Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಜ.18 ರಿಂದ ಸುತ್ತೂರು ಜಾತ್ರೆ ಆರಂಭ
ಇತ್ತೀಚಿನ ಸುದ್ದಿಗಳು

ಜ.18 ರಿಂದ ಸುತ್ತೂರು ಜಾತ್ರೆ ಆರಂಭ

January 17, 20235 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.17 : ಕಪಿಲಾ ನದೀತೀರದಲ್ಲಿರುವ ಶ್ರೀ ಸುತ್ತೂರು ಕ್ಷೇತ್ರವನ್ನು ತಮ್ಮ ತಪಸ್ಸಿದ್ಧಿಯಿಂದ ಜಾಗೃತ ಧರ್ಮಕ್ಷೇತ್ರವನ್ನಾಗಿ ನೆಲೆಗೊಳಿಸಿದ ಮಹಾಮಹಿಮರು ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರು. ಪೂಜ್ಯರು ಸಂಸ್ಥಾಪಿಸಿದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠವು ಸಹಸ್ರಾರು ವರ್ಷಗಳಿಂದ ಜನತೆಯ ಸಮಗ್ರ ಉನ್ನತಿಗಾಗಿ ಜ್ಞಾನಾನ್ನದಾಸೋಹಗಳ ಕೈಂಕರ್ಯವನ್ನು ನಡೆಸುತ್ತಾ ಬಂದಿದೆ. ಇಂಥ ಭವ್ಯ ಇತಿಹಾಸವುಳ್ಳ ಶ್ರೀಮಠದ ಎಲ್ಲ ಪೂಜ್ಯ ಜಗದ್ಗುರುಗಳು ತಮ್ಮ ಅನುಪಮ ತಪೋನುಷ್ಠಾನದಿಂದ ಲೋಕೋದ್ಧಾರದ ಸೇವಾಕಾರ್ಯಗಳನ್ನು ಕೈಗೊಂಡಿದ್ದಾರೆ.

ಶ್ರೀಮಠದ ಬಹುಮುಖ ಚಟುವಟಿಕೆಗಳ ನಿರ್ವಹಣೆಗಾಗಿ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರಿಂದ ಸ್ಥಾಪಿತವಾದ ಜೆಎಸ್‍ಎಸ್ ಮಹಾವಿದ್ಯಾಪೀಠ ಹಾಗೂ ಇದರ ಅಂಗಸಂಸ್ಥೆಗಳ ಮೂಲಕ ದೇಶವಿದೇಶಗಳಲ್ಲಿ ಧರ್ಮ, ಸಂಸ್ಕೃತಿ, ಶಿಕ್ಷಣ, ಆರೋಗ್ಯ, ಕೃಷಿ, ಗ್ರಾಮೀಣಾಭಿವೃದ್ಧಿ, ಸಮಾಜಸುಧಾರಣೆ ಮುಂತಾದ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವಾಕಾರ್ಯಗಳು ನಡೆಯುತ್ತಿವೆ.

ಆದಿ ಜಗದ್ಗುರುಗಳವರ ಜಾತ್ರಾ ಮಹೋತ್ಸವವು ಪ್ರತಿ ವರ್ಷ ಪುಷ್ಯ ಬಹುಳ ದ್ವಾದಶಿಯಂದು ಪ್ರಾರಂಭವಾಗುತ್ತದೆ. ಮಾಸಶಿವರಾತ್ರಿಯಂದು ರಥೋತ್ಸವ ಹಾಗೂ ಮಾಘ ಶುದ್ಧ ಪಾಡ್ಯಮಿಯಂದು ತೆಪ್ಪೋತ್ಸವ ಜರುಗುತ್ತವೆ. ಆರು ದಿನಗಳ ಕಾಲ ನಡೆಯುವ ಈ ಸಂಭ್ರಮದ ಜಾತ್ರೆಯಲ್ಲಿ ಜನತೆಯ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಹಲವಾರು ವೈವಿಧ್ಯಪೂರ್ಣ ಕಾರ್ಯಕ್ರಮಗಳು ನಡೆಯುತ್ತವೆ.

ಜಾತ್ರೆಯ ಎಲ್ಲ ಕಾರ್ಯಕ್ರಮಗಳು ಮತ್ತು ಪೂಜಾಕೈಂಕರ್ಯಗಳು ಭಕ್ತಾದಿಗಳು, ಸೇವಾರ್ಥದಾರರು, ಸಾರ್ವಜನಿಕರು, ಸಂಘಸಂಸ್ಥೆಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ ಸಹಾಯ, ಸಹಕಾರಗಳಿಂದ ನಡೆಯುತ್ತವೆ.

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಜ.18 ರಿಂದ ಜ.23ರ ವರೆಗೆ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆಯಲಿದೆ.

ಆರು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಜ.19ರಂದು ಸಾಮೂಹಿಕ ವಿವಾಹ, ಹಾಲರವಿ ಉತ್ಸವ, 20ರಂದು ರಥೋತ್ಸವ, 21ರಂದು ಶ್ರೀ ಮಹದೇಶ್ವರ ಕೊಂಡೋತ್ಸವ ಹಾಗೂ ಲಕ್ಷದೀಪೋತ್ಸವ, 22ರಂದು ತೆಪ್ಪೋತ್ಸವಗಳ ಹಾಗೂ ಶ್ರೀ ವೀರಭದ್ರೇಶ್ವರ ಕೊಂಡೋತ್ಸವಗಳ ಜೊತೆಗೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳು, ವೈವಿಧ್ಯಮಯ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾಚಟುವಟಿಕೆಗಳು ಜರುಗಲಿವೆ.

ಭಜನಾ ಮೇಳ : ಈ ವರ್ಷ 29ನೇ ರಾಜ್ಯಮಟ್ಟದ ಭಜನಾ ಮತ್ತು ಏಕತಾರಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸುಮಾರು 700 ಕ್ಕೂ ಹೆಚ್ಚು ಪುರುಷ, ಮಹಿಳಾ, ಮಕ್ಕಳ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಒಟ್ಟು ಏಳು ವಿಭಾಗಗಳಲ್ಲಿ ಈ ಸ್ಪರ್ಧೆ ನಡೆಯಲಿದ್ದು, ಪ್ರತಿ ವಿಭಾಗಕ್ಕೂ ಪ್ರತ್ಯೇಕ ಬಹುಮಾನಗಳನ್ನು ನೀಡಲಾಗುತ್ತದೆ. 18ರಂದು ಭಜನಾಗೀತೆಗಳನ್ನು ಒಳಗೊಂಡಿರುವ ‘ಭಜನಾಂಜಲಿ’ ಕೃತಿಯು ಬಿಡುಗಡೆಗೊಳ್ಳಲಿದೆ.

ವಸ್ತುಪ್ರದರ್ಶನ : ಜಾತ್ರೆಯ ಪ್ರಮುಖ ಆಕರ್ಷಣೆಯಾದ ವಸ್ತುಪ್ರದರ್ಶನದಲ್ಲಿ ಕೈಗಾರಿಕೋತ್ಪನ್ನಗಳು, ಕೈಮಗ್ಗ, ಜವಳಿ, ಕರಕುಶಲ ಉತ್ಪನ್ನಗಳು, ಗ್ರಾಮೀಣ ಉತ್ಪನ್ನಗಳು, ಸ್ವಸಮಾಯ ಸಂಘಗಳು, ಸ್ತ್ರೀಪಕ್ತಿ ಸಂಘಗಳು ತಯಾರಿಸಿದ ಗೃಹಬಳಕೆ ಉತ್ಪನ್ನಗಳು ಹಾಗೂ ಗುಡಿ ಕೈಗಾರಿಕ ವಸ್ತುಗಳ ಪ್ರದರ್ಶನ ಹಾಗೂ ಮಾರಾಟದ ವ್ಯವಸ್ಥೆ ಇರುತ್ತದೆ. ಜೆಎಸ್‍ಎಸ್ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಸಿದ್ಧಪಡಿಸಿರುವ 200 ಕ್ಕೂ ಹೆಚ್ಚು ಶಿಕ್ಷಣ ಮತ್ತು ವಿಜ್ಞಾನಕ್ಕೆ ಸಂಬಂಧಿಸಿದ ಮಾದರಿಗಳಿರುತ್ತವೆ. ಸರ್ಕಾರದ ಅಭಿವೃದ್ಧಿ ಇಲಾಖೆಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ಮಹಿಳಾ ಉದ್ಯಮಿಗಳು ಪಾಲ್ಗೊಳ್ಳಲಿದ್ದಾರೆ. ವೈದ್ಯಕೀಯ ಹಾಗೂ ಶಾಂತಿಕ ವಸ್ತುಪ್ರದರ್ಶನವು ಇರುತ್ತದೆ.

ಸಾಮೂಹಿಕ ವಿವಾಹ : 19 ಗುರುವಾರದಂದು ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಜಾತಿ- ಮತ ಭೇದವಿಲ್ಲದೆ ಸರ್ವಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸಾಮೂಹಿಕ ವಿವಾಹದಲ್ಲಿ ಅಂತರ್ಜಾತಿ, ವಿಶೇಷ ಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಸಹ ಪಾಲ್ಗೊಳಲಿದ್ದಾರೆ. ವಿವಾಹಗಳ ನೋಂದಣಿಯನ್ನು ಮಾಡಿಸಲಾಗುತ್ತದೆ. ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗೂ ಕಾಲುಂಗುರಗಳನ್ನು ವರನಿಗೆ ಪಂಚೆ, ವಲ್ಲಿ, ಷರ್ಟ್‍ಗಳನ್ನು ನೀಡಲಾಗುತ್ತದೆ. ಸಾಮೂಹಿಕ ವಿವಾಹ ವ್ಯವಸ್ಥೆಯಲ್ಲಿ ಈವರೆಗೆ 2,900 ಕ್ಕೂ ಹೆಚ್ಚು ಮಂದಿ ದಂಪತಿಗಳಾಗಿದ್ದಾರೆ. ವಧು-ವರರು ವಿವಾಹದ ದೃಢೀಕರಣ ಪತ್ರ ಹಾಗೂ ನೋಂದಣಿವಳಗಳನ್ನು ಸಲ್ಲಿಸಿ ಸರ್ಕಾರ ನೀಡುವ ಪೆÇ್ರೀತ್ಸಾಹಧನವನ್ನು ಜಡೆದುಕೊಳ್ಳಬಹುದಾಗಿದೆ.

ಕಟ್ಟಡಗಳ ಉದ್ಘಾಟನೆ : 19 ಮತ್ತು 20ರಂದು ಶ್ರೀಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ರಥದ ಮನೆ, ಶ್ರೀ ಚಿದ್ಘನ ಶಿವಾಚಾರ್ಯ, ಕಾಂಪ್ಲೆಕ್ಸ್, ಶ್ರೀ ಪರ್ವತೇಂದ್ರ ಶಿವಾಚಾರ್ಯ ಕಾಂಪ್ಲೆಕ್ಸ್, ಶ್ರೀ ಭಂಡಾರಿ ಬಸಪ್ಪ ಒಡೆಯರ್ ಕಾಂಪ್ಲೆಕ್ಸ್‍ಗಳು ಉದ್ಘಾಟನೆಗೊಳ್ಳಲಿವೆ.

ಕೃತಿಗಳ ಬಿಡುಗಡೆ : ಜ.18 ರಂದು ಭಜನಾಗೀತೆಗಳನ್ನು ಒಳಗೊಂಡಿರುವ ‘ಭಜನಾಂಜಲಿ’ ಕೃತಿ ಹಾಗೂ 21 ಶನಿವಾರದಂದು ಸಿರಿಧಾನ್ಯ ಐಸಿರಿ’ ಕೃತಿಗಳನ್ನು ಬಿಡುಗಡೆಗೊಳಿಸಲಾಗುವುದು.

ಕೃಷಿ ಮೇಳ : ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಯ ಬಗ್ಗೆ ರೈತರಿಗೆ ಮಾಹಿತಿ ನೀಡಲು ಪ್ರತಿ ವರ್ಷದಂತೆ ಈ ಬಾರಿಯೂ ಆಧುನಿಕ ತಂತ್ರಜ್ಞಾನಾಧಾರಿತ ಕೃಷಿಮೇಳವನ್ನು ಆಯೋಜಿಸಲಾಗಿದೆ. ಒಂದು ಎಕರೆ, “ಕೃಷಿ, ಬ್ರಹ್ಮಾಂಡ, ನೆರಳುಮನೆಯಲ್ಲಿ ಬೆಳೆದ ಹಲವಾರು ದೇಸಿ ಹಾಗೂ ವಿದೇಶಿ ತರಕಾರಿಗಳು, ಈ ವರ್ಷ ವಿಶೇಷವಾಗಿ ಸಿರಿಧಾನ್ಯ ಬೆಳೆಗಳ ಪಾತ್ಯಕ್ಷಿಕೆ, ಮಣ್ಣಿನ ಸವಕಳಿ ತಪ್ಪಿಸಲು ಹಾಗೂ ಔಷಧಿ ಬೆಳೆಯಾಗಿ ಲಾವಂಚ, ದ್ವಿದಳ ಧಾನ್ಯಗಳ ವಿವಿಧ ತಳಿಗಳ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ರೈತರ ಅನುಕೂಲಕ್ಕಾಗಿ ನೂತನ ತಂತ್ರಜ್ಞಾನವಾದ ಡೋನ್ ಬಳಕೆ ಕುರಿತಾದ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗುತ್ತದೆ. ಕೃಷಿ ಅಭಿವೃದ್ಧಿ ಇಲಾಖೆಗಳು, ವಿಶ್ವವಿದ್ಯಾನಿಲಯಗಳು ಹಾಗೂ ಖಾಸಗಿ ಉಪಕರಣಗಳ ಮಾರಾಟಗಾರರು ವಸ್ತುಪ್ರದರ್ಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಗ್ರ ಬೆಳೆ ನಿರ್ವಹಣೆ, ವೈವಿಧ್ಯಮಯ ಬೆಳೆಗಳ ಪ್ರಾತ್ಯಕ್ಷಿಕೆ ಇರುತ್ತದೆ. ಕೃಷಿ ಯಂತ್ರೋಪಕರಣಗಳ ಪದರ್ಶನ ಹಾಗೂ ಮಾರಾಟದ ವ್ಯವಸ್ಥೆ ಮಾಡಲಾಗಿದೆ, ಹಸು, ಕುರಿ, ಮೇಕೆ, ಕೋಳಿಗಳ ದೇಸಿ ಹಳಿಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಸಿರಿಧಾನ್ಯ ಮೇಳ : ಈ ವರ್ಷ ‘ವಿಶ್ವ ಸಿರಿಧಾನ್ಯ ವರ್ಷ’ವಾದ ಪ್ರಯುಕ್ತ ವಿಶೇಷವಾಗಿ ಸಿರಿಧಾನ್ಯ ಮೇಳವನ್ನು ಏರ್ಪಡಿಸಿದೆ. ಇದರಲ್ಲಿ ಸಿರಿಧಾನ್ಯ ಬೆಳೆಗಳ ಪ್ರದರ್ಶನ, ಆದರಿಂದಾಗುವ ಉಪಯೋಗದ ಕುರಿತು ವಿವರವಾದ ಮಾಹಿತಿಗಳನ್ನು ನೀಡಲಾಗುವುದು. ಸಿರಿಧಾನ್ಯ ತಿನಿಸುಗಳ ಸ್ಪರ್ಧೆಯನ್ನು ಏರ್ಪಡಿಸಿದ್ದು, ಮನೆಯಲ್ಲಿ ತಯಾರಿಸಿಕೊಂಡು ಬರುವ ಉತ್ತಮ ಖಾದ್ಯಗಳಿಗೆ ಬಹುಮಾನ ನೀಡಲಾಗುವುದು. ವಸ್ತುಪ್ರದರ್ಶನ ಆವರಣದಲ್ಲಿ ಸಿರಿಧಾನ್ಯ ಉತ್ಪನ್ನಗಳ ಸವಿರುಚಿಯಾದ ಖಾದ್ಯಗಳ ಮಾರಾಟ ಮಳಿಗೆಗಳು ಇರುತ್ತವೆ.

ಕೃಷಿ ವಿಚಾರಸಂಕಿರಣ: ಜ.21 ರಂದು ಸಿರಿಧಾನ್ಯಗಳ ಮಹತ್ವ ಮೌಲ್ಯವರ್ಧನೆ ಹಾಗೂ ಮಾರುಕಟ್ಟೆ ಕುರಿತು ವಿಚಾರಸಂಕಿರಣ ಏರ್ಪಡಿಸಲಾಗಿದೆ. ಇದೇ ಸಂದರ್ಭದಲ್ಲಿ ‘ಸಿರಿಧಾನ್ಯ ಐಸಿರಿ’ ಕೃತಿಯನ್ನು ಬಿಡುಗಡೆಗೊಳಿಸಲಾಗುವುದು,

ಚಿತ್ರ ರಚಿಸುವ ಸ್ಪರ್ಧೆ : 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಬೇರೆ ಬೇರೆ ಗುಂಪುಗಳಲ್ಲಿ ಸ್ಥಳದಲ್ಲೇ ಚಿತ್ರ ಬರೆಯುವ ರಾಜ್ಯಮಟ್ಟದ ಸ್ಪರ್ಧೆ 21 ಶನಿವಾರದಂದು ಬೆಳಗ್ಗೆ 10.00 ಗಂಟೆಗೆ ಪ್ರಾರಂಭವಾಗುತ್ತದೆ.

ಚಿತ್ರಸಂತೆ : ರಾಜ್ಯ ಹಾಗೂ ಹೊರರಾಜ್ಯ ಕಲಾವಿದರುಗಳ ಕಲಾಕೃತಿಗಳ ಪ್ರದರ್ಶನ, ಮಾರಾಟ ಹಾಗೂ ಸ್ಥಳದಲ್ಲೇ ಸಾರ್ವಜನಿಕರ ಭಾವಚಿತ್ರ ರಚನೆಮಾಡಿ ಮಾರಾಟ ಮಾಡುವ ವ್ಯವಸ್ಥೆಯು ಜಾತ್ರೆಯ ಎಲ್ಲಾ ದಿನಗಳಲ್ಲಿಯೂ ಇರುತ್ತದೆ.

ಸೋಬಾನೆಪದ, ರಂಗೋಲಿ, ಗಾಳಿಪಟ ಸ್ಪರ್ಧೆಗಳು : ಗ್ರಾಮೀಣ ಕಲೆಗಳಾದ ಸೋಬಾನಪದ ಹಾಗೂ ರಂಗೋಲಿ ಸ್ಪರ್ಧೆಗಳನ್ನು ಜ.18 ರಂದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಳಿಪಟ ಸ್ಪರ್ಧೆಯನ್ನು 21 ಶನಿವಾರದಂದು ಏರ್ಪಡಿಸಲಾಗಿದೆ.

ಕುಸ್ತಿ ಪಂದ್ಯಾವಳಿ : 22 ಭಾನುವಾರದಂದು ರಾಷ್ಟ್ರಮಟ್ಟದ ನಾಡ ಕುಸ್ತಿ ಪಂದ್ಯಗಳು ನಡೆಯಲಿವೆ. ಈ ಬಾರಿ ಎರಡು ಮಾರ್‍ಪಿಟ್ ಕುಸ್ತಿಗಳಿರುತ್ತದೆ. ರಾಷ್ಟ್ರಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ವಿಜೇತರಿಗೆ ‘ಸುತ್ತೂರು ಕೇಸರಿ ಪಶಸ್ತಿ ಹಾಗೂ ಸ್ಥಳೀಯ ಉತ್ತಮ ಕುಸ್ತಿ ಸ್ಪರ್ಧೆ ವಿಜೇತರಿಗೆ ಸುತ್ತೂರು ಕುಮಾರ’ ಪ್ರಶಸ್ತಿಗಳನ್ನು ನೀಡಲಾಗುವುದು.

ಕ್ಯಾನ್ಸರ್ ತಪಾಸಣಾ ಶಿಬಿರ : 18 ರಿಂದ 20ರವರೆಗೆ 3 ದಿನಗಳ ಕಾಲ ಕ್ಯಾನ್ಸರ್ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಕ್ಯಾನ್ಸರ್ ತಡೆಗಟ್ಟುವ ಬಗ್ಗೆ ಸಲಹೆ, ಸೂಚನೆ ಹಾಗೂ ವಿವಿಧ ರೀತಿಯ ಕ್ಯಾನ್ಸರ್ ಗಳ ಬಗ್ಗೆ ಪರೀಕ್ಷೆಗಳನ್ನು ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಲಾಗಿದೆ.

ಆರೋಗ್ಯ ತಪಾಸಣಾ ಶಿಬಿರ : ಜೆಎಸ್‍ಎಸ್ ಆಸ್ಪತ್ರೆ ವತಿಯಿಂದ ಜಾತ್ರಾ ಮಹೋತ್ಸವದ ಎಲ್ಲಾ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.

ದೋಣಿ ವಿಹಾರ : ಸಾರ್ವಜನಿಕರ ಮನರಂಜನೆಗಾಗಿ ಜಾತ್ರೆಯ ಎಲ್ಲ ದಿನಗಳಲ್ಲಿ ದೋಣಿ ವಿಹಾರವನ್ನು ಏರ್ಪಡಿಸಲಾಗಿದೆ.

ಗ್ರಾಮೀಣ ಜನರು ಹಾಗೂ ಪ್ರಾಥಮಿಕ ಮತ್ತು ಜೆಎಸ್‍ಎಸ್ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ದೇಸಿ ಆಟಗಳು : ಪುರುಷರಿಗೆ ಜ.20 ರಂದು ಮತ್ತು ಮಹಿಳೆಯರಿಗೆ ಜ.21 ರಂದು ಹಾಗೂ ವಿದ್ಯಾರ್ಥಿಗಳಿಗೆ ಜ.20 ರಿಂದ ಜ.22ರ ವರೆಗೆ ದೇಸಿ ಆಟಗಳಾದ ಕೆಸರುಗದ್ದೆ ಓಟ, ಹಗ್ಗ ಜಗ್ಗಾಟ, ಕುಂಟೆಬಿಲ್ಲೆ, ಅಳಿಗುಳಿ ಮನೆ, ಅಣ್ಣೆಕಲ್ಲು, ಚದುರಂಗ, ಚೌಕಬಾರ ಜೊತೆಗೆ 50 ಕೆಜಿ ತೂಕದ ಚೀಲ ಹೊತ್ತುಕೊಂಡು ಓಡುವುದು, ಕಲ್ಲುಗುಂಡು ಎತ್ತುವುದು, ನೀರು ತುಂಬಿದ ಬಿಂದಿಗೆಯನ್ನು ತಲೆಯ ಮೇಲೆ ಹೊತ್ತು ಓಡುವುದು ಮುಂತಾದ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ವಿಜೇತರಾದವರಿಗೆ ನಗದು ಬಹುಮಾನ, ನೆನಪಿನ ಕಾಣಿಕೆ ಹಾಗೂ ಪ್ರಶಸ್ತಿಪತ್ರ ನೀಡಲಾಗುವುದು.

ದನಗಳ ಪರಿಷೆ ರದ್ದು : ದನಗಳ ಜಾತ್ರೆಯನ್ನು ಕಳೆದ 33 ವರ್ಷಗಳಿಂದಲೂ ಏರ್ಪಡಿಸಲಾಗುತ್ತಿದೆ. ಉತ್ತಮ ರಾಸುಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುತ್ತಿತ್ತು. ಆದರೆ ಈ ವರ್ಷ ಜಾನುವಾರುಗಳಲ್ಲಿ ಚರ್ಮಗಂಟು ರೋಗ ವ್ಯಾಪಕವಾಗಿ ಹರಡುತ್ತಿರುವ ಕಾರಣ ಜಿಲ್ಲಾಧಿಕಾರಿಗಳ ಆದೇಶದಂತೆ ದನಗಳ ಜಾತ್ರೆಯನ್ನು ರದ್ದುಪಡಿಸಲಾಗಿದೆ.

ಸಾಂಸ್ಕೃತಿಕ ಮೇಳ : ಜೆಎಸ್‍ಎಸ್ ಅಂತರಸಂಸ್ಥೆಗಳ ಸಾಂಸ್ಕೃತಿಕ ಮೇಳದಲ್ಲಿ 3,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಭರತನಾಟ್ಯ, ಸಾಮೂಹಿಕ ನೃತ್ಯ, ಶಾಸ್ತ್ರೀಯ ಸಂಗೀತ, ವಚನಾಧಾರಿತ ನೃತ್ಯ, ಸಾಮೂಹಿಕ ಗಾಯನ ಸ್ಪರ್ಧೆಗಳ ಮೂಲಕ ಸುಮಾರು 400ಕ್ಕೂ ಹೆಚ್ಚು ಕಾರ್ಯಕ್ರಮಗಳಿರುತ್ತವೆ.

ಸಾಂಸ್ಕೃತಿಕ ಕಾರ್ಯಕ್ರಮಗಳು : ಗದ್ದುಗೆಯ ಆವರಣದಲ್ಲಿ ನಗರಪ್ರದೇಶಗಳ ವೃತ್ತಿಪರ ಹಾಗೂ ಹವ್ಯಾಸಿ ಕಲಾವಿದರಿಂದ ಗಾಯನ, ನೃತ್ಯ ಹಾಗೂ ನಾಟಕಗಳಿರುತ್ತದೆ, ಗ್ರಾಮಾಂತರ ಪ್ರದೇಶದ ನಾಟಕ ತಂಡಗಳಿಂದ ಇಪ್ಪತ್ತಕ್ಕೂ ಹೆಚ್ಚು ಪೌರಾಣಿಕ ನಾಟಕಗಳು ಏಕಕಾಲದಲ್ಲಿ ನಾಲ್ಕು ವೇದಿಕೆಗಳಲ್ಲಿ ಪ್ರದರ್ಶನಗೊಳ್ಳುತ್ತವೆ. ವಸ್ತುಪ್ರದರ್ಶನ ಆವರಣದಲ್ಲಿ ಪ್ರತಿದಿನ ಸಂಜೆ 7ರಿಂದ 9ರವರೆಗೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಹೊರಗಿನ ಕಲಾವಿದರು ನೀಡುತ್ತಾರೆ.

ಕಲಾತಂಡಗಳಿಂದ ಪ್ರದರ್ಶನ : ಕರ್ನಾಟಕ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳ ಕಲಾತಂಡಗಳವರು. ವರ್ಣರಂಜಿತ ಕಲಾಪ್ರದರ್ಶನಗಳನ್ನು ಪಾತ್ರೆಯ ಮೊದಲಿನಿಂದ ಕೊನೆಯವರೆಗೂ ನೀಡುತ್ತಾರೆ.

ಛಾಯಾಚಿತ್ರ ಸ್ಪರ್ಧೆ : ಜಾತ್ರಾ ಮಹೋತ್ಸವಕ್ಕೆ ಸಂಬಂಧಪಟ್ಟ ಛಾಯಾಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಡಿಎಸ್‍ಎಲ್‍ಆರ್ ಕ್ಯಾಮೆರಾ ಹಾಗೂ ಮೊಬೈಲ್ ಛಾಯಾಚಿತ್ರಗಳ ಎರಡು ವಿಭಾಗಗಳ ಸ್ಪರ್ಧೆ ಇರುತ್ತದೆ.
ಪ್ರಸಾದ ಮತ್ತು ವಸತಿ ವ್ಯವಸ್ಥೆ : ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವ ಸಮಸ್ತ ಭಕ್ತಾದಿಗಳಿಗೆ ಪ್ರತಿನಿತ್ಯವೂ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಪ್ರಸಾರದ ವ್ಯವಸ್ಥೆ ಇರುತ್ತದೆ, ದೂರದಿಂದ ಬರುವವರಿಗೆ ತಾತ್ಕಾಲಿಕ ಕುಟೀರಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ

ಸಾರಿಗೆ ಸಂಪರ್ಕ: ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸುವವರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಖಾಸಗಿ ಸಾರಿಗೆ ಸಂಸ್ಥೆಗಳು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಂದ ಶ್ರೀ ಸುತ್ತೂರು ಕ್ಷೇತ್ರಕ್ಕೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಿವೆ.

ಪ್ರಭಾತ್ ಪೇರಿ : ಪ್ರತಿದಿನ ಬೆಳಗ್ಗೆ ಅಕ್ಕಪಕ್ಕದ ಸುಮಗಳಲ್ಲಿ ಸ್ನೇಹ-ಸೌಹಾರ್ದ ಶಾಂತಿ ಪ್ರರ್ಥನಾ ಸಂಚಲನ, ಪ್ರಭಾತ್ ಪೇರಿ ಇರುತ್ತದೆ. ನಂತರ ಶ್ರೀಗಳವರೊಬ್ಬರು ಧ್ವಜಾರೋಹಣ ನೆರವೇರಿಸುತ್ತಾರೆ.ಮತ್ತೊಬ್ಬರು ಧರ್ಮಸಂದೇಶ ನೀಡುತ್ತಾರೆ.

ಜಾತ್ರಾ ಮಹೋತ್ಸವದಲ್ಲಿ ಪೂಜ್ಯ ಮಠಾಧೀಶರು, ಧರ್ಮಗುರುಗಳು, ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರುಗಳು, ಸಂಸದರು, ಶಾಸಕರು, ಗಣ್ಯರು, ಸಾಹಿತಿಗಳು, ಮಾಧ್ಯಮಗಳ ಮುಖ್ಯಸ್ಥರು – ಸಂಪಾದಕರುಗಳು ಹಾಗೂ ಕಲಾವಿದರು ಪಾಲ್ಗೊಳ್ಳಲಿದ್ದಾರೆ.

ಎಲ್ಲ ಕಾರ್ಯಕ್ರಮಗಳಲ್ಲಿಯೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಗುರುಕೃಪೆಗೆ ಪಾತ್ರರಾಗಬೇಕಾಗಿ ಕೋರಿದೆ. ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳನ್ನು ನೇರವಾಗಿ https://www.youtube.com/@JSSMahavidyapeethaonline ನಲ್ಲಿ ವೀಕ್ಷಿಸಬಹುದು.

Share. Facebook Twitter Pinterest LinkedIn Tumblr Email WhatsApp
Previous Articleಹುದಿಕೇರಿ : ಜನತಾ ಪ್ರೌಢಶಾಲೆ ಆಡಳಿತ ಮಂಡಳಿಯಿಂದ ಎ.ಎಸ್.ಪೊನ್ನಣ್ಣ ಗೆ ಸನ್ಮಾನ
Next Article ಎಂ.ಸಿ.ವಾಸುದೇವ್ ನಿಧನ : ಕಾಂಗ್ರೆಸ್ ಸಂತಾಪ

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.