Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಜವಾಹರ್ ನವೋದಯ ವಿದ್ಯಾಲಯ : 5ನೇ ತರಗತಿ ವಿದ್ಯಾರ್ಥಿಗಳು ಸುವರ್ಣ ಅವಕಾಶ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜವಾಹರ್ ನವೋದಯ ವಿದ್ಯಾಲಯ : 5ನೇ ತರಗತಿ ವಿದ್ಯಾರ್ಥಿಗಳು ಸುವರ್ಣ ಅವಕಾಶ ಬಳಸಿಕೊಳ್ಳಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಕರೆ

ಜನವರಿ 7, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.7 : ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಮಾಡಿದ್ದು, 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಕೋರಿದ್ದಾರೆ.
ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಜವಾಹರ್ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ  ಮಾಹಿತಿ ನೀಡಿದರು.
ನವೋದಯ ವಿದ್ಯಾಲಯವು ಸರ್ಕಾರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದ್ದು, ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶವಿದೆ. ಆದ್ದರಿಂದ ಈ ಪರೀಕ್ಷೆ ಬರೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಸಲು ಜನವರಿ, 31 ಕೊನೆಯ ದಿನವಾಗಿದೆ. ಈ ಅವಕಾಶವನ್ನು 5ನೇ ತರಗತಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಬಳಸಿಕೊಳ್ಳುವಂತಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಈಗಿನಿಂದಲೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು.
ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಆಯಾಯ ಜಿಲ್ಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶವಿದೆ. ಆ ನಿಟ್ಟಿನಲ್ಲಿ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮದಲ್ಲಿರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 80 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿದ್ದು, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
‘ಜವಾಹರ್ ನವೋದಯ ವಿದ್ಯಾಲಯ 6 ನೇ ತರಗತಿ ಪ್ರವೇಶ ಪರೀಕ್ಷೆ ಎದುರಿಸುವದರಿಂದ, ಅಂಬೇಡ್ಕರ್, ಏಕಲವ್ಯ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಕನಕದಾಸ, ನಾರಾಯಣಗುರು ಹೀಗೆ ರಾಜ್ಯದ ಹಲವು ವಸತಿ ಶಾಲೆಗಳ ಪ್ರವೇಶಕ್ಕೂ ಅನುಕೂಲವಾಗಲಿದೆ. ಆ ನಿಟ್ಟಿನಲ್ಲಿ ಗ್ರಾಮೀಣ ಬಡ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು. ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವುದರಿಂದ ಭವಿಷ್ಯದಲ್ಲಿ ನೀಟ್, ಸಿಇಟಿ, ಜೆಇಇ ಹೀಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಒತ್ತಿ ಹೇಳಿದರು.’
ಜವಾಹರ್ ನವೋದಯ ವಿದ್ಯಾಲಯ 2023-24 ನೇ ಸಾಲಿಗೆ 6 ನೇ ತರಗತಿ ಪ್ರವೇಶ ಪರೀಕ್ಷೆಯು ಏಪ್ರಿಲ್, 29 ರಂದು ನಡೆಯಲಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದಂತೆ ಮೀಸಲಾತಿ ಇದೆ. ಕನಿಷ್ಠ 1/3 ಸ್ಥಾನಗಳು ಬಾಲಕಿಯರಿಗೆ ಮೀಸಲಾಗಿದೆ. ಕನಿಷ್ಠ 75 ಸ್ಥಾನಗಳನ್ನು ಆಯಾಯ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ನವೋದಯ ವಿದ್ಯಾಲಯದಲ್ಲಿ ಸಹ ಶಿಕ್ಷಣ ವಸತಿ ಶಾಲೆಗಳು, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯಗಳು, ಊಟ ಮತ್ತು ವಸತಿ ಸೌಲಭ್ಯ, ವಲಸೆ ನೀತಿಯ ಮುಖಾಂತರ ವಿಶಾಲ ಸಾಂಸ್ಕøತಿಕ ವಿನಿಮಯ, ಕ್ರೀಡೆ ಮತ್ತು ಆಟೋಟಗಳಿಗೆ ಉತ್ತೇಜನ, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್‍ಎಸ್‍ಎಸ್ ಹೀಗೆ ಹಲವು ಸೌಲಭ್ಯ ಒಳಗೊಂಡಿದೆ ಎಂದು ಡಾ.ಬಿ.ಸಿ.ಸತೀಶ ಅವರು ವಿವರಿಸಿದರು.
ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ಮಾಹಿತಿ ನೀಡಿ ನವೋದಯ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಜೆಇಇ ವಿಭಾಗದಲ್ಲಿ ಶೇ.56.6 ರಷ್ಟು, ನೀಟ್ ಪರೀಕ್ಷೆಯಲ್ಲಿ ಶೇ.78 ರಷ್ಟು ಸಾಧನೆ ಮಾಡಿದ್ದಾರೆ ಎಂದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು, 3 ಮತ್ತು 4 ನೇ ತರಗತಿಯಲ್ಲಿ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಓದಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಹಾಗೂ 2011 ರ ಮೇ, 1 ರಿಂದ 2013 ರ ಏಪ್ರಿಲ್, 30, 2013 ರೊಳಗೆ ಜನಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಎಂದು ತಿಳಿಸಿದರು.
ಅರ್ಜಿದಾರರು ಕೊಡಗು ಜಿಲ್ಲೆಯವರಾಗಿರಬೇಕು. ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವವರು ಅರ್ಜಿ ಸಲ್ಲಿಸಬಹುದು ಎಂದು ಪ್ರಾಂಶುಪಾಲರು ಹೇಳಿದರು.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ವಿದ್ಯಾರ್ಥಿ ಆಧಾರ್ ಕಾರ್ಡ್‍ಗೆ ಪೋನ್ ನಂಬರ್ ಲಿಂಕ್ ಆಗಿರಬೇಕು. ತಹಶೀಲ್ದಾರ್‍ರಿಂದ ವಾಸಸ್ಥಳ ದೃಢೀಕರಣ ಪತ್ರ ಪಡೆದಿರಬೇಕು. ವಿದ್ಯಾರ್ಥಿಯ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿ ವಿದ್ಯಾರ್ಥಿಯ ಹೆಸರು, ತಂದೆಯ ಹೆಸರು, ಲಿಂಗ ಮತ್ತು ವಾಸಸ್ಥಳವು ಶಾಲಾ ರಿಜಿಸ್ಟ್ರನಲ್ಲಿರುವಂತೆ ನಮೂದಿಸಬೇಕು. ತಾಳೆಯಾಗದಿದ್ದಲ್ಲಿ ಆಧಾರ್ ಕಾರ್ಡ್‍ನ್ನು ಸರಿಪಡಿಸಿಕೊಳ್ಳಬೇಕು. ಆಧಾರ್ ಕಾರ್ಡ್‍ನಲ್ಲಿರುವ ಮಾಹಿತಿಯು ಶಾಲಾ ರಿಜಿಸ್ಟ್ರರ್‍ಗೆ ಹೊಂದಾಣಿಕೆಯಾಗದಲ್ಲಿ ಆಧಾರ್ ಕಾರ್ಡ್‍ನ್ನು ಸರಿಪಡಿಸಿಕೊಳ್ಳಬೇಕು. ವಿದ್ಯಾರ್ಥಿಯು ಪರೀಕ್ಷೆಯನ್ನು ಯಾವ ಭಾಷೆಯಲ್ಲಿ ಬರೆಯುತ್ತಾರೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪ್ರಾಂಶುಪಾಲರು ತಿಳಿಸಿದರು.
ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್  https://navodaya.gov.in ಅಥವಾ cbseitms.rcil.gov.in/nvs     ಹಾಗೂ ಜವಾಹರ್ ನವೋದಯ ವಿದ್ಯಾಲಯದ ಕಚೇರಿ ಅಧೀಕ್ಷಕರಾದ ಕೆ.ರವಿ(9663883213), ದೈಹಿಕ ಶಿಕ್ಷಣ ಶಿಕ್ಷಕರಾದ ಅರುಣ್ ಕುಮಾರ್ (9901423273), ಜೆಎಸ್‍ಎ ಜನನಿ ಸಿ.ಆರ್.(7760898148) ನ್ನು ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ರಂಗಧಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎನ್.ಮಂಜುನಾಥ್, ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ದಿವಾಕರ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.