ಸುಂಟಿಕೊಪ್ಪ, ಜ.22 : ಸುಂಟಿಕೊಪ್ಪ ಭಾರತೀಯ ಜನತಾ ಪಕ್ಷ ಶಕ್ತಿ ಕೇಂದ್ರದ ವತಿಯಿಂದ ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ಪೂರ್ವಭಾವಿ ಸಭೆಯನ್ನು ಭಾನುವಾರ ನಡೆಸಲಾಯಿತು.
ದ್ವಾರಕ ಹೋಟೆಲ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ದಕ್ಷಿಣ ಕನ್ನಡ ಜಿಲ್ಲೆಯ ಪ್ರಬಾರಿ ಬಿ.ಬಿ.ಭಾರತೀಶ್, ವಿಧಾನಸಭಾ ಕ್ಷೇತ್ರದ ಪ್ರಬಾರಿಗಳಾದ ವಿಕ್ರಂ, ಯುವ ಮೋರ್ಚಾ ಸಂಚಾಲಕ ಮಹೇಶ್ ತಿಮ್ಮಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾದಪ್ಪ ಬೂತ್ ಮಟ್ಟದ ಕಾರ್ಯಕರ್ತರಿಗೆ ವಿಜಯ ಸಂಕಲ್ಪ ಯಾತ್ರೆಯ ಬಗ್ಗೆ ಮಾಹಿತಿಯನ್ನು ನೀಡಿದರು.








