Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್

ಜನವರಿ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.9 : ಕೇಂದ್ರ ಸರ್ಕಾರದ ಆದೇಶದಂತೆ 2022-23 ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು, ಡಿ.15 ರಿಂದ ನೋಂದಣಿ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಯನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆ ನಡೆಯುತ್ತಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ 15 ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ಭತ್ತ/ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಒಬ್ಬ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ 10 ರಿಂದ ಗರಿಷ್ಟ 20 ಕ್ವಿಂಟಾಲ್ ಖರೀದಿಸಲಾಗುತ್ತಿದೆ. 2023 ರ ಜನವರಿ, 09 (ದಿನಾಂಕ 09-01-2023 ರಂತೆ) ಜಿಲ್ಲೆಯಲ್ಲಿ ಒಟ್ಟು 358 ರೈತರು, ಅಂದಾಜು 13131 ಕ್ವಿಂಟಾಲ್ ಭತ್ತ, ಹಾಗೂ 2 ರೈತರು ಅಂದಾಜು 38 ಕ್ವಿಂಟಲ್ ರಾಗಿ ಖರೀದಿ ಮಾಡಲು ನೋಂದಣಿ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2040 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್‍ಗೆ 3578 ರೂ. ನಿಗದಿಪಡಿಸಲಾಗಿದೆ.
ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ 04 ಕಡೆಗಳಲ್ಲಿ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೇಟ್ ಆವರಣದಲ್ಲಿ ಖರೀದಿ ಮಾಡಲಾಗುತ್ತಿದೆ. ರೈತರು ಸಂಬಂಧಪಟ್ಟ ನೋಂದಣಿ ಕೇಂದ್ರಗಳಲ್ಲಿಯೇ ತಮ್ಮ ಭತ್ತವನ್ನು ನೀಡಲು ಸೂಚಿಸಿದರು.
ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಪ್ರದೇಶದಲ್ಲಿ ರೈತರು ನೋಂದಣಿ ಕೇಂದ್ರ ತೆರೆಯಲು ಬೇಡಿಕೆಯನ್ನು ಸಲ್ಲಿಸಿದ್ದು, ಅದೇ ರೀತಿ ಕೊಡ್ಲಿಪೇಟೆ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ನೋಂದಣಿ ಕೇಂದ್ರ ತೆರೆಯಲು ಅಗತ್ಯ ಕ್ರಮವಹಿಸಲು ಖರೀದಿ ಏಜೆನ್ಸಿಯವರಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‍ಗಳನ್ನು ಈಗಾಗಲೇ ನಿಯೋಜಿಸಲಾಗಿದೆ. ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು.
ರೈತರ ನೋಂದಣಿಗೆ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಕೂಡಲೇ ಸರಿಪಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‍ಪಿಸಿಐ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ ಎಂದು ಅವರು ತಿಳಿಸಿದರು.
ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೋಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಅವರು ಖರೀದಿ ಏಜೆನ್ಸಿ ಅವರಿಗೆ ತಿಳಿಸಿದರು.
ಸರಕಾರವು ಪೌಷ್ಟಿಕಾಂಶತೆಯಿಂದ ಕೂಡಿದ ಸಾರವರ್ದಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬಂಧ ಅಕ್ಕಿಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿಂಗ್ ಮಿಷನ್‍ನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿಗಿರಣಿಗಳಿಗೆ ಸರಕಾರದ ಆದೇಶದಂತೆ ಹಲ್ಲಿಂಗ್‍ಗೆ ಭತ್ತವನ್ನು ನೀಡಲು ಸಾಧ್ಯವಿರುವುದಿಲ್ಲ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್, ಕೃಷಿ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಅಧಿಕಾರಿಗಳು ಹಾಗೂ ಜಿಲ್ಲೆಯ ಅಕ್ಕಿ ಗಿರಣಿ ಮಾಲೀಕರುಗಳು ಸೇರಿದಂತೆ ಇತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.