“ಗ್ರಾಮ ಒನ್” ಆರಂಭ: ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ

12/01/2023

ಮಡಿಕೇರಿ ಜ.12 : “ಗ್ರಾಮ ಒನ್” ಯೋಜನೆಯನ್ನು ರಾಜ್ಯದ ಜಿಲ್ಲೆಗಳಲ್ಲಿ ಈಗಾಗಲೇ ಮುಖ್ಯಮಂತ್ರಿ ಅವರು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ಸಹಯೋಗದೊಂದಿಗೆ ಲೋಕಾರ್ಪಣೆಗೊಳಿಸಿದ್ದು, ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ 12 ಗ್ರಾಮ ಪಂಚಾಯತ್‍ಗಳಲ್ಲಿ (ಗ್ರೇಡ್-2ರಡಿ) ಸಮಗ್ರ ನಾಗರಿಕ ಸೇವಾ ಕೇಂದ್ರ “ಗ್ರಾಮ ಒನ್” ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿಯ ದೊಡ್ಡಮಳ್ತ್ತೆ, ಶಾಂತಳ್ಳಿ ಹೋಬಳಿಯ ಬೆಟ್ಟದಳ್ಳಿ, ಸೋಮವಾರಪೇಟೆ ಹೋಬಳಿಯ ಗರ್ವಾಲೆ, ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಹೋಬಳಿಯ ಕೆದಕಲ್, ಕುಶಾಲನಗರ ಹೋಬಳಿಯ ನಾಲ್ಕೂರು ಶಿರಂಗಾಲ, ವಿರಾಜಪೇಟೆ ತಾಲೂಕಿನ ಕಾಕೋೀಟುಪರಂಬು, ಪೊನ್ನಂಪೇಟೆ ತಾಲೂಕಿನ ಬಾಳೆಲೆ ಹೋಬಳಿಯ ನಿಟ್ಟೂರು ಹಾಗೂ ಪೊನ್ನಪ್ಪಸಂತೆ, ಹುದಿಕೇರಿ ಹೋಬಳಿಯ ಬಲ್ಯಮಂಡೂರು, ಶ್ರೀಮಂಗಲ ಹೋಬಳಿಯ ಕೆ.ಬಾಡಗ, ಪೊನ್ನಂಪೇಟೆ ಹೋಬಳಿಯ ಬಿ.ಶೆಟ್ಟಿಗೇರಿ ಹಾಗೂ ಕಿರುಗೂರು.
ಆಸಕ್ತ ಪ್ರಾಂಚೈಸಿಗಳು https://www.gramaonebls.com/users/registration ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪ್ರಾಜೆಕ್ಟ್ ಮ್ಯಾನೇಜರ್ ಅಥವಾ ಕೋ-ಆರ್ಡಿನೇಟರ್, ಜಿಲ್ಲಾಧಿಕಾರಿ ಅವರ ಕಚೇರಿ (ದೂರವಾಣಿ ಸಂಖ್ಯೆ: 8861672120/ 8553226664) ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.