13,133 ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಿದ ಸರ್ಕಾರ

20/09/2022

ಬೆಂಗಳೂರು ಸೆ.20 : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 13,133 ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಮೂಲಕ ಸರ್ಕಾರಿ ನೌಕರರೆಂದು ಸರ್ಕಾರ ಪರಿಗಣಿಸಿದೆ.
ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಗರಸಭೆಯ 5,533 ಮತ್ತು ಪುರಸಭೆಗಳ 3,673 ಪೌರ ಕಾರ್ಮಿಕರ ಸೇವೆ ಖಾಯಂಗೊಳ್ಳಲಿದೆ.
13,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಈ ನೌಕರರು ಪ್ರಸ್ತುತ 17,000-28,980 ರೂ. ವೇತನ ಶ್ರೇಣಿ ಹೊಂದಿರುತ್ತಾರೆ.