Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಸೋಮವಾರಪೇಟೆ ಕೆಡಿಪಿ ಸಭೆ : ಕಾಡಾನೆ ಉಪಟಳದ ವಿರುದ್ಧ ಪ್ರತಿಧ್ವನಿ
ಇತ್ತೀಚಿನ ಸುದ್ದಿಗಳು

ಸೋಮವಾರಪೇಟೆ ಕೆಡಿಪಿ ಸಭೆ : ಕಾಡಾನೆ ಉಪಟಳದ ವಿರುದ್ಧ ಪ್ರತಿಧ್ವನಿ

January 7, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸೋಮವಾರಪೇಟೆ ಜ.7 : ಮೀಸಲು ಅರಣ್ಯದ ಸರಹದ್ದಿನಲ್ಲಿ ಅರಣ್ಯ ಇಲಾಖೆಯ ವತಿಯಿಂದ ನಿರ್ಮಾಣವಾಗುತ್ತಿರುವ ರೈಲ್ವೆ ಬ್ಯಾರಿಕೇಡ್ ಅವೈಜ್ಞಾನಿಕವಾಗಿದ್ದು, ಕಾಡಾನೆಗಳು ಬ್ಯಾರಿಕೇಡ್‌ನಲ್ಲಿ ನುಸುಳಿ ಬರುತ್ತಿವೆ ಎಂದು ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್.ವಿಶ್ವ ಆರೋಪಿಸಿದರು.
ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕೆ.ಡಿಪಿ.ಸಭೆಯಲ್ಲಿ ಅವರು ಅರೋಪ ಮಾಡಿದರು. ಎ.ಸಿ.ರೂಂ ನಲ್ಲಿ ಕುಳಿತ ಅಧಿಕಾರಿಗಳು ಯೋಜನೆ ರೂಪಿಸುತ್ತಾರೆ. ಅಂತಹವರ ಅಸಡ್ಡೆಯಿಂದ ಸರ್ಕಾರದ ಕೋಟ್ಯಾಂತರ ರೂ. ಹಣ ಪೋಲಾಗುತ್ತದೆ ಎಂದ ಅವರು ಎರಡು ಪಟ್ಟಿಯ ರೈಲ್ವೆ ಬ್ಯಾರಿಕೇಡ್ ನಿರ್ಮಿಸುತ್ತಿದ್ದಾರೆ. ಈಗ ಕಾಡಾನೆಗಳು ಪಟ್ಟಿಯೊಳಗೆ ನುಗ್ಗಿ ಕೃಷಿ ಭೂಮಿಗೆ ಲಗ್ಗೆಯಿಡುತ್ತಿವೆ. ಇನ್ನಾದರೂ ಮೂರು ಪಟ್ಟಿಗಳನ್ನು ಅಳವಡಿಸುವಂತೆ ಆಗ್ರಹಿಸಿದರು.
ಸರ್ಕಾರದಿಂದ ಅನುಮೋದನೆಗೊಂಡ ಯೋಜನೆಯಾಗಿದ್ದು, ಈಗ ಬದಲಾಯಿಸಲು ಸಾಧ್ಯವಿಲ್ಲ. ಕಾಮಗಾರಿ ನಂತರ ಮತ್ತೊಂದು ಪಟ್ಟಿ ಅಳವಡಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಸಿಎಫ್ ಗೋಪಾಲ್ ಹೇಳಿದರು.
ಶಾಸಕರು ಮಾತನಾಡಿ, ರಾಜ್ಯದಲ್ಲಿ ಅತಿ ಕಡಿಮೆ ವಿದ್ಯುತ್ ಬಳಸುವ ಬಳಕೆದಾರರೆಂದರೆ ಕಾಫಿ ಬೆಳೆಗಾರರು. ಅವರ 10 ಎಚ್.ಪಿ. ವರೆಗಿನ ವಿದ್ಯುತ್ ಸಂಪರ್ಕವನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದ್ದು, ಕೊಡಗಿನ ಕಾಫಿ ಬೆಳೆಗಾರರ ವಿದ್ಯುತ್ ಬಿಲ್ ಬಾಕಿ 45 ಕೋಟಿ ರೂ. ಮಾತ್ರ ಬಾಕಿ ಉಳಿದಿದ್ದು, ಮನ್ನಾ ಮಾಡಲು ಸರ್ಕಾರ ಭರವಸೆ ನೀಡಿದ್ದು ಹಣಕಾಸು ಇಲಾಖೆಯ ಒಪ್ಪಿಗೆಗೆ ಕಳುಹಿಸಲಾಗಿದೆ. ರಾಜ್ಯದಲ್ಲಿ ಇತರೆ ಬೆಳೆಗಳ ಬೆಳೆಗಾರರ ವಿದ್ಯುತ್ ಬಿಲ್ ಸಾವಿರಾರು ಕೋಟಿ ಬಾಕಿ ಉಳಿದಿದೆ. ಆದುದ್ದರಿಂದ ಸರ್ಕಾರ ಉಚಿತ ವಿದ್ಯುತ್ ಘೋಷಣೆ ಮಾಡುವುದರಿಂದ ಕಾಫಿ ಬೆಳೆಗಾರರ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತ ಮಾಡಬಾರದೆಂದು ಸೆಸ್ಕ್ ಇಲಾಖೆಯ ಇಇ ಅಶೋಕ್‌ಗೆ ಸೂಚಿಸಿದರು.
ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಖಾಯಂ ಪಿಡಿಒಗಳು, ಡಾಟ ಆಪರೇಟರ್, ಬಿಲ್ ಕಲೆಕ್ಟರ್‌ಗಳಿಲ್ಲದೆ ಕೆಲಸ ಮಾಡಲು ಸಾಧ್ಯವೇ ಇಲ್ಲ. ಕಳೆದ ಎರಡು ವರ್ಷಗಳಿಂದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಖಾಯಂ ಪಿಡಿಒ ಗಾಗಿ ಲಿಖಿತ ಮನವಿ ಮಾಡಿಕೊಂಡರು ಕ್ರಮ ಕೈಗೊಂಡಿಲ್ಲ ಎಂದು ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಟಿ.ಪರಮೇಶ್ ಹೇಳಿದರು.
ದುಂಡಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಜಾಸ್ತಿಯಾಗಿದೆ. ಗ್ರಾಮದ ರಸ್ತೆಯಲ್ಲೇ ಓಡಾಡುತ್ತಿವೆ ಎಂದು ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯ÷ಕ್ಷೆ ಪೂರ್ಣಿಮಾ ಹೇಳಿದರು.
ಎರಡು ಹೆಣ್ಣಾನೆ ಮತ್ತು ಒಂದು ಮರಿಯಿದೆ. ಒಂದೆರಡು ದಿನದಲ್ಲಿ ಇನ್ನೊಂದು ಮರಿ ಹಾಕಲಿದೆ. ಈ ಸಂದರ್ಭದಲ್ಲಿ ಓಡಿಸಲು ಸಾಧ್ಯವಿಲ್ಲ. ಮರಿ ನಡೆಯಲು ಪ್ರಾರಂಭವಾದ ಮೇಲೆ ಕಾರ್ಯಚರಣೆ ನಡೆಸಿ ಕಾಡಿಗೆ ಅಟ್ಟಲು ಕ್ರಮಕ್ಯಗೊಳ್ಳಲಾಗುವುದು ಎಂದು ಶನಿವಾರಸಂತೆ ಆರ್‌ಎಫ್‌ಒ ಪ್ರಪುಲ್ ಶೆಟ್ಟಿ ಹೇಳಿದರು.
ಸಭೆಯಲ್ಲಿ ಸೋಮವಾರಪೇಟೆ ತಹಸೀಲ್ದಾರ್ ನರಗುಂದ್, ಕುಶಾಲನಗರ ತಹಸೀಲ್ದಾರ್ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ರಾಜ್‌ಗೋಪಾಲ್, ತಾಪಂ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Articleಗೋಣಿಕೊಪ್ಪಲಿನಲ್ಲಿ ಪ್ರೆಸ್‌ಕ್ಲಬ್‌ ಬೆಳ್ಳಿ ಮಹೋತ್ಸವಕ್ಕೆ ಚಾಲನೆ
Next Article ಒಕ್ಕಲಿಗರ ಪ್ರಗತಿಪರ ಮಹಿಳಾ ವೇದಿಕೆಯ ನೂತನ ಅಧ್ಯಕ್ಷರಾಗಿ ಪೂರ್ಣಿಮಾ ಗೋಪಾಲ್ ಆಯ್ಕೆ

Recommended: Website design development company services in Mangalore Forex Trading Teacher in India

Related Posts

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

ಕುಶಾಲನಗರ, NEWS DESK ಫೆ.12:ಸ್ವಚ್ಛ ಕೊಡಗು ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯೊಂದಿಗೆ ಆದ್ಯ ಕರ್ತವ್ಯವಾಗಿದೆ ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ…

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.