ನಾಪೋಕ್ಲು ಜ.23 : ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಬಾಲಕಿಯೊಬ್ಬಳು ಕಾಫಿ ಗಿಡಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಕಕ್ಕಬ್ಬೆ ಸಮೀಪದ ಕುಂಜಿಲ ಗ್ರಾಮದಲ್ಲಿ ನಡೆದಿದೆ.
ಅಸ್ಸಾಂ ಮೂಲದ ಕಾರ್ಮಿಕ ತಾಜುದ್ದೀನ್ ಎಂಬುವವರ ಪುತ್ರಿ ತಸ್ಲೀಮ (13) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ. ತಂದೆ, ತಾಯಿ ತೋಟದ ಕೆಲಸಕ್ಕೆ ತನ್ನನ್ನು ಕರೆದುಕೊಂಡು ಹೋಗಲಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ತಸ್ಲೀಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
ನಾಪೋಕ್ಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ವರದಿ : ಝಕರಿಯ ನಾಪೋಕ್ಲು)








