Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಹುಲಿ ಆತಂಕವಿದ್ದರೆ ಹಿಂಬದಿಗೆ ಮುಖವಾಡ ಧರಿಸಿ !
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹುಲಿ ಆತಂಕವಿದ್ದರೆ ಹಿಂಬದಿಗೆ ಮುಖವಾಡ ಧರಿಸಿ !

ಜನವರಿ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.9 : ‘ಹುಲಿ’ಗಳು ಎಂದಿಗೂ ಮನುಷ್ಯನ ಮೇಲೆ ಎದುರು ಭಾಗದಿಂದ ನೇರವಾಗಿ ದಾಳಿ ಮಾಡುವುದಿಲ್ಲ, ಬದಲಾಗಿ ಹಿಂಬದಿಯಿಂದ ದಾಳಿ ಮಾಡುತ್ತವೆ. ಇದರಿಂದ ಪಾರಾಗಲು ಪಶ್ಚಿಮ ಬಂಗಾಳದ ಸುಂದರ ಬನ್ ವ್ಯಾಪ್ತಿಯಲ್ಲಿ ತಲೆಯ ಹಿಂಭಾಗಕ್ಕೆ ‘ಮುಖವಾಡ’ವನ್ನು ಅಳವಡಿಸಿಕೊಳ್ಳುವ ತಂತ್ರಗಾರಿಕೆಯನ್ನು ಅನುಸರಿಸಲಾಗುತ್ತಿದ್ದು, ಇದು ಫಲಪ್ರದವಾಗಿದೆ. ಈ ಮಾದರಿ ಕೊಡಗು ಜಿಲ್ಲೆಯಲ್ಲೂ ಉಪಯುಕ್ತವಾಗಬಹುದು ಎಂದು ಪರಿಸರ ಮತ್ತು ಆರೋಗ್ಯ ಪ್ರತಿಷ್ಠಾನದ ಗೌರವ ಕಾರ್ಯದರ್ಶಿ ಕರ್ನಲ್ ಸಿ.ಪಿ. ಮುತ್ತಣ್ಣ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಬ್ರಹ್ಮಪುತ್ರ ನದಿ ಸಮುದ್ರವನ್ನು ಸೇರುವ ಸುಂದರಬನ್‍ನಲ್ಲಿ ಹುಲಿ ದಾಳಿಗೆ ಸಾಕಷ್ಟು ಮಂದಿ ಸಾವನ್ನಪ್ಪಿದ್ದು, ಅಲ್ಲಿ ಇದೀಗ ತಲೆಯ ಹಿಂಭಾಗಕ್ಕೆ ಅಳವಡಿಸುವ ಮುಖವಾಡ ಬಳಸಲಾಗುತ್ತಿದೆ. ಇದರಿಂದ ಹುಲಿ ದಾಳಿ ಪ್ರಕರಣಗಳು ಇಳಿಮುಖವಾಗಿದೆ. ಈ ಮುಖವಾಡ ಧರಿಸಿದಲ್ಲಿ, ದಾಳಿ ಮಾಡುವ ಹುಲಿಗೆ ವ್ಯಕ್ತಿಯ ಹಿಂಭಾಗದ ಮುಖವಾಡ ವ್ಯಕ್ತಿಯ ಮುಖದಂತೆ ಗೋಚರಿಸುವುದರಿಂದ ದಾಳಿಗೆ ಮುಂದಾಗುವುದಿಲ್ಲವೆಂದು ಗಮನ ಸೆಳೆದರು.
::: ಪ್ರಸ್ತಾವನೆ :::
ಕೊಡಗು ಜಿಲ್ಲೆಯ ದಕ್ಷಿಣ ಭಾಗದಲ್ಲಿ ಹುಲಿ ಹಾವಳಿ ಹೆಚ್ಚಾಗುತ್ತಿದ್ದು, ಈಗಾಗಲೆ 5 ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ರಬ್ಬರ್‍ನಿಂದ ಸಿದ್ಧಪಡಿಸಿದ ಮುಖವಾಡವನ್ನು ಬಳಸುವುದಕ್ಕೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ಮುತ್ತಣ್ಣ ಹೇಳಿದರು.
ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಸಾವನ್ನಪ್ಪಿದ ಪ್ರಕರಣಗಳನ್ನು ಗಮನಿಸಿದಾಗ ಬೆಳಗ್ಗಿನ ಜಾವ ಬಹಿರ್ದೆಸೆಗೆಂದು ತೆರಳಿದವರ ಮೇಲೆ ಹುಲಿ ಹಿಂಬದಿಯಿಂದ ದಾಳಿ ನಡೆಸಿ ಕೊಂದು ಹಾಕಿರುವುದು ಸ್ಪಷ್ಟವಾಗುತ್ತಿದೆ. ಜಿಲ್ಲೆಯಲ್ಲಿ ಬಯಲು ಶೌಚ ಇಲ್ಲವೆಂದು ಹೇಳಿಕೊಳ್ಳಲಾಗುತ್ತದೆಯಾದರು, ಸಾಕಷ್ಟು ಕಡೆಗಳಲ್ಲಿ ಇಂದಿಗೂ ಮನೆಗಳಲ್ಲಿ ಶೌಚಾಲಯಗಳ ವ್ಯವಸ್ಥೆ ಇಲ್ಲವೆಂದು ಬೇಸರ ವ್ಯಕ್ತಪಡಿಸಿದರು.
ಶೌಚಾಲಯಗಳಿಲ್ಲದ ಮನೆಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ಸರ್ಕಾರ ಸೂಕ್ತ ಯೋಜನೆ ರೂಪಿಸುವುದು ಅವಶ್ಯಕ. ಬಯಲು ಶೌಚದಿಂದಾಗಿಯೇ ಸಾಕಷ್ಟು ಮಂದಿ ಹುಲಿ ದಾಳಿಗೆ ಸಿಲುಕುತ್ತಿರುವುದು ಗಮನಾರ್ಹ ಎಂದರು.
::: ಜಾನುವಾರುಗಳನ್ನು ಹಾಗೇ ಬಿಡಿ :::
ಹುಲಿ ಆಹಾರಕ್ಕಾಗಿ ಜಾನುವಾರುಗಳನ್ನು ಕೊಂದು, ಒಂದಷ್ಟು ತಿಂದು ತೆರಳುತ್ತದೆ. ಮತ್ತೆ ಅದೇ ಸ್ಥಳಕ್ಕೆ ಉಳಿದ ಜಾನುವಾರಿನ ಭಾಗವನ್ನು ಭsಕ್ಷಿಸಲು ಬರುತ್ತದೆ. ಈ ಹಿನ್ನೆಲೆ ಸತ್ತ ಜಾನುವಾರುಗಳನ್ನು ಅಲ್ಲೆ ಬಿಟ್ಟು, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಲ್ಲಿ, ಮತ್ತೆ ಹುಲಿ ಆ ಸ್ಥಳಕ್ಕೆ ಬಂದಾಗ ಅದನ್ನು ಸೆರೆ ಹಿಡಿಯಲು ಅನುಕೂಲವಾಗುತ್ತದೆ. ಸತ್ತ ಜಾನುವಾರನ್ನು ಹೊತ್ತೊಯ್ದಲ್ಲಿ, ಹುಲಿ ಆಹಾರಕ್ಕಾಗಿ ಮತ್ತೆ ಬೇರೊಂದನ್ನು ಹುಡುಕಲು ಮುಂದಾಗುತ್ತದೆ ಎಂದು ತಿಳಿಸಿದರು.
ಹುಲಿ ಹಾವಳಿ ಹೆಚ್ಚಾಗಿರುವ ಪ್ರದೇಶದ ಮಕ್ಕಳನ್ನು ಶಾಲೆಗೆ ಕರೆದೊಯ್ಯಲು ಸೂಕ್ತ ವಾಹನ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಬೇಕು. ಪಾಳು ಬಿದ್ದ ಗದ್ದೆಗಳಲ್ಲಿ ಕಾಡು ಹಂದಿ ಸೇರಿಕೊಳ್ಳುವುದರಿಂದ ಅದನ್ನು ಬೇಟೆಯಾಡಲು ಹುಲಿಗಳು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆ ಗದ್ದೆಗಳನ್ನು, ಕಾಫಿ ತೋಟಗಳಲ್ಲಿ ಕಾಡು ಕೂಡಲು ಅವಕಾಶ ಮಾಡಿಕೊಡಬಾರದೆಂದು ಕರ್ನಲ್ ಮುತ್ತಣ್ಣ ಸಲಹೆ ನೀಡಿದರು.
ಹುಲಿ ದಾಳಿಯಿಂದ ಜಾನುವಾರುಗಳು ಮೃತಪಟ್ಟಲ್ಲಿ ನಮ್ಮ ಸಂಸ್ಥೆಯಿಂದ ವಲ್ರ್ಡ್ ವೈಲ್ಡ್ ಲೈಫ್ ಫಂಡ್‍ನಿಂದ ಲಭ್ಯ ಅನುದಾನದಲ್ಲಿ ತಕ್ಷಣ 5 ಸಾವಿರ ರೂ. ಪರಿಹಾರವನ್ನು ನೀಡಲಾಗುತ್ತಿದೆ. ಇಲ್ಲಿಯವರೆಗೆ 78 ಮಂದಿಗೆ ಪರಿಹಾವನ್ನು ಒದಗಿಸಲಾಗಿದೆ ಎಂದು ಎಂದು ಸಂಸ್ಥೆಯ ಪ್ರಮುಖರಾದ ರಾಯ್ ಬೋಪಣ್ಣ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಮುಖರಾದ ಶಾನ್ ಬೋಪಯ್ಯ, ಪಾಂಡಂಡ ನರೇಶ್ ಹಾಗೂ ಕೇಟೋಳಿರ ಸನ್ನಿ ಸೋಮಣ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.