ನ್ಯಾಯ ಸಿಗಲಿಲ್ಲವೆಂದು ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಸಾಲುಮರದ ವೀರಾಚಾರಿ

20/09/2022

ದಾವಣಗೆರೆ ಸೆ.20 : ನ್ಯಾಯ ಬೆಲೆ ಅಂಗಡಿಯೊoದರಿoದ ಜನರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಹೋರಾಟ ನಡೆಸುತ್ತಿದ್ದ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಪರಿಸರ ಪ್ರೇಮಿಯೊಬ್ಬರು ನ್ಯಾಯ ಸಿಗಲಿಲ್ಲವೆಂದು ನೊಂದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಮೂರು ಸಾವಿರಕ್ಕೂ ಅಧಿಕ ಮರಗಳನ್ನು ನೆಟ್ಟು ಬೆಳೆಸಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಲುಮರದ ವೀರಾಚಾರಿ(68) ಆತ್ಮಹತ್ಯೆಗೆ ಶರಣಾದ ಪರಿಸರ ಪ್ರೇಮಿ. ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಅನ್ಯಾಯವಾಗುತ್ತಿದೆ, ಜನರ ಪರವಾಗಿ ಹೋರಾಟ ನಡೆಸುತ್ತಿದ್ದೇನೆ. ಒಂದು ವೇಳೆ ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವೀರಾಚಾರಿ ಈ ಹಿಂದೆಯೇ ಹೇಳಿದ್ದರಂತೆ.
ಇಂದು ಮಿಟ್ಲಕಟ್ಟೆ ಗ್ರಾಮದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಕುರಿತು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.