Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗುತ್ತಿಗೆ ಆಧಾರದಲ್ಲಿ ಭೂಮಿ ನೀಡಲು ಸೋಮಾವಾರಪೇಟೆ ರೈತ ಸಂಘ ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗುತ್ತಿಗೆ ಆಧಾರದಲ್ಲಿ ಭೂಮಿ ನೀಡಲು ಸೋಮಾವಾರಪೇಟೆ ರೈತ ಸಂಘ ಒತ್ತಾಯ

ಜನವರಿ 20, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.20 : ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ತೋಟವನ್ನಾಗಿ ಪರಿವರ್ತಿಸಿರುವ ಪ್ರಕರಣಗಳಲ್ಲಿ, ಗುತ್ತಿಗೆ ಆಧಾರದಲ್ಲಿ 30 ವರ್ಷಗಳ ಅವಧಿಗೆ ಜಾಗ ನೀಡುವ ಕುರಿತು ಸರ್ಕಾರ ಹೊರಡಿಸಿರುವ ಆದೇಶದಂತೆ ಕ್ರಮ ಕೈಗೊಳ್ಳಬೇಕೆ ಹೊರತು ಬಡಕೃಷಿಕರನ್ನು ತೆರವುಗೊಳಿಸಬಾರದೆಂದು ಕರ್ನಾಟಕ ರಾಜ್ಯ ರೈತ ಸಂಘದ ಸೋಮವಾರಪೇಟೆ ತಾಲ್ಲೂಕು ಶಾಖೆಯ ಸಂಚಾಲಕ ಗರಗಂದೂರು ಲಕ್ಷ್ಮಣ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಣ್ಣ ಬೆಳೆಗಾರರು ಅತಿಕ್ರಮಿಸಿ ತೋಟವನ್ನಾಗಿ ಪರಿವರ್ತಿಸಿರುವ ಸರ್ಕಾರಿ ಜಾಗವನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸರ್ಕಾರದ ಆದೇಶಕ್ಕೆ ವಿರುದ್ಧವಾಗಿ ಒತ್ತುವರಿ ಜಾಗದ ಕೃಷಿಯನ್ನು ನಾಶ ಪಡಿಸುವುದು ಸರಿಯಾದ ಕ್ರಮವಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಫಿ ತೋಟಗಳಲ್ಲಿ ಸಾಕಷ್ಟು ಮರಗಿಡಗಳನ್ನು ಬೆಳೆಸುವುದರಿಂದ ಅದು ಪರಿಸರ ಸಂರಕ್ಷಣೆಗೂ ಪೂರಕವಾಗಿದೆ. ಸರ್ಕಾರಿ ಪೈಸಾರಿ ಜಾಗದಲ್ಲಿರುವ ಕಾಫಿ ತೋಟಗಳನ್ನು ತೆರವುಗೊಳಿಸುವ ಭಾಗವಾಗಿ ಅಲ್ಲಿನ ಗಿಡಗಳನ್ನು ಕಡಿದು ಹಾಕುವುದು ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ರಾಷ್ಟ್ರಕ್ಕೆ ದೊಡ್ಡ ಮಟ್ಟದ ವಿದೇಶಿ ವಿನಿಮಯ ಗಳಿಸಿಕೊಡುವ ಕಾಫಿ ಉತ್ಪಾದನೆಯ ಮೇಲೂ ಇದು ಕೆಟ್ಟ ಪರಿಣಾಮ ಉಂಟು ಮಾಡಲಿದೆ ಎಂದು ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲೆಯ ವಿವಿಧೆಡೆ ತೋಟಗಳಾಗಿ ಪರಿವರ್ತಿತವಾಗಿರುವ ಸರ್ಕಾರಿ ಜಮೀನನ್ನು ಕಂದಾಯ, ಅರಣ್ಯ ಇಲಾಖೆ ಹಾಗೂ ಕೆಲವೆಡೆಗಳಲ್ಲಿ ಗ್ರಾಮಸ್ಥರೆ ರಾಜಕೀಯ ಕಾರಣಗಳ ಹಿನ್ನೆಲೆ ತೆರವುಗೊಳಿಸುವ ಮೂಲಕ ಬಡಕೃಷಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಕಾಫಿ ಗಿಡಗಳನ್ನು ಕಡಿದು ಒತ್ತುವರಿ ತೆರವುಗೊಳಿಸಿ ಕೃಷಿಕರ ಬದುಕನ್ನು ಸಂಕಷ್ಟಕ್ಕೆ ತಳ್ಳಿರುವ ಕೆಲವು ಪ್ರಕರಣಗಳ ಬಗ್ಗೆ ಜಿಲ್ಲಾಡಳಿತದ ಗಮನ ಸೆಳೆಯಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ರೈತ ಸಂಘದಿಂದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸೋಮವಾರಪೇಟೆ ತಾಲ್ಲೂಕಿನ ಹರಗ ಗ್ರಾಮ, ಹಾನಗಲ್ಲು ಶೆಟ್ಟಳ್ಳಿ, ಭಾಗಮಂಡಲ ಮತ್ತಿತರ ಗ್ರಾಮಗಳಲ್ಲಿ ಸಣ್ಣ ಕೃಷಿಕರಿಗೆ ಅನ್ಯಾಯವಾಗಿದೆ ಎಂದು ಲಕ್ಷ್ಮಣ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಸದಸ್ಯ ನಾಪಂಡ ಸುಬ್ಬಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಜ್ಞಾನಗಂಗಾ ವಸತಿ ಶಾಲೆಯ ಪ್ರಾಂಶುಪಾಲೆ ಜೆ.ಎ.ಸಂಜನಾಗೆ ಅತ್ಯುತ್ತಮ ಪ್ರಾಂಶುಪಾಲೆ ಪ್ರಶಸ್ತಿ

ನವೆಂಬರ್ 24, 2026

ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಡಾ.ಶೋಭಾ ಎಂ.ಎಸ್. ಅಧಿಕಾರ ಸ್ವೀಕಾರ

ನವೆಂಬರ್ 24, 2026

ನ.30 ರಂದು ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ

ನವೆಂಬರ್ 24, 2026

ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಡಾ.ಶೋಭಾ ಎಂ.ಎಸ್. ಅಧಿಕಾರ ಸ್ವೀಕಾರ

ನವೆಂಬರ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ನ.24 NEWS DESK : ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಸೂಕ್ಷ್ಮಜೀವವಿಜ್ಞಾನ ವಿಭಾಗದ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಶೋಭಾ…

ನ.30 ರಂದು ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ

ನವೆಂಬರ್ 24, 2026

ವಿದ್ಯಾರ್ಥಿಗಳು ಓದಿನ ಕಡೆ ಗಮನಹರಿಸಿ: ನ್ಯಾಯಾಧೀಶೆ ಶುಭ

ನವೆಂಬರ್ 24, 2026

ಮಡಿಕೇರಿ ಮಹಿಳಾ ಕಾಲೇಜಿನ ಗ್ರೇಡ್-1 ಪ್ರಾಂಶುಪಾಲರಾಗಿ ಪ್ರೊ. ದಯಾನಂದ ಕೆ.ಸಿ. ಅಧಿಕಾರ ಸ್ವೀಕಾರ

ನವೆಂಬರ್ 24, 2026

ಮಡಿಕೇರಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 24, 2026

ಚಿಕ್ಕಳುವಾರದಲ್ಲಿ ಡಿ.13 ಮತ್ತು14ರಂದು ‘ಸ್ಟಾರ್ ಗೇಸಿಂಗ್ ಫೆಸ್ಟಿವಲ್’

ನವೆಂಬರ್ 24, 2026

ಹುದಿಕೇರಿಯಲ್ಲಿ ಸಿಎನ್‌ಸಿ 11ನೇ ಮಾನವ ಸರಪಳಿ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಕೊಡವರ ಜನ್ಮಸಿದ್ಧ ಹಕ್ಕು: ಎನ್.ಯು.ನಾಚಪ್ಪ

ನವೆಂಬರ್ 24, 2026

ದೇವರಕೊಲ್ಲಿ : ಕಾರು ಕಂದಕಕ್ಕೆ ಉರುಳಿ ಯುವಕ ಸಾವು : ಇಬ್ಬರಿಗೆ ಗಾಯ

ನವೆಂಬರ್ 24, 2026

ನ.26 ರಂದು ಸಿಎನ್‍ಸಿಯಿಂದ 36ನೇ ವಾರ್ಷಿಕ ಕೊಡವ ನ್ಯಾಷನಲ್ ಡೇ ಆಚರಣೆ : ಡಾ.ಎಂ.ಎ.ಕಲಾಂ, ನ್ಯಾಯವಾದಿ ಕಿರಣ್ ನಾರಾಯಣ್, ಡಾ.ಮಾತಂಡ ಅಯ್ಯಪ್ಪ, ಪ್ರೊ.ಪಿ.ಎಚ್.ಮೊಹಮ್ಮದ್ ಭಾಗಿ

ನವೆಂಬರ್ 24, 2026

ಎಸ್ ಎಸ್ ಆಸ್ಪತ್ರೆ ವತಿಯಿಂದ 4ನೇ ವರ್ಷದ ಚಿತ್ರಕಲಾ ಸ್ಪರ್ಧೆ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣ

ನವೆಂಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.