ಯಡೂರು ಬಿ.ಟಿ.ಸಿ.ಜಿ ಕಾಲೇಜು : ಪೋಷಕರ ಮತ್ತು ಹಳೆಯ ವಿದ್ಯಾರ್ಥಿಗಳ ಸಭೆ ಜ.30 ಕ್ಕೆ

24/01/2023

ಸೋಮವಾರಪೇಟೆ ಜ.24 : ಸಮೀಪದ ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ
ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಭೆಯನ್ನು ಜನವರಿ 30 ಸೋಮವಾರ ಬೆಳಗ್ಗೆ 10 ಗಂಟೆಯಿಂದ ಕಾಲೇಜಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ಎಂಪಿಅಪ್ಪಚ್ಚುರಂಜನ್ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಕರೆಯಲಾಗಿದೆ. ಅಂದು 11 ಗಂಟೆಗೆ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಸಹ ಹಮ್ಮಿಕೊಳ್ಳಲಾಗಿದೆಯೆಂದು ಕಾಲೇಜಿನ ಪ್ರಾಂಶುಪಾಲ ಹೆಚ್.ಎನ್.ರಾಜು ಅವರು ತಿಳಿಸಿದ್ದಾರೆ. ಹಳೆಯ ವಿದ್ಯಾರ್ಥಿಗಳ ಸಂಘದ ಮಾಹಿತಿಗಾಗಿ ಎಸ್.ಮಹೇಶ್ (ಕಾಲೇಜಿ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು) 9481059223, ಹಳೆಯ ವಿದ್ರ‍್ಥಿಗಳ ಸಭೆಯ ಉಸ್ತುವಾರಿ ಭಾನುಪ್ರಕಾಶ್ – 9449226443 ಸುನಿಲ್ ಎಂ.ಎಸ್. ಇತಿಹಾಸ ಉಪನ್ಯಾಸಕರು – 8904040640 ಅವರನ್ನು ಸಂಪರ್ಕಿಸುವಂತೆ ಪತ್ರಿಕಾ ಹೇಳಿಕೆ ನೀಡಿದ್ದಾರೆ.