೆಡ್‌ಕ್ರಾಸ್ ಘಟಕದ ಬಿ.ಆರ್,ಹರೀಶ್, ಸಹ ಅಧಿಕಾರಿಗಳಾದ ವಿಂಧ್ಯಾ, ಶಿವಕುಮಾರ್ ಹಾಗೂ ಉಪನ್ಯಾಸಕರು ಇದ್ದರು.