Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಲೇಖಕಿ ಡಾ.ಸಾರಾ ಅಬೂಬಕರ್ ನಿಧನ : ಸಂತಾಪ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಲೇಖಕಿ ಡಾ.ಸಾರಾ ಅಬೂಬಕರ್ ನಿಧನ : ಸಂತಾಪ

ಜನವರಿ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.10 :  ಹಿರಿಯ ಸಾಹಿತಿ, ಲೇಖಕಿ ಡಾ.ಸಾರಾ ಅಬೂಬಕರ್(87) ಮಂಗಳವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ನಾಲ್ವರು ಪುತ್ರರು ಹಾಗೂ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

ಮೂಲತಃ ಕಾಸರಗೋಡಿನ ಚಂದ್ರಗಿರಿ ತೀರದವರಾದ ಸಾರಾ ವಿವಾಹವಾದ ಬಳಿಕ ಮಂಗಳೂರಿನ ಹ್ಯಾಟ್ ಹಿಲ್ ಬಳಿ ವಾಸವಾಗಿದ್ದರು. ‘ಚಂದ್ರಗಿರಿ ತೀರದಲ್ಲಿ‌’ ಕಾದಂಬರಿಯ ಮೂಲಕ ಪ್ರಸಿದ್ಧಿಗೆ ಬಂದಿದ್ದ ಸಾರಾ ಅಬೂಬಕರ್ ಅನೇಕ ಕೃತಿಗಳನ್ನು ರಚಿಸಿ ಖ್ಯಾತರಾಗಿದ್ದರು. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಮಂಗಳೂರಿನ ಬಂದರ್ ಝೀನತ್ ಬಕ್ಷ್ ಮಸೀದಿ ಆವರಣದ ದಫನ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಹಿಳಾ ಧ್ವನಿಯಾಗಿದ್ದ ಸಾರಾ ಅಬೂಬಕರ್ ಅವರು 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಜನಿಸಿದರು. ನ್ಯಾಯವಾದಿ ಪಿ.ಅಹ್ಮದ್ ಮತ್ತು ಜೈನಾಬಿ ದಂಪತಿಯ ಪುತ್ರಿಯಾಗಿರುವ ಅವರು ಹುಟ್ಟೂರಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದರು. ಕಾಸರಗೋಡಿನಲ್ಲಿ ಹೈಸ್ಕೂಲ್ ಪೂರೈಸಿದ ಸಾರಾ ತನ್ನ ಅಜ್ಜಿ ಹೇಳುತ್ತಿದ್ದ ಕಥೆಗಳಿಂದಾಗಿ ಅವರು ಎಳೆಯದರಲ್ಲೇ ಸಾಹಿತ್ಯ ಕ್ಷೇತ್ರದತ್ತ ಆಕರ್ಷಿತರಾಗಿದ್ದರು. ಇಂಜಿನಿಯರ್ ಆಗಿದ್ದ ಅಬೂಬಕರ್ ಅವರೊಡನೆ ವಿವಾಹವಾದ ಬಳಿಕ ಅವರ ಶಿಕ್ಷಣ ಅರ್ಧದಲ್ಲೇ ಮೊಟಕುಗೊಂಡಿತು.

ಸಾರಾ ಅಬೂಬಕರ್ ಅವರ ಪ್ರಥಮ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಇದು ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತ್ತು.

ಕೃತಿಗಳು: ಸಾರಾ ಅಬೂಬಕರ್ ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ ತಳ ಒಡೆದ ದೋಣಿ, ಪಂಜರ, ಇಳಿಜಾರು, ಕಾಣಿಕೆ ಇತ್ಯಾದಿ ಕಾದಂಬರಿಗಳನ್ನು ಅವರು ಬರೆದಿದ್ದಾರೆ. ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ಖೆಡ್ಡ ಮುಂತಾದ ಕಥಾ ಸಂಕಲನ, ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು ಮುಂತಾದ ಬಾನುಲಿ ನಾಟಕಗಳನ್ನು ರಚಿಸಿದ್ದಾರೆ. ಲೇಖನ ಗುಚ್ಛ, ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ ಇತ್ಯಾದಿ ಅನುವಾದಗಳನ್ನು ರಚಿಸಿರುವ ಅವರು, ‘ಐಷಾರಾಮದಲ್ಲಿ’ ಎಂಬ ಪ್ರವಾಸ ಕಥನವನ್ನೂ ಬರೆದಿದ್ದಾರೆ. ಅವರು ಮಲಯಾಳಂನ ಅನೇಕ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

ಪ್ರಶಸ್ತಿಗಳು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಸೇರಿದಂತೆ ಅನೇಕ ಪ್ರಶಸ್ತಿಗಳು ಸಾರಾ ಅಬೂಬಕರ್ ಅವರನ್ನು ಅರಸಿ ಬಂದಿವೆ.

ಕರ್ನಾಟಕ ಸಾಹಿತ್ಯ ಅಕಾಡಮಿಯ ಗೌರವ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಹೀಗೆ ಅನೇಕ ಪ್ರಶಸ್ತಿ, ಗೌರವಗಳಿಗೆ ಅವರು ಪಾತ್ರರಾಗಿದ್ದಾರೆ ಇವರ ನಿಧನಕ್ಕೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಪರವಾಗಿ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮತ್ತು ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.