Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»“ನಾಡ ಪೆದ ಆಶಾ” ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟನೆಗೆ ಪ್ರಕಾಶ್ ಹಾಗೂ ಅಯ್ಯಪ್ಪಗೆ ಪ್ರಶಸ್ತಿಯ ಗರಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

“ನಾಡ ಪೆದ ಆಶಾ” ಅತ್ಯುತ್ತಮ ಚಿತ್ರ, ಅತ್ಯುತ್ತಮ ನಟನೆಗೆ ಪ್ರಕಾಶ್ ಹಾಗೂ ಅಯ್ಯಪ್ಪಗೆ ಪ್ರಶಸ್ತಿಯ ಗರಿ

ಜನವರಿ 1, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.1 : ಪ್ರಶಸ್ತಿ ವಿಜೇತ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ “ನಾಡ ಪೆದ ಆಶಾ” ಕೊಡವ ಚಿತ್ರಕ್ಕೆ ಸೌತ್ ಇಂಡಿಯನ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ ದೊರೆತ್ತಿದೆ.
ಈ ಚಿತ್ರದ ನಟನೆಗಾಗಿ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಹಾಗೂ ನಾಯಕ ನಟ ಬೊಳ್ಳಜಿರ ಬಿ.ಅಯ್ಯಪ್ಪ ಅವರುಗಳಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ.
ಫಿಲಂ ಫೆಸ್ಟಿವಲ್ ಗೆ 11,520 ಚಿತ್ರಗಳು ಬಂದಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ 630 ಚಿತ್ರಗಳಲ್ಲಿ “ನಾಡ ಪೆದ ಆಶಾ” ಕೂಡ ಒಂದು. ಚಿತ್ರ ಪ್ರದರ್ಶನಗೊಳ್ಳುವ ಮೂಲಕ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸ್ತ್ರೀ ಪ್ರಧಾನ ಕಥಾವಸ್ತುವಿನ “ನಾಡ ಪೆದ ಆಶಾ” 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಗೊಂಡು ಕೊಡಗು ಜಿಲ್ಲೆಯಾದ್ಯಂತ 123 ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ.
ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ನಡೆದ ಅಂತರರಾಷ್ಟ್ರೀಯ ಚಲಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ “ನಾಡ ಪೆದ ಆಶಾ” ಕೊಡವ ಚಿತ್ರ ಇಲ್ಲಿಯವರೆಗೆ ಒಟ್ಟು 10 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.
ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ನಿರ್ದೇಶನದ, ವಿಕೆ3 ಪಿಕ್ಚರ್ಸ್ ಬ್ಯಾನರಿನಡಿ ಈರಮಂಡ ಹರಿಣಿ ವಿಜಯ್ ಹಾಗೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣದ ಚಿತ್ರ ಇದಾಗಿದ್ದು, ಹಿರಿಯ ಸಾಹಿತಿ ನಾಗೇಶ್ ಕಾಲೂರು ಅವರ ಕಾದಂಬರಿಯನ್ನು ಆಧರಿಸಿ ಚಿತ್ರಿಸಲಾಗಿದೆ.
ಚಿತ್ರದಲ್ಲಿ ಬೊಳ್ಳಜಿರ ಬಿ.ಅಯ್ಯಪ್ಪ ನಾಯಕ ನಟರಾಗಿ ಅಭಿನಯಿಸಿದ್ದು, ನೆಲ್ಲಚಂಡ ರಿಷಿ ಪೂವಮ್ಮ, ಅಡ್ಡಂಡ ಅನಿತಾ ಕಾರ್ಯಪ್ಪ, ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ವಾಂಚಿರ ವಿಠಲ್ ನಾಣಯ್ಯ, ಚೇರುವಾಳಂಡ ಸುಜಲ ನಾಣಯ್ಯ, ಈರಮಂಡ ಹರಿಣಿ ವಿಜಯ್, ಕುಶಿ ಕಾವೇರಮ್ಮ, ಕೇಸರಿ ಬೋಜಮ್ಮ, ಕೊಟ್ಟುಕತ್ತೀರ ಆರ್ಯ ದೇವಯ್ಯ, ಮಾಚಂಗಡ ಶರತ್ ಮುಖ್ಯ ಭೂಮಿಕೆಯಲ್ಲಿದ್ದಾರೆ.
ಸಾಲು ಸಾಲು ಪ್ರಶಸ್ತಿಗಳು ದೊರೆಯುತ್ತಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಇಡೀ ಚಿತ್ರ ತಂಡದ ಶ್ರಮದ ಫಲವಾಗಿ ಪ್ರಶಸ್ತಿಗಳು ಬರುತ್ತಿದೆ ಎಂದರು.
ಮತ್ತಷ್ಟು ಉತ್ತಮ ಚಿತ್ರಗಳನ್ನು ನಿರ್ದೇಶಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಅತ್ಯುತ್ತಮ ನಟ ಪ್ರಶಸ್ತಿ ವಿಜೇತ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ ನಟಿಸಲು ಅವಕಾಶ ಕಲ್ಪಿಸಿದ ಚಿತ್ರತಂಡಕ್ಕೆ ಕೃತಜ್ಞತೆ ಸಲ್ಲಿಸಿದರು. ಇನ್ನು ಮುಂದೆಯೂ ಉತ್ತಮ ಚಿತ್ರಗಳಲ್ಲಿ ಅಭಿನಯಿಸಲು ಈ ಪ್ರಶಸ್ತಿ ಪ್ರೋತ್ಸಾಹವನ್ನು ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 14: ಕೊಡಗು ಜಿಲ್ಲೆಯ ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರನ್ನು ಪತ್ತೆಹಚ್ಚಲಾಗಿದೆ ಎಂದು ಕೊಡಗು…

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026

ಕುಶಾಲನಗರದ ಬಸವೇಶ್ವರ ಬಡಾವಣೆಯಲ್ಲಿ ನವರಾತ್ರಿ ಹಬ್ಬದ ಸಂಭ್ರಮ

ಅಕ್ಟೋಬರ್ 14, 2026

ಶಾಸಕ ಎ.ಎಸ್.ಪೊನ್ನಣ್ಣ ಅವರ ವಿಶೇಷ ಕಾಳಜಿ : ದಬ್ಬಡ್ಕದಲ್ಲಿ ವಿದ್ಯುತ್ ವಂಚಿತ ಮನೆಗಳಿಗೆ ಸೌರ ವಿದ್ಯುತ್ ಅಳವಡಿಕೆ ಆರಂಭ

ಅಕ್ಟೋಬರ್ 14, 2026

ಭಾರತದ ಆರ್ಥಿಕತೆಯಲ್ಲಿ ಬ್ಯಾಂಕ್ ಹಾಗೂ ವಿಮೆ ಪ್ರಮುಖ ಪಾತ್ರ ವಹಿಸುತ್ತವೆ: ಡಾ. ಕೆ.ಸಿ. ದಯಾನಂದ

ಅಕ್ಟೋಬರ್ 14, 2026

ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿನಿಯರಿಗೆ ಸನ್ಮಾನ

ಅಕ್ಟೋಬರ್ 14, 2026

ಸರ್ಫೇಸಿ ಕಾಯ್ದೆ ವಿರುದ್ಧ ಕಾನೂನು ಹೋರಾಟ ಅಗತ್ಯ: ಡಾ. ಕಾವೇರಪ್ಪ; ಕರ್ನಾಟಕ ಹೈಕೋರ್ಟ್‌ನಲ್ಲಿ ಹೋರಾಟ ನಡೆಸಲು ಕಾಫಿ ಮಂಡಳಿ ಮಾಜಿ ಉಪಾಧ್ಯಕ್ಷರ ಆಗ್ರಹ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.