ಖಾಸಗಿ ಬಸ್ ಡಿಕ್ಕಿಯಾಗಿ ಜಿಂಕೆ ಸಾವು

23/01/2023

ಮಡಿಕೇರಿ ಜ.23 : ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ನಡೆದಿದೆ.
ಕುಟ್ಟದಿಂದ ವಿರಾಜಪೇಟೆ ಕಡೆಗೆ ಬರುತ್ತಿದ್ದ ಕೇರಳ ನೋಂದಣಿ ಸಂಖ್ಯೆಯ ಖಾಸಗಿ ಬಸ್ ನಾಲ್ಕೇರಿ-ಕುಟ್ಟ ಮುಖ್ಯ ರಸ್ತೆಯಲ್ಲಿ ಜಿಂಕೆಗೆ ಡಿಕ್ಕಿಯಾಗಿದೆ. ಕುಟ್ಟ ಸರ್ಕಾರಿ ಶಾಲೆ ಬಳಿ ಈ ಘಟನೆ ನಡೆದಿದ್ದು, ಕುಟ್ಟ ವಿಭಾಗದ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.