ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ

22/09/2022

ಮಡಿಕೇರಿ ಸೆ.22 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಸೆಪ್ಟೆಂಬರ್, 26 ರಂದು ಸೋಮವಾರಪೇಟೆ ತಾಲ್ಲೂಕು ಕಚೇರಿ ಆವರಣ, ಸೆಪ್ಟೆಂಬರ್, 27 ರಂದು ಕುಶಾಲನಗರ ಪ್ರವಾಸಿ ಮಂದಿರ, ಸೆಪ್ಟೆಂಬರ್, 28 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ, ಸೆಪ್ಟೆಂಬರ್, 29 ರಂದು ಪೊನ್ನಂಪೇಟೆ ಪ್ರವಾಸಿ ಮಂದಿರ ಮತ್ತು ಸೆಪ್ಟೆಂಬರ್, 30 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಲಂಚದ ಹಣಕ್ಕೆ ಬೇಡಿಕೆ ಇಡುವ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ದ ಮಾಹಿತಿ ನೀಡಬಹುದು.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ, ಮಡಿಕೇರಿ-08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.