ಕೊಡಗಿನ ವಿವಿಧೆಡೆ ಗಾಳಿ ಮಳೆ : ಭಾಗಮಂಡಲ-ತಲಕಾವೇರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಗಾತ್ರದ ಬಂಡೆ

05/07/2022

ಮಡಿಕೇರಿ ಜು.5 : ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಹಾನಿಯಾಗಿದೆ.  ಮಳೆಯ ಆರ್ಭಟಕ್ಕೆ ಮರ, ವಿದ್ಯುತ್ ಕಂಬಗಳು, ಬಂಡೆಗಳು ಧರೆಗುರುಳುತ್ತಿದ್ದು, ಬರೆಗಳು ಕುಸಿಯುತ್ತಿವೆ. ಭಾಗಮಂಡಲ – ತಲಕಾವೇರಿ ರಸ್ತೆ ಗೆ ಬಂಡೆಯೊಂದು ಉರುಳಿ ಬಿದ್ದಿದ್ದು, ಕಂದಾಯ ಇಲಾಖೆ ಸಿಬ್ಬಂದಿಗಳು ಮತ್ತು ಗ್ರಾಮಸ್ಥರ ಸಹಾಯ ಪಡೆದು ಬಂಡೆಯನ್ನು ತೆರವುಗೊಳಿಸಲಾಯಿತು.  ಮೊಣ್ಣಂಗೇರಿ ಬಳಿ ಹೆದ್ದಾರಿಯಲ್ಲಿ  ವಿದ್ಯುತ್ ಕಂಬಗಳು ಧರೆಗುರುಳಿವೆ. ಭಾಗಮಂಡಲ ಹೋಬಳಿ ಚೇರಂಗಾಲ ಗ್ರಾಮದ ಲೋಕಪ್ರಕಾಶ್ ಅವರ ಮನೆಯ ಬಳಿ ಬರೆ ಕುಸಿದಿದ್ದು,  ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.