Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*
  • *ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*
  • *ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ

ಜನವರಿ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.16 : ಇದೇ ಜ.30 ರಂದು ಹುತಾತ್ಮರ ದಿನಾಚರಣೆ ಹಿನ್ನೆಲೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜಿಲ್ಲಾ ಖಜಾನೆಯಿಂದ ಮೆರವಣಿಗೆ ಮೂಲಕ ಗಾಂಧಿ ಮೈದಾನಕ್ಕೆ ತೆಗೆದುಕೊಂಡು ಹೋಗುವ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನ ಪ್ರಯುಕ್ತ ಪೂಜ್ಯ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜ.30 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆ ಕಚೇರಿಯಿಂದ ಮೆರವಣಿಗೆಯಲ್ಲಿ ಪೊಲೀಸ್ ಗೌರವ ರಕ್ಷೆಯೊಂದಿಗೆ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದಲ್ಲಿರಿಸಿ ಬೆಳಗ್ಗೆ 10.30 ಗಂಟೆಗೆ ಸರ್ವಧರ್ಮ ಪ್ರಾರ್ಥನೆ, ನಂತರ 11 ಗಂಟೆಗೆ ಸರಿಯಾಗಿ 2 ನಿಮಿಷ ಮೌನ ಆಚರಣೆ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಗಾಂಧಿ ಮಂಟಪದಲ್ಲಿ ಮಹಾತ್ಮ ಗಾಂಧೀಜಿ ಸ್ಮಾರಕ ನಿರ್ಮಾಣ ಸಂಬಂಧ 50 ಲಕ್ಷ ರೂ. ಬಿಡುಗಡೆಗೆ ಸರ್ಕಾರ ಆದೇಶ ಹೊರಡಿಸಿದೆ. ಆ ನಿಟ್ಟಿನಲ್ಲಿ 35 ಸೆಂಟ್ ಜಾಗವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಈಗಾಗಲೇ ಹಸ್ತಾಂತರಿಸಲಾಗಿದೆ. ಆದ್ದರಿಂದ ‘ಗಾಂಧೀಜಿ ಸ್ಮಾರಕ’ ನಿರ್ಮಾಣ ಸಂಬಂಧ ಮತ್ತೊಮ್ಮೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡುವಂತೆ ಸಲಹೆ ಮಾಡಿದರು.
ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್ ಅವರು ಮಾತನಾಡಿ 1934 ರಲ್ಲಿ ಮಹಾತ್ಮ ಗಾಂಧೀಜಿ ಅವರು ಕೊಡಗು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ನಗರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಆ ಹಿನ್ನೆಲೆ ಗಾಂಧಿ ಮೈದಾನ ಎಂದು ಹೆಸರು ಬಂದಿದೆ. ಮಹಾತ್ಮ ಗಾಂಧೀಜಿಯವರು ಭಾಷಣ ಮಾಡಿದ ಸ್ಥಳದಲ್ಲಿ ಗಾಂಧಿ ಮಂಟಪ ನಿರ್ಮಾಣ ಮಾಡಲಾಗಿದೆ ಎಂದು ಅವರು ಹೇಳಿದರು.
ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಕೊಡಗು ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ತಂದು ಜಿಲ್ಲಾ ಖಜಾನೆಯಲ್ಲಿ ಇರಿಸಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಸದಸ್ಯರಾದ ಕಾನೆಹಿತ್ಲು ಮೊಣ್ಣಪ್ಪ, ಖಜಾನೆ ಇಲಾಖೆಯ ಸಹಾಯಕ ಖಜಾನಾಧಿಕಾರಿ ಕೆ.ಆರ್.ಕಲ್ಪನಾ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಸಂಘಟಕರಾದ ದಮಯಂತಿ, ಮಣಜೂರು ಮಂಜುನಾಥ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK  ಮಾ.6 :  ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ಮಾ.9 ರಂದು ಸೋಮವಾರ…

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.