ಅನೇಕ ರೋಗಗಳಿಗೆ ಒಣ ಶುಂಠಿ ರಾಮಬಾಣ

14/10/2022

ಶುಂಠಿಯು ಆಯುರ್ವೇದದಲ್ಲಿ ತನ್ನದೇ ಆದ ಪ್ರಾಮುಖ್ಯತೆಯನ್ನು ಪಡೆದಿದೆ.  ಒಣ ಶುಂಠಿಯು ಹಸಿ ಶುಂಠಿಯಷ್ಟೇ ಪ್ರಾಮುಖ್ಯೆತಯೆನ್ನು ಪಡೆದಿದ್ದು, ಅನೇಕ ರೋಗಗಳಿಗೆ ರಾಮಬಾಣವಾಗಿದೆ.  ಮಲಬದ್ಧತೆಯ ಸಮಸ್ಯೆಯ ಜೊತೆಗೆ ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಒಣ ಶುಂಠಿಯನ್ನು ಪ್ರತಿನಿತ್ಯ ಸೇವಿಸುವುದರಿಂದ ದೇಹದ ಆರೋಗ್ಯ ಹೆಚ್ಚುವುದನ್ನು  ಸುಲಭವಾಗಿ ಕಂಡುಕೊಳ್ಳಬಹುದು.

ಒಣ ಶುಂಠಿ ದೇಹದ ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ ಮತ್ತು ರಕ್ತದಲ್ಲಿನ ಗ್ಲೂಕೋಸ್ ಪ್ರಮಾಣವನ್ನು ನಿಯಂತ್ರಿಸುತ್ತದೆ. ಒಣ ಶುಂಠಿ ಜೀರ್ಣಕ್ರಿಯೆಯನ್ನು ಸುಧಾರಿಸುವ ಮೂಲಕ ತೂಕ ಇಳಿಸಲು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ಹಸಿವು ಕಡಿಮೆಯಾಗುತ್ತದೆ, ಇದರಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತದೆ.

ಪಿರಿಯಡ್ಸ್ ಸಮಯದಲ್ಲಿ ಹೊಟ್ಟೆ ನೋವು ಹಾಗೂ ದೇಹದ ನೋವನ್ನು ನಿವಾರಿಸುತ್ತದೆ. ಇದಲ್ಲದೆ ಒಣ ಶುಂಠಿಯ ಸೇವನೆಯು ಹೊಟ್ಟೆಯನ್ನು ಶುದ್ಧೀಕರಿಸಲು ಮತ್ತು ದೇಹಕ್ಕೆ ಶಕ್ತಿಯನ್ನು ಒದಗಿಸಲು ಸಹಾಯ ಮಾಡುತ್ತದೆ.

ದೀರ್ಘಕಾಲದ ಅಜೀರ್ಣದಿಂದಾಗಿ ಹೊಟ್ಟೆ ನೋವು ಮತ್ತು ಕಿಬ್ಬೊಟ್ಟೆಯ ಅಸ್ವಸ್ಥತೆಯನ್ನು ನಿವಾರಿಸುತ್ತದೆ. ಒಣ ಶುಂಠಿಯ ಪುಡಿ (Dry Ginger Powder)ಈ ಸಮಸ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಕೆಟ್ಟ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೆಚ್ಚಿನ ಮಟ್ಟದ ಎಲ್ಡಿಎಲ್ ಲಿಪೊಪ್ರೋಟೀನ್ ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಈ ಸಮಯದಲ್ಲಿ ಒಣ ಶುಂಠಿ ಸೇವಿಸಿದರೆ ನಿಮ್ಮ ಸಮಸ್ಯೆಯಿಂದ ದೂರವಾಗಬಹುದು.