ನಾರಾಯಣಪುರ : ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

19/01/2023

ಯಾದಗಿರಿ ಜ.19 :  ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಿದರು.

ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್-ಚೆನ್ನೈಎಕ್ಸ್ಪ್ರೆಸ್ -ವೇ,ಪ್ಯಾಕೇಜ್ -3 ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯಪಾಲ ಡಾ. ತಾವರಚಂದ್ ಗೆಹ್ಲೋಟ್  ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ , ಕೇಂದ್ರದ ರಾಸಾಯನಿಕ, ರಸಗೊಬ್ಬರ ಹಾಗೂ ಹೊಸ‌ ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖುಬಾ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ನರಸಿಂಹ ಗೌಡ, ರಾಯಚೂರು ಸಂಸದ‌ ಅಮರೇಶಗೌಡ ನಾಯಕ ಮುಂತಾದವರು ಇದ್ದರು.