Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
  • *ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*
  • *ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
  • *ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*
  • *ಅರೆಭಾಷೆ ಅಕಾಡೆಮಿಯಿಂದ ವಿಟ್ಲದಲ್ಲಿ ವಿಜೃಂಭಿಸಿದ ಆಟಿಲೊಂದು ದಿನ*
  • *ಕಾರ್ಗಿಲ್ ದಿನಾಚರಣೆ : 143 ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಯೋಧರಿಗೆ ಗೌರವಾರ್ಪಣೆ*
  • *ಕೊಡಗು : ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಸಮಾಧಿ ನಿರ್ಮಾಣ : ಹಿಂದೂ ಸಂಘಟನೆಗಳಿದ ಬೃಹತ್ ಪ್ರತಿಭಟನೆ : ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ : ಒಪಿಎಸ್ ಜಾರಿಗೆ ಮುಖ್ಯಮಂತ್ರಿ ಅವರ ಜತೆ ಚರ್ಚೆ : ಶಾಸಕ ಅಪ್ಪಚ್ಚು ರಂಜನ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ : ಒಪಿಎಸ್ ಜಾರಿಗೆ ಮುಖ್ಯಮಂತ್ರಿ ಅವರ ಜತೆ ಚರ್ಚೆ : ಶಾಸಕ ಅಪ್ಪಚ್ಚು ರಂಜನ್

ಜನವರಿ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.3 : 2006ರ ಏಪ್ರಿಲ್ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ‘ಹಳೆ ಪಿಂಚಣಿ ಯೋಜನೆ’(ಒಪಿಎಸ್) ಜಾರಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತೊಮ್ಮೆ ಸಿಎಂ ಅವರ ಜತೆ ಸಮಾಲೋಚನೆ ನಡೆಸಿದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಯಾಗಬಹುದು ಎಂದು ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿಂದೆ ಸರ್ಕಾರಿ ನೌಕರರಿಗೆ ಇದ್ದ ಹಳೆ ಪಿಂಚಣಿ ಯೋಜನೆಯನ್ನು ಮುಂದುವರಿಸುವಂತಾಗಬೇಕು. ಸರ್ಕಾರಿ ನೌಕರರು ನೆಮ್ಮದಿಯಿಂದ ನಿವೃತ್ತಿ ಜೀವನ ನಡೆಸುವಂತಾಗಬೇಕು. ನಿವೃತ್ತಿ ಸಂದರ್ಭದಲ್ಲಿ ಆರೋಗ್ಯ ಅತೀ ಮುಖ್ಯವಾಗಿದ್ದು, ಆ ಸಂದರ್ಭದಲ್ಲಿ ಪಿಂಚಣಿ ಅತ್ಯಗತ್ಯವಾಗಿದೆ. ಆದ್ದರಿಂದ ಎನ್‍ಪಿಎಸ್ ಬದಲಾಗಿ ಒಪಿಎಸ್ ಜಾರಿ ಆಗಬೇಕು ಎಂದು ಹೇಳಿದರು.
ಕೊಡಗು ಜಿಲ್ಲೆ ಸೈನಿಕರು ಮತ್ತು ಕ್ರೀಡಾಪಟುಗಳ ನಾಡು. ಜಿಲ್ಲೆಯಲ್ಲಿ ಹೆಚ್ಚಿನ ಸೈನಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಕಿ, ಕ್ರಿಕೆಟ್, ಅಥ್ಲೆಟಿಕ್ಸ್ ಹೀಗೆ ಹಲವು ಕ್ರೀಡೆಯಲ್ಲಿ ಪಾಲ್ಗೊಂಡು ಹೆಸರು ಗಳಿಸಿದ್ದಾರೆ. ಆ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡು ಮತ್ತಷ್ಟು ಹೆಸರು ತರುವಂತಾಗಬೇಕು ಎಂದರು.
ಸರ್ಕಾರಿ ನೌಕರರು ಪ್ರತೀ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಾರೆ. ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಒಂದು ರೀತಿ ಕ್ರಿಯಾಶೀಲ ಚಟುವಟಿಕೆಗೆ ಸಹಕಾರಿಯಾಗಲಿದೆ ಎಂದು ಅಪ್ಪಚ್ಚು ರಂಜನ್ ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ ಸರ್ಕಾರಿ ನೌಕರರ ಚಲನಶೀಲತೆಗೆ ಕ್ರೀಡಾಚಟುವಟಿಕೆ ಸಹಕಾರಿಯಾಗಲಿದೆ. ಇದರಿಂದ ಉತ್ಸಾಹ ಹೆಚ್ಚಲಿದೆ ಎಂದರು.
ಪೌರಾಯುಕ್ತರಾದ ವಿಜಯ ಅವರು ಮಾತನಾಡಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಸ್ಪೂರ್ತಿ ಮತ್ತು ಲವಲವಿಕೆ ದೊರೆಯುತ್ತದೆ ಎಂದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ ಅವರು ಮಾತನಾಡಿ ಎನ್‍ಪಿಎಸ್ ರದ್ದುಗೊಳಿಸಿ, ಒಪಿಎಸ್‍ನ್ನು ಜಾರಿಗೊಳಿಸಬೇಕು ಎಂದು ಅವರು ಕೋರಿದರು. ಎನ್‍ಪಿಎಸ್‍ನಿಂದ ಅನೇಕ ಗೊಂದಲವಿದೆ. ನಿವೃತ್ತಿ ನಂತರ ನೌಕರರ ಜೀವನ ಕಷ್ಟಸಾಧ್ಯವಾಗಲಿದೆ. ಆ ನಿಟ್ಟಿನಲ್ಲಿ ಎಲ್ಲರೂ ಸರ್ಕಾರಿ ನೌಕರರಿಗೆ ಸಹಕರಿಸಬೇಕು ಎಂದರು.
ಮಡಿಕೇರಿ ನಗರದಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ 40 ಸೆಂಟ್ ಜಾಗ ನೀಡಲಾಗಿದೆ. ಭವನ ನಿರ್ಮಾಣ ಸಂಬಂಧ ಹೆಚ್ಚಿನ ಅನುದಾನ ನೀಡಬೇಕು ಎಂದು ಶಾಸಕರಲ್ಲಿ ಕೋರಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಮಾತನಾಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಗುರುರಾಜ್ (ವಿರಾಜಪೇಟೆ), ಪ್ರದೀಪ್(ಸೋಮವಾರಪೇಟೆ), ಗೌರವ ಅಧ್ಯಕ್ಷರಾದ ಶಿವಕುಮಾರ್, ಮಂಜುನಾಥ್, ಕುಮಾರ, ಶಮ್ಮಿ, ಅನಿತಾ, ಇತರರು ಇದ್ದರು. ನಿರ್ಮಲ ಅವರು ಕ್ರೀಡಾ ಪ್ರತಿಜ್ಞಾ ವಿಧಿ ಭೋದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ NEWS DESK ಜು.29 : ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ…

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 2026

*ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*

ಜುಲೈ 27, 2026

*ಅರೆಭಾಷೆ ಅಕಾಡೆಮಿಯಿಂದ ವಿಟ್ಲದಲ್ಲಿ ವಿಜೃಂಭಿಸಿದ ಆಟಿಲೊಂದು ದಿನ*

ಜುಲೈ 27, 2026

*ಕಾರ್ಗಿಲ್ ದಿನಾಚರಣೆ : 143 ಸಂಘ ಸಂಸ್ಥೆಗಳಿಂದ ಮಡಿಕೇರಿಯಲ್ಲಿ ಯೋಧರಿಗೆ ಗೌರವಾರ್ಪಣೆ*

ಜುಲೈ 27, 2026

*ಕೊಡಗು : ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಸಮಾಧಿ ನಿರ್ಮಾಣ : ಹಿಂದೂ ಸಂಘಟನೆಗಳಿದ ಬೃಹತ್ ಪ್ರತಿಭಟನೆ : ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ*

ಜುಲೈ 27, 2026

*ಇಗ್ಗುತ್ತಪ್ಪ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.