ಪ್ರಧಾನಿ ನರೇಂದ್ರ ಮೋದಿ ಜನ್ಮದಿನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರಿಂದ ಶುಭಾಶಯ

17/09/2022

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ 72 ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಶುಭಕೋರಿದ್ದಾರೆ. ಪ್ರಧಾನಿ ಜನ್ಮದಿನದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಿಂದಲೂ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ  ಸೇರಿದಂತೆ ಅನೇಕ ಗಣ್ಯರು ಶುಭಾಶಯಕೋರಿದ್ದಾರೆ.