ಸುಂಟಿಕೊಪ್ಪ ಪೋಲಿಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಎಂ.ಸಿ.ಶ್ರೀಧರ್ ಅಧಿಕಾರ ಸ್ವೀಕಾರ

24/01/2023

ಸುಂಟಿಕೊಪ್ಪ,ಜ.24: ಸುಂಟಿಕೊಪ್ಪ ಪೋಲಿಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಎಂ.ಸಿ.ಶ್ರೀಧರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬಿಂಡಿಗನೆಲ್ಲಿಯಲ್ಲಿ ಪೊಲೀಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಂಟಿಕೊಪ್ಪ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ಅವರು ನೂತನ ಠಾಣಾಧಿಕಾರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು.