ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 1492

20/01/2022

ಮಡಿಕೇರಿ ಜ.20 :  ಜಿಲ್ಲೆಯಲ್ಲಿ ಗುರುವಾರ 416  ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು,  1492 ಸಕ್ರಿಯ ಪ್ರಕರಣಗಳು ವರದಿಯಾಗಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 37,678 ಆಗಿದ್ದು, ಒಟ್ಟು 35,748 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 438 ಮರಣ ಪ್ರಕರಣಗಳು ವರದಿಯಾಗಿದೆ.  ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 187 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.9.67 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.