ಮಡಿಕೇರಿ ಜ.18 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವು ಜನವರಿ, 19 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆಯಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ಎಂ.ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಮಡಿಕೇರಿ ಸರಸ್ವತಿ ಡಿ.ಇಡಿ ಕಾಲೇಜಿನ ಪ್ರಾಂಶುಪಾಲರಾದ ಕುಮಾರ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಇತರರು ಪಾಲ್ಗೊಳ್ಳಲಿದ್ದಾರೆ.







