ಕುಶಾಲನಗರ ಜ.20 : ಕುಶಾಲನಗರ ಸಂಚಾರಿ ಪೊಲೀಸ್‍ಠಾಣಾ ಆಶ್ರಯದಲ್ಲಿ ಶಾಲಾ ಕಾಲೇಜು ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.
ಕುಶಾಲನಗರ ಬೈಚನಹಳ್ಳಿ ಬಳಿಯಿಂದ ಆರಂಭಗೊಂಡ ವಿದ್ಯಾರ್ಥಿಗಳ ಜಾಥಾ ಕಾರ್ಯಕ್ರಮಕ್ಕೆ ತಾಲೂಕು ತಹಶೀಲ್ದಾರ್ ಟಿ.ಎಂ ಪ್ರಕಾಶ್, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಡಾ.ಸತೀಶ್ ಚಾಲನೆ ನೀಡಿದರು. ಪಟ್ಟಣದ ಮುಖ್ಯ ರಸ್ತೆಗಳಲ್ಲಿ ವಿದ್ಯಾರ್ಥಿಗಳು ಮೆರವಣಿಗೆ ತೆರಳಿ ನಾಗರೀಕರಿಗೆ ಸಂಚಾರ ವ್ಯವಸ್ಥೆ ಬಗ್ಗೆ ಅರಿವು ಜಾಗೃತಿ ಮೂಡಿಸುವ ಘೋಷಣೆ ಕೂಗಿದರು.
ಈ ಸಂದರ್ಭ ಕುಶಾಲನಗರ ಡಿವೈಎಸ್‍ಪಿ ಗಂಗಾಧರಪ್ಪ, ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್, ಸಂಚಾರಿಠಾಣೆ ಅಧಿಕಾರಿಗಳಾದ ಹೆಚ್.ಜೆಚಂದ್ರಪ್ಪ, ಹೆಚ್.ಟಿಗೀತಾ ಮತ್ತು ಸಿಬ್ಬಂದಿಗಳು ಇದ್ದರು.







