Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಪ್ರಾಚೀನ ಜಾನಪದ ಮತ್ತು ಬುಡಕಟ್ಟು ಕಲೆ, ಸಂಸ್ಕೃತಿ ಉಳಿಸಿ ಬೆಳೆಸಿ : ಶಾಸಕ ಅಪ್ಪಚ್ಚು ರಂಜನ್ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪ್ರಾಚೀನ ಜಾನಪದ ಮತ್ತು ಬುಡಕಟ್ಟು ಕಲೆ, ಸಂಸ್ಕೃತಿ ಉಳಿಸಿ ಬೆಳೆಸಿ : ಶಾಸಕ ಅಪ್ಪಚ್ಚು ರಂಜನ್ ಕರೆ

ಜನವರಿ 20, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.20 : ಆಧುನಿಕ ಮೊಬೈಲ್ ಯುಗದಲ್ಲಿ ಮೊಬೈಲ್, ಟಿವಿ ಜೊತೆಗೆ ಪ್ರಾಚೀನ ಜಾನಪದ ಮತ್ತು ಬುಡಕಟ್ಟು ಕಲೆ ಹಾಗೂ ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಕರೆ ನೀಡಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಐನ್‍ಮನೆ ಕೆಫೆ ಸಹಕಾರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾನಪದ/ ಬುಡಕಟ್ಟು ನೃತ್ಯ ಸ್ಪರ್ಧಾ ಕಾರ್ಯಕ್ರಮಕ್ಕೆ ‘ದುಡಿ’ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸ್ತುತ ದಿನದಲ್ಲಿ ಮೊಬೈಲ್ ಇಲ್ಲದೆ ಬದುಕುವುದು ಕಷ್ಟಸಾಧ್ಯ ಎಂಬಂತಾಗಿದೆ. ಆದರೂ ಎಷ್ಟು ಬೇಕು ಅಷ್ಟನ್ನು ಬಳಸಿಕೊಂಡು, ಹಿಂದಿನ ಕಲೆ, ಜಾನಪದ ಸಂಸ್ಕೃತಿಗೂ ಒತ್ತು ನೀಡುವಂತಾಗಬೇಕು ಎಂದು ಶಾಸಕರು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಅಂಕಿ ಅಂಶಗಳನ್ನು ಕ್ಯಾಲಿಕ್ಯೂಲೇಟರ್ ಬಳಸಿ ಉತ್ತರಿಸುತ್ತೇವೆ. ಆದರೆ ಹಿಂದೆ ಮಗ್ಗಿ/ ಕೈ ಬೆರಳಿನ ಮೂಲಕ ಅಂಕಿ ಅಂಶಗಳ ಮಾಹಿತಿಯನ್ನು ನೀಡುತ್ತಿದ್ದರು ಎಂದರು.
ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಬದುಕುವಂತಾಗಬೇಕು. ವಿದ್ಯೆ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವಂತಾಗಬೇಕು. ವೃತ್ತಿ ಕೌಶಲತೆ ಹೆಚ್ಚಿಸಿಕೊಳ್ಳಬೇಕು. ಮಾಹಿತಿ ತಂತ್ರಜ್ಞಾನ ಯುಗದಲ್ಲಿ ವಿಫುಲ ಅವಕಾಶಗಳಿದ್ದು, ಅವುಗಳನ್ನು ಬಳಸಿಕೊಳ್ಳಬೇಕು. ಮಾನವರಾಗಿ ಬದುಕಬೇಕು ಎಂದು ಶಾಸಕರು ಸಲಹೆ ಮಾಡಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಬಿದ್ದಾಟಂಡ ಎಸ್.ತಮ್ಮಯ್ಯ ಅವರು ಮಾತನಾಡಿ ಕೊಡಗು ಜಿಲ್ಲೆ ಪ್ರಾಚೀನ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿದ್ದು, ಇಲ್ಲಿನ ಕಲೆ, ಸಂಸ್ಕೃತಿ, ಜಾನಪದ ಉಳಿಸಿ ಬೆಳೆಸುವಂತಾಗಬೇಕು ಎಂದು ಹೇಳಿದರು.
ಕೊಡವ ಉಮ್ಮತ್ತಾಟ್, ಬೊಳಕಾಟ್, ಕೋಲಾಟ್, ಕತ್ತಿಯಾಟ್, ಕವಿಗೋಷ್ಠಿ, ಜಾನಪದ ನೃತ್ಯಗಳು ಹೀಗೆ ಹಲವು ಪ್ರಾಚೀನ ಸಂಸ್ಕೃತಿ, ಕಲೆಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಕಾಡೆಮಿ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಪ್ರಯತ್ನಿಸಲಾಗಿದೆ ಎಂದರು.
ಕೊಡಗಿನ ಉದ್ದಗಲಕ್ಕೂ 52 ಕ್ಕೂ ಹೆಚ್ಚು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿ, ಪ್ರಾಚೀನ ಜಾನಪದ ಮತ್ತು ಬುಡಕಟ್ಟು ಸಂಸ್ಕೃತಿಯನ್ನು ಪಸರಿಸುವಲ್ಲಿ ಶ್ರಮಿಸಲಾಗಿದೆ ಎಂದು ಬಿ.ಎಸ್.ತಮ್ಮಯ್ಯ ಅವರು ನುಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲ ಅವರು ಮಾತನಾಡಿದರು. ಐನ್‍ಮನೆ ಕೆಫೆಯ ಮಾಲೀಕರಾದ ತಮ್ಮು ಪೂವಯ್ಯ, ತೀರ್ಪುಗಾರರಾದ ಪೂರ್ಣಿಮಾ, ಮೇಘ, ಅನಿಲ್ ಕುಮಾರ್, ಇತರರು ಇದ್ದರು.
ಜಾನಪದ ಹಾಗೂ ಬುಡಕಟ್ಟು ನೃತ್ಯ ಸ್ಪರ್ಧಾ ಕಾರ್ಯಕ್ರಮದಲ್ಲಿ ಕೊಡಗು, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಾಧ್ಯಾಪಕರಾದ ಕುಸುಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿವಕುಮಾರ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.