Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*
  • *ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*
  • *ಉಮೇಶ್ ಕುಮಾರ್ ಅವರಿಗೆ ಮಡಿಕೇರಿ ಗ್ರಾಮಾಂತರ ವೃತ್ತದ ಹೆಚ್ಚುವರಿ ಜವಾಬ್ದಾರಿ*
  • *ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*
  • *ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*
  • *ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆಯಲ್ಲಿ ಜೆಡಿಎಸ್ ಸಭೆ : ಕಾಂಗ್ರೆಸ್‌ನಲ್ಲಿ ಕಮಲ ಕಾಂಗ್ರೆಸಿಗರದ್ದೇ ಕಾರುಬಾರು : ಪ್ರಜ್ವಲ್ ರೇವಣ್ಣ ವ್ಯಂಗ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆಯಲ್ಲಿ ಜೆಡಿಎಸ್ ಸಭೆ : ಕಾಂಗ್ರೆಸ್‌ನಲ್ಲಿ ಕಮಲ ಕಾಂಗ್ರೆಸಿಗರದ್ದೇ ಕಾರುಬಾರು : ಪ್ರಜ್ವಲ್ ರೇವಣ್ಣ ವ್ಯಂಗ್ಯ

ಜನವರಿ 24, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜ.24 : ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ.  ಕಾಂಗ್ರೆಸ್‌ನಲ್ಲಿ ಕಮಲ ಕಾಂಗ್ರೆಸಿಗರದ್ದೇ ಕಾರುಬಾರು, ಮುಸ್ಲಿಂ ಸಮುದಾಯ ಕಾಂಗ್ರೆಸ್‌ಗೆ ಮತ ನೀಡಿದರೆ ಕೋಮುವಾದಿ ಬಿಜೆಪಿಗೆ ಮತ ನೀಡಿದಂತೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಸದಸ್ಯ ಹಾಗೂ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಹೇಳಿದರು.
ಜೆಡಿಎಸ್ ಕ್ಷೇತ್ರ ಸಮಿತಿ ವತಿಯಿಂದ ಪಟ್ಟಣದ ಒಕ್ಕಲಿಗರ ಸಮುದಾಯಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ಕೋಮುವಾದಿಗಳು ಬುರ್ಕಾ ಧರಿಸಿದ ಮುಸ್ಲಿಂ ಹೆಣ್ಣುಮಕ್ಕಳನ್ನು ಅಟ್ಟಿಸಿಕೊಂಡು ಹೋದ ಸಂದರ್ಭದಲ್ಲೂ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಬಾಯಿಗೆ ಬೀಗ ಹಾಕಿಕೊಂಡಿದ್ದರು. ಯಾರು ಮಾತನಾಡದಂತೆ, ಹೇಳಿಕೆ ಕೊಡದಂತೆ ಕಟ್ಟಾಪ್ಪಣೆ ಕೊಟ್ಟಿದರು. ಆದರೆ ಎಚ್.ಡಿ.ಕುಮಾರಸ್ವಾಮಿ, ಮುಸ್ಲಿಂ ಮಹಿಳೆಯರ ಪರವಾಗಿ ಹೇಳಿಕೆ ನೀಡಿ ಅವರಿಗೆ ಮಾನಸಿಕ ಧೈರ್ಯ ತುಂಬಿದರು ಎಂದರು.
ರಾಜ್ಯದಲ್ಲಿ ಜಾತ್ಯಾತೀತ ಜನತಾದಳ ಅಧಿಕಾರಕ್ಕೆ ಬಂದು, ಮುಂದಿನ ಮೂರು ತಿಂಗಳಲ್ಲಿ ರಾಜ್ಯದ ರೈತರು ಮತ್ತು ಸ್ತ್ರೀಶಕ್ತಿ ಸಂಘಗಳ ಸದಸ್ಯರ ಸಂಪೂರ್ಣ ಸಾಲವನ್ನು ಮನ್ನಾ ಮಾಡಲು ಎಚ್.ಡಿ.ಕುಮಾರಸ್ವಾಮಿಯವರು ಮಾತುಕೊಟ್ಟಿದ್ದಾರೆ. ಮಾತಿನಂತೆ ನಡೆಯುವುದು ಜೆಡಿಎಸ್ ಹೆಗ್ಗಳಿಕೆ ಎಂದರು.
ಪಕ್ಷದ ಹಿರಿಯ ಮುಖಂಡರಾದ ಹೆಚ್.ಡಿ.ದೇವೆಗೌಡರು, ಎಚ್.ಡಿ.ಕುಮಾರಸ್ವಾಮಿ ಹಾಗು ಎಚ್.ಡಿ.ರೇವಣ್ಣ ಅವರು ಕೊಟ್ಟ ಭರವಸೆಗಳನೆಲ್ಲಾ ಈಡೇರಿಸಿದ್ದಾರೆ. ಸಮ್ಮೀಶ್ರ ಸರ್ಕಾರವಿದ್ದಾಗಲು ರೈತರ ಸಾಲಮನ್ನಾ ಮಾಡಿದ್ದಾರೆ. ಬಡವರು, ದೀನದಲಿತರು, ಹಿಂದುಳಿದವರು ಹಾಗು ಅಲ್ಪಸಂಖ್ಯಾಯತರಿಗೆ ಅನೇಕ ಯೋಜನೆಗಳ ಸೌಲಭ್ಯಗಳನ್ನು ನೀಡಿದ್ದಾರೆ ಎಂದರು.
ಕಾಫಿ ಉದ್ಯಮದಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕವಾಗಿ 12ಸಾವಿರ ಕೋಟಿ ರೂ., ಹಣ ವಿದೇಶಿ ವಿನಿಮಯ ಮತ್ತು ತೆರಿಗೆಯಿಂದ ಬರುತ್ತಿದೆ. ಕೇವಲ 500ಕೋಟಿ ರೂ.ಗಳನ್ನು ಕಾಫಿ ಮಂಡಳಿಯ ಮೂಲಕ ಕಾಫಿ ಉದ್ಯಮಕ್ಕೆ ನೀಡಿ ಎಂದು ಕೇಂದ್ರ ವಾಣಿಜ್ಯ ಮಂತ್ರಿಗಳಿಗೆ ಮನವಿ ಪತ್ರದ ಮೂಲಕ ಬೇಡಿಕೆಯಿಟ್ಟಿದ್ದೆ. ಆದರೆ ನನ್ನ ಮನವಿ ಪತ್ರವನ್ನು ಕಸದ ಬುಟ್ಟಿಗೆ ಹಾಕುವ ಮೂಲಕ ಕಾಫಿ ಬೆಳೆಗಾರರಿಗೆ ಕೇಂದ್ರ ಅನ್ಯಾಯ ಮಾಡಿದೆ ಎಂದು ದೂರಿದರು.
ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಕಾಫಿ ಬೆಳೆಯುವ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆಗಾರರು ಸ್ವಾಭಿಮಾನಿಗಳು, ಕೈಯಿಂದ ಕೊಟ್ಟವರೆ ಹೊರತು ಬೇಡಿದವರಲ್ಲ. ಕಾಫಿ ಉದ್ಯಮ ನಶಿಸುತ್ತಿದೆ. ಕೇಂದ್ರ ಸರ್ಕಾರಕ್ಕೆ ಬರುವ ಆದಾಯವೂ ಸತ್ತು ಹೋಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಬಲ್ ಇಂಜಿನ್ ಸರ್ಕಾರ ಎಂದು ರಾಜ್ಯದ ಎಂ.ಪಿ.ಗಳು ಕೂಗುತ್ತಿದ್ದಾರೆ. ಇಂಜಿನ್ ಇಲ್ಲ ಭೋಗಿ ಮಾತ್ರ ಹೋಗುತ್ತಿದೆ. ರಾಜ್ಯ ಜಿಎಸ್‌ಟಿ ಪಾಲು ತರಲಾಗದ ಸಂಸದರಿಗೆ ಮತದಾರರು ಯಾತಕ್ಕಾದರೂ ಮತ ನೀಡುತ್ತಾರೋ ಗೊತ್ತಿಲ್ಲ. ಕಾಫಿ ಬೆಳೆಗಾರರ, ರೈತರ, ಬಡವರ ಸಮಸ್ಯೆಗಳನ್ನು ಕೇಂದ್ರ ಸರ್ಕಾರಕ್ಕೆ ಹೇಳಲು ಸಾಧ್ಯವಿಲ್ಲದ ಸಂಸದರು ಏತಕ್ಕಾಗಿ ಎಂದು ಪ್ರಶ್ನಿಸಿದರು.
15 ದಿನದಲ್ಲೇ ನೂರಾರು ಜೆಸಿಬಿ ಕಳುಹಿಸಿ ರಸ್ತೆ ಸರಿಪಡಿಸಿ, ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಟ್ಟ ಕೀರ್ತಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಲ್ಲಬೇಕು. ಎಚ್.ಡಿ.ರೇವಣ್ಣ ಅವರು ಲೋಕೋಪಯೋಗಿ ಸಚಿವರಾಗಿದ್ದ ಕಾಲದಲ್ಲೇ ಸೋಮವಾರಪೇಟೆ ತಾಲ್ಲೂಕಿನ ರಸ್ತೆ ಅಭಿವೃದ್ಧಿಗೆ 110ಕೋಟಿ ರೂ,ಗಳು, ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕಿಗೆ ತಲಾ 5 ಕೋಟಿ ರೂ.ಗಳನ್ನು ನೀಡಲಾಗಿ, ಆ ಅನುದಾನದಲ್ಲೇ ಇಂದು ರಸ್ತೆಗಳಾಗಿವೆ ಎಂದರು.
ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದರು. ಬಿಜೆಪಿಯವರು ಜೆಡಿಎಸ್ ಬಗ್ಗೆ ಕುಟುಂಬ ರಾಜಕಾರಣ ಎನ್ನುತ್ತಾರೆ. ಕಳೆದ ಬಾರಿಯ ಎಂ.ಎಲ್.ಸಿ. ಪ್ರಸಕ್ತ ವರ್ಷದ ಎಂ.ಎಲ್.ಸಿ ಟಿಕೇಟ್ ಒಂದೇ ಕುಟುಂಬದವರಿಗೆ ಕೊಟ್ಟಿಲ್ಲವೆ? ಎಂದು ಪ್ರಶ್ನಿಸಿದರು.
ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ ಮಾತನಾಡಿ, ಭ್ರಷ್ಟ ವ್ಯವಸ್ಥೆಯಿಂದ ಕೊಡಗು ಜಿಲ್ಲೆ ನಲುಗಿದೆ. ಆಡಳಿತ ವ್ಯವಸ್ಥೆ ಕುಸಿದಿದೆ. ಕಮಿಷನ್ ದಂಧೆಯಿಂದ ಎಲ್ಲಾ ಕಾಮಗಾರಿಗಳು ಕಳಪೆಯಾಗಿವೆ. ಕಳೆದ 28 ವರ್ಷಗಳಿಂದ ಜಿಲ್ಲೆಯ ಅಭಿವೃದ್ಧಿಯಲ್ಲಿ ಸಂಪೂರ್ಣ ಹಿನ್ನೆಡೆಯಾಗಿದೆ. ಬಿಜೆಪಿ ಕುಟುಂಬವೊಂದರ ತೆಕ್ಕೆಯಲ್ಲಿದೆ ಎಂದು ದೂರಿನ ಸುರಿಮಳೆಗೈದರು.
ಇಲ್ಲಿನ ಶಾಸಕರು ತಮ್ಮ ಕಾರಿನಲ್ಲಿ ಹಾರೆ, ಪಿಕಾಸಿ, ಇಟ್ಟುಕೊಂಡು ಹೊದಲ್ಲೆಲ್ಲಾ ಭೂಮಿ ಪೂಜೆ ಮಾಡುತ್ತಿದ್ದಾರೆ. ಆದರೆ ಗ್ರಾಮೀಣ ಭಾಗದಲ್ಲಿ ರಸ್ತೆ ಹೊಂಡಗಳಿಂದ ಕೂಡಿವೆ ಎಂದು ಕುಟುಕಿದರು. 2018ರಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ ಸಂದರ್ಭ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು 7 ಬಾರಿ ಬಂದಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಿ. ಜನರ ಕಷ್ಟಕ್ಕೆ ಸ್ಪಂದಿಸಿದರು. ಒಂದು ಸಾವಿರ ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಬಿಜೆಪಿಯಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಜನರು ರೋಷಿದ್ದಾರೆ. ಜೆಡಿಎಸ್ ಗೆಲವು ಶತಸಿದ್ದ ಎಂದರು.
ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್.ಸುರೇಶ್ ಮಾತನಾಡಿ ರಾಜ್ಯದಲ್ಲಿ ರೈತರು, ಬಡವರು, ಅಲ್ಪಸಂಖ್ಯಾತರು ನೆಮ್ಮದಿಯಾಗಿ ಬದುಕಲು ಪ್ರಾದೇಶಿಕ ಪಕ್ಷ ಜೆಡಿಎಸ್ ಆಡಳಿತ ಚುಕ್ಕಾಣಿ ಹಿಡಿಯಲೇ ಬೇಕು ಎಂದರು.
ಬಿಜೆಪಿ, ಕಾಂಗ್ರೆಸ್ ತೊರೆದ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಗೊಂಡರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ನ್ಯಾಷನಲ್ ಕೌನ್ಸಿಲ್ ನಿಂದ ಸಂಭ್ರಮದ ಎಡ್ಮ್ಯಾರ್ 1 ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಮೂರ್ನಾಡು : ಏ.15 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.14  NEWS DESK  :  66/33/11 ಕೆ.ವಿ MUSS ಮಗ್ಗುಲ, ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ 33ಏಗಿ…

*ಶನಿವಾರಸಂತೆ ಅಂಬೇಡ್ಕರ್ ಭವನ ನಿರ್ಮಾಣ ಸಮಿತಿಯಿಂದ ಡಾ.ಅಂಬೇಡ್ಕರ್ ಜಯಂತಿಯ ಅರ್ಥಪೂರ್ಣ ಆಚರಣೆ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.15 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 14, 2026

*ಉಮೇಶ್ ಕುಮಾರ್ ಅವರಿಗೆ ಮಡಿಕೇರಿ ಗ್ರಾಮಾಂತರ ವೃತ್ತದ ಹೆಚ್ಚುವರಿ ಜವಾಬ್ದಾರಿ*

ಏಪ್ರಿಲ್ 14, 2026

*ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕ.ರ.ವೇ ಸ್ವಾಭಿಮಾನಿ ಬಣದ ಕೊಡಗು ಘಟಕದಿಂದ ಸನ್ಮಾನ*

ಏಪ್ರಿಲ್ 14, 2026

*ಹೊಸಪಟ್ಟಣದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಸವೇಶ್ವರ ಕನ್ನಂಬಾಡಮ್ಮ ದೇವರ ಪೂಜೋತ್ಸವ*

ಏಪ್ರಿಲ್ 14, 2026

*ಹೆಬ್ಬಾಲೆಯಲ್ಲಿ ಫುಟ್ ಪಲ್ಸ್ ಉಚಿತ ಥೆರಪಿ ಶಿಬಿರ*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 2 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೈದಾನ 1 >>> ಏ.14 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 14, 2026

*ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*

ಏಪ್ರಿಲ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.