Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*
  • *ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*
  • *AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*
  • *ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*
  • *ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
  • *ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*
  • *ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 
  • *ನಮ್ಮೂರ ಶಾಲೆ ನಮ್ಮದು, ನಮ್ಮೂರಲ್ಲೆ ಉಳಿಯಲಿ : ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ಹಾಗೂ ಗ್ರಾಮಸ್ಥರ ಆಗ್ರಹ*
  • *ನಿವೇಶನಕ್ಕಾಗಿ ಆಗ್ರಹಿಸಿ ಮೇ 29 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*
  • *ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : ಸಾಂಬಾರ ಬೆಳೆ ಉತ್ಪಾದನೆಯಲ್ಲಿ ರಾಜ್ಯ ಮುಂಚೂಣಿ : ಡಾ.ಜಾನ್ಸಿ ಮಣಿತೋಟಂ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ : ಸಾಂಬಾರ ಬೆಳೆ ಉತ್ಪಾದನೆಯಲ್ಲಿ ರಾಜ್ಯ ಮುಂಚೂಣಿ : ಡಾ.ಜಾನ್ಸಿ ಮಣಿತೋಟಂ

ಜನವರಿ 24, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.24 : ಕರ್ನಾಟಕ ರಾಜ್ಯವು ಭಾರತದಲ್ಲಿಯೇ ಸಂಬಾರ ಬೆಳೆಗಳಿಗೆ ಅತ್ಯುತ್ತಮ ಮಾರುಕಟ್ಟೆಯಾಗಿದ್ದು, ಸಾಂಬಾರ ಬೆಳೆಗಳ ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ 6 ನೇ ಸ್ಥಾನ ಪಡೆದಿದೆ ಎಂದು ಭಾರತೀಯ ಸಾಂಬಾರ ಮಂಡಳಿಯ ಉಪ ನಿರ್ದೇಶಕರಾದ ಡಾ.ಜಾನ್ಸಿ ಮಣಿತೋಟಂ ಅವರು ಹೇಳಿದ್ದಾರೆ.
ನಗರದ ಹೋಟೆಲ್ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಂಬಾರ ಮಂಡಳಿಯಿAದ ಆಯೋಜಿತ ಸಾಂಬಾರ ಪದಾರ್ಥಗಳ ಖರೀದಿದಾರರ ಮತ್ತು ಮಾರಾಟಗಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಏಲಕ್ಕಿ, ಕರಿಮೆಣಸು, ಅರಿಸಿಣ, ಲವಂಗ, ಶುಂಠಿ ಸೇರಿದಂತೆ 50 ವೈವಿಧ್ಯಮಯ ಸಾಂಬಾರ ಪದಾರ್ಥಗಳನ್ನು ಕರ್ನಾಟಕದಲ್ಲಿ ಬೆಳೆಯಲಾಗುತ್ತಿದೆ. ವಿಶ್ವದಲ್ಲಿಯೇ ಅತ್ಯುತ್ತಮ ಗುಣಮಟ್ಟದ ಸಂಬಾರ ಬೆಳೆಗಳಿಗೆ ಕನ್ನಡನಾಡು ಹೆಸರಾಗಿದೆ. ಸುಮಾರು 3.75 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಂಬಾರ ಬೆಳೆ ಬೆಳೆಸಲಾಗುತ್ತಿದ್ದು, 7.9 ಲಕ್ಷ ಮೆಟ್ರಿಕ್ ಟನ್ ಸಂಬಾರ ಪದಾರ್ಥ ಉತ್ಪಾದಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕೇಂದ್ರ ಸರ್ಕಾರದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಂಬಾರ ಮಂಡಳಿಯು ಸಾಂಬಾರ ಪದಾರ್ಥಗಳ ರಫ್ತಿಗೆ ಆದ್ಯತೆ ನೀಡಿದ್ದು, ಮಾರಾಟಗಾರರ ಮತ್ತು ಖರೀದಿದಾರರ ನಡುವೆ ಸಮನ್ವಯತೆ ಸಾಧಿಸುವಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದರು.
ಕೊಡಗು ಕಾಫಿ ಸೊಸೈಟಿಯ ಅಧ್ಯಕ್ಷರಾದ ಎಂ.ಬಿ.ದೇವಯ್ಯ ಅವರು ಮಾತನಾಡಿ ಜಿಲ್ಲೆಯಲ್ಲಿ ಏಲಕ್ಕಿ ಬಿಟ್ಟು ಬೇರೆ ಬೆಳೆಗಳನ್ನು ಚೆನ್ನಾಗಿ ಬೆಳೆಯಲಾಗುತ್ತದೆ. ಆದರೆ ಜಿಲ್ಲೆಯ ಗಡಿಭಾಗವಾದ ಕರಿಕೆಯಲ್ಲಿ ಸ್ವಲ್ಪಮಟ್ಟಿಗೆ ಏಲಕ್ಕಿಯನ್ನು ಬೆಳೆಯಲಾಗುತ್ತದೆ. ಏಲಕ್ಕಿ ಬೆಳೆಗೆ ಕಟ್ಟೆ ರೋಗದಿಂದಾಗಿ ಬೆಳೆ ಬೆಳೆಯಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಈ ರೋಗಕ್ಕೆ ಔಷಧಿಯನ್ನು ಕಂಡುಹಿಡಿದು ರೈತರಿಗೆ ಏಲಕ್ಕಿ ಬೆಳೆಯಲು ಪ್ರೇರೇಪಿಸಬೇಕಿದೆ ಎಂದು ಅವರು ಹೇಳಿದರು.
ರೈತರಿಗೆ ಸಾಂಬಾರ ಪದಾರ್ಥಗಳನ್ನು ಬೆಳೆಯಲು ಸೂಕ್ತ ಮಾರ್ಗದರ್ಶನ ನೀಡುವುದು ಅಗತ್ಯವಾಗಿದೆ. ಸಾಂಬಾರ ಮಂಡಳಿ ಈ ದಿಸೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಶ್ಲಾಘಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಾಕಷ್ಟು ಅವಕಾಶಗಳಿದ್ದು, ರೈತರಿಗೆ ಒಳ್ಳೆಯ ಮಾರುಕಟ್ಟೆ ಸಿಗಬೇಕು ಆಗ ಮಾತ್ರ ರೈತರು ಬೆಳೆದ ಬೆಳೆಗೆ ಉತ್ತಮ ಲಾಭ ದೊರೆತಂತಾಗುತ್ತದೆ ಅವರು ಹೇಳಿದರು.
ಜಿಲ್ಲೆಯಲ್ಲಿ ಸಾಂಬಾರ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಕಾಳು ಮೆಣಸು, ಏಲಕ್ಕಿ, ಶುಂಠಿ ಬೆಳೆಗಳ ಜೊತೆಗೆ ಕಾಫಿ, ಕಿತ್ತಳೆ ಹೀಗೆ ಹಲವು ಬೆಳೆ ಬೆಳೆಯಲಾಗುತ್ತದೆ. ಸಾಂಬಾರ ಮಂಡಳಿ, ರೈತರಿಗೆ ಹಾಗೂ ಮಾರಾಟಗಾರರಿಗೆ ಜಿಲ್ಲಾಡಳಿತ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ಹೇಳಿದರು
ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ಜಿ.ಮೇದಪ್ಪ ಅವರು ಮಾತನಾಡಿ ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುವಂತಾಗಬೇಕು ಎಂದು ಹೇಳಿದರು.
ರಾಜ್ಯದ ವಿವಿಧೆಡೆಗಳಿಂದ 150 ಕ್ಕೂ ಅಧಿಕ ಖರೀದಿದಾರರು ಮತ್ತು ಮಾರಾಟಗಾರರು 1 ದಿನದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಸಾಂಬಾರ ಪದಾರ್ಥಗಳ ಭವಿಷ್ಯದ ಕುರಿತು ಚರ್ಚಿಸಿದರು.
ಸಾಂಬಾರ ಮಂಡಳಿಯ ಸದಸ್ಯರಾದ ಕೆ.ಎಸ್.ಸತ್ಯನಾರಾಯಣ್, ಹುಬ್ಬಳಿಯ ಕೆಎಸ್‌ಎಸ್‌ಡಿಬಿ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಆರ್.ಗಿರೀಶ್, ಬಸಾನಿ ಆಗ್ರೋ ಇನ್ನೋವೇಷನ್ ಪ್ರೈಲಿ ನ ರಫ್ತುದಾರರಾದ ಡಾ.ಸ್ವರೂಪ ರೆಡ್ಡಿ, ಮಡಿಕೇರಿ ಸಾಂಬಾರ ಮಂಡಳಿಯ ಸಹಾಯಕ ನಿರ್ದೇಶಕರಾದ ಬಿಜು ಎಸ್.ಎಸ್., ಸಂಬಾರ ಮಂಡಳಿಯ ಹಿರಿಯ ಕ್ಷೇತ್ರ ಅಧಿಕಾರಿ ಎಸ್.ಕುಮಾರ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂಗಾರು ಸಂದರ್ಭದಲ್ಲಿ ಅಗತ್ಯ ಮುನ್ನೆಚ್ಚರ ವಹಿಸಿ : ಡಾ.ಎನ್.ವಿ.ಪ್ರಸಾದ್ ಸೂಚನೆ*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ : ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಶಾಸಕ ಡಾ.ಮಂತರ್ ಗೌಡ*

ಮೇ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 26 NEWS DESK : ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳು ಗ್ರಾಮ ಮಟ್ಟಕ್ಕೂ ತಲುಪುತ್ತಿದ್ದು,…

*AI ಎನ್ನುವುದು ಕೇವಲ ತಂತ್ರಜ್ಞಾನದ ಚರ್ಚೆಯಲ್ಲ — ಇದು ಮೂಲಭೂತವಾಗಿ ನಂಬಿಕೆ, ಜವಾಬ್ದಾರಿ, ಪಾರದರ್ಶಕತೆ ಮತ್ತು ನಾಗರಿಕರ ಮೇಲಿನ ಪ್ರಭಾವ : ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್*

ಮೇ 26, 2026

*ಪ್ರವಾಸೋದ್ಯಮ  ಸಂಘ-ಸಂಸ್ಥೆಗಳ ಸಭೆ : ಕೊಡಗಿನ ಆತಿಥ್ಯ ಪ್ರವಾಸೋದ್ಯಮದ ಬಗ್ಗೆ ಆದಾರರಹಿತ ಟೀಕೆಗಳಿಗೆ ಕಡಿವಾಣ ಅಗತ್ಯ : ದಿನೇಶ್ ಕಾಯ೯ಪ್ಪ*

ಮೇ 26, 2026

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 2026

*ಮೇ 29 ಮತ್ತು 30 ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ*

ಮೇ 26, 2026

*ಮಡಿಕೇರಿ ನಗರಸಭೆಯ ಬಿಜೆಪಿ ಆಡಳಿತ ಮಂಡಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ* 

ಮೇ 26, 2026

*ನಮ್ಮೂರ ಶಾಲೆ ನಮ್ಮದು, ನಮ್ಮೂರಲ್ಲೆ ಉಳಿಯಲಿ : ಎಐಡಿಎಸ್‍ಓ ವಿದ್ಯಾರ್ಥಿ ಸಂಘಟನೆ ಹಾಗೂ ಗ್ರಾಮಸ್ಥರ ಆಗ್ರಹ*

ಮೇ 26, 2026

*ನಿವೇಶನಕ್ಕಾಗಿ ಆಗ್ರಹಿಸಿ ಮೇ 29 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*

ಮೇ 26, 2026

*ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*

ಮೇ 26, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.