ಮಡಿಕೇರಿ ಜ.2 : ಮಡಿಕೇರಿ-ವಿರಾಜಪೇಟೆ 66 ಕೆವಿ ವಿದ್ಯುತ್ ಮಾರ್ಗದ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಬೃಹತ್ ಕಾಮಗಾರಿ ವಿಭಾಗ ಕೊಡಗು ಜಿಲ್ಲೆ ಕ.ವಿ.ಪ್ರ.ನಿ.ನಿ. ಮೈಸೂರು ಅವರ ಕೋರಿಕೆಯಂತೆ ಜನವರಿ, 3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 33 ಕೆವಿ ವಿರಾಜಪೇಟೆ-ಮೂರ್ನಾಡು ಮಾರ್ಗದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಪಾರಾಣೆ, ಮೂರ್ನಾಡು, ನಾಪೋಕ್ಲು, ಹೊದ್ದೂರು, ಮರಗೋಡು, ಬೇತು, ಕಕ್ಕಬೆ, ನೆಲಜಿ, ಹಾಕತ್ತೂರು, ಕಾಂತೂರು, ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಅವರು ಕೋರಿದ್ದಾರೆ.
















