Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
  • *ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*
  • *ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*
  • *ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*
  • *ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*
  • *ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಂತಿಮ ಸಿದ್ಧತೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಂತಿಮ ಸಿದ್ಧತೆ

ಜನವರಿ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.25 : ಮಡಿಕೇರಿ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಜ.28 ರಂದು ಡಾ.ವಿಜಯ್ ಪೂಣಚ್ಚ ತಂಬಂಡ ಅವರ ಅಧ್ಯಕ್ಷತೆಯಲ್ಲಿ ಬೆಟ್ಟಗೇರಿಯಲ್ಲಿ ನಡೆಯಲಿದೆ. ಸಂಭ್ರಮದ ಸಮ್ಮೇಳನಕ್ಕಾಗಿ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನವೀನ್ ಅಂಬೇಕಲ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ತುಂಬು ಸಹಕಾರದೊಂದಿಗೆ ಕನ್ನಡದ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ಬೆಳಿಗ್ಗೆ 8 ಉದಯ ವಿದ್ಯಾಸಂಸ್ಥೆಯಲ್ಲಿ ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷ ನಾಪಂಡ ರ್ಯಾಲಿ ಮಾದಯ್ಯ ರಾಷ್ಟ್ರ ಧ್ವಜಾರೋಹಣ, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಕನ್ನಡ ಸಾಹಿತ್ಯ ಪರಿಷತ್ತು ಧ್ವಜಾರೋಹಣ, ಕಸಾಪ ತಾಲೂಕು ಅಧ್ಯಕ್ಷ ನವೀನ್ ಅಂಬೆಕಲ್ಲು ಕನ್ನಡ ಧ್ವಜಾರೋಹಣ ನೆರವೇರಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ದೊರಕಲಿದೆ ಎಂದರು.
ವಿವಿಧ ದ್ವಾರಗಳ ಉದ್ಘಾಟನೆ : ಬೆಳಿಗ್ಗೆ 8.30ಕ್ಕೆ ಏಕಕಾಲಕ್ಕೆ ಗಣ್ಯರ ನೆನಪಿನ ದ್ವಾರ ಉದ್ಘಾಟನೆಯಾಗಲಿದೆ. ಹೊಸೂರು ಜೋಯಪ್ಪ ನೆನಪಿನ ದ್ವಾರವನ್ನು ಡಿಸಿಸಿ ಬ್ಯಾಂಕ್ ನಿವೃತ್ತ ಸಹಾಯಕ ವ್ಯವಸ್ಥಾಪಕರು ತೋರೆರ ಎಂ.ಮುದ್ದಯ್ಯ ಅವರು, ಕೆ.ಸಿ.ರಾಮಮೂರ್ತಿ ಮತ್ತು ಚೌರೀರ ಎಂ.ಪೆಮ್ಮಯ್ಯ ನೆನಪಿನ ದ್ವಾರವನ್ನು ಸಾಹಿತಿ ಬೈತಡ್ಕ ಜಾನಕಿ ಬೆಳ್ಳಿಯಪ್ಪ, ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ನೆನಪಿನ ದ್ವಾರವನ್ನು ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಮಾಜಿ ಅಧ್ಯಕ್ಷ ಕೊಡಪಾಲು ಎಸ್.ಗಣಪತಿ ಉದ್ಘಾಟಿಸಲಿದ್ದಾರೆಂದು ಮಾಹಿತಿ ನೀಡಿದರು.
ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ : ಬೆಟ್ಟಗೇರಿ ನಾಪೋಕ್ಲು ಕೂಡು ರಸ್ತೆಯಿಂದ ವೇದಿಕೆಯವರೆಗೆ ಸಮ್ಮೇಳನಾಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬಂಡ ಅವರ ಭವ್ಯ ಮೆರವಣಿಗೆ ವಿವಿಧ ಸಾಂಸ್ಕøತಿಕ ಕಲಾ ತಂಡಗಳೊಂದಿಗೆ ಬೆಳಗ್ಗೆ 9.15 ಗಂಟೆಗೆ ಆರಂಭಗೊಳ್ಳಲಿದ್ದು, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆಂದರು.
ಮುಖ್ಯ ದ್ವಾರ ಉದ್ಘಾಟನೆ :  ಮೆರವಣಿಗೆ ಬಳಿಕ ಫೀ.ಮಾ.ಕೆ.ಎಂ ಕಾರ್ಯಪ್ಪ ಮುಖ್ಯ ದ್ವಾರ, ಪುಸ್ತಕ ಮಳಿಗೆ ಹಾಗೂ ವಿವಿಧ ಒಕ್ಕೂಟಗಳ ಮಳಿಗೆ, ನೀರ್ಕಜೆ ಮಹಾಬಲೇಶ್ವರ ಭಟ್ ಸಭಾಂಗಣ, ಡಾ.ಕೋಡಿ ಕುಶಾಲಪ್ಪ ಗೌಡ ವೇದಿಕೆಯನ್ನು ಗಣ್ಯರು ಉದ್ಘಾಟಿಸಲಿದ್ದಾರೆಂದರು.
ಸಮ್ಮೇಳನ ಉದ್ಘಾಟನೆ :  ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಸಮ್ಮೇಳನದ ಸಭಾಕಾರ್ಯಕ್ರಮವನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಸ್ಮರಣ ಸಂಚಿಕೆ ಬಿಡುಗಡೆಮಾಡಲಿದ್ದಾರೆ. ಸಮ್ಮೇಳನಾಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬಂಡ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಸಾಹಿತಿ ಕಿಗ್ಗಾಲು ಗಿರೀಶ್ ಮಾತನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ 2021-22ನೇ ಸಾಲಿನ ಹತ್ತನೇ ತರಗತಿ ಮತ್ತು ಪದವಿ ಪೂರ್ವ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಶೇ.100 ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಅಭಿನಂದನೆ ಮತ್ತು ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆಯೆಂದು ತಿಳಿಸಿದರು.
ಸಾಹಿತ್ಯ ಗೋಷ್ಠಿ -ಮಧ್ಯಾಹ್ನ 2 ಗಂಟೆಗೆಯಿಂದ 3 ಗಂಟೆವರೆಗೆ ಮೂರು ಸಾಹಿತ್ಯ ಗೋಷ್ಠಿಗಳು ‘ ಯುವ ಪೀಳಿಗೆ ಮತ್ತು ಸಾಹಿತ್ಯ’, ‘ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆ’ ಮತ್ತು ‘ಸಾಹಿತ್ಯ ಕ್ಷೇತ್ರದಲ್ಲಿ ತಂತ್ರಜ್ಞಾನ’ ವಿಷಯದ ಮೇಲೆ ನಡೆಯಲಿದೆಯೆಂದು ವಿವರಗಳನ್ನಿತ್ತರು.
ಕವಿಗೋಷ್ಠಿ –ಮಧ್ಯಾಹ್ನ 3 ಗಂಟೆಯಿಂದ 4 ಗಂಟೆಯವರೆಗೆ ಸೋಮವಾರಪೇಟೆ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕಿ ಶಿವದೇವಿ ಅವನೀಶ್ಚಂದ್ರ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಬಳಿಕ ಸಂಜೆ 4 ಗಂಟೆಯಿಂದ ಬಹಿರಂಗ ಅಧಿವೇಶನ ನಡೆಯಲಿದ್ದು, ಮಡಿಕೇರಿ ತಾಲೂಕು ಅಧ್ಯಕ್ಷ ನವೀನ್ ಅಂಬೆಕಲ್ಲು ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಕಾರ್ಯದರ್ಶಿ ಕೆ.ಯು.ರಂಜಿತ್ ನಿರ್ಣಯ ಮಂಡನೆ ಮಾಡಲಿದ್ದಾರೆ.
ಇದೇ ಸಂದರ್ಭ ಸಾಹಿತಿ ಬಾರಿಯಂಡ ಆರ್.ಜೋಯಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 14 ಮಂದಿಯನ್ನು ಸನ್ಮಾನಿಸಿ ಗೌರವಿಸಲಾಗುತ್ತದೆಂದು ವಿವರಗಳನ್ನಿತ್ತರು.
ಸಮಾರೋಪ-ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಮ್ಮೇಳನಾಧ್ಯಕ್ಷ ಡಾ.ವಿಜಯ್ ಪೂಣಚ್ಚ ತಂಬಂಡ ಆಶಯ ನುಡಿಗಳನ್ನಾಡಲಿದ್ದಾರೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೆ.ಆರ್.ಗಂಗಾದರ ಗೌಡ ಸಮಾರೋಪ ಭಾಷಣ ಮಾಡಲಿದ್ದಾರೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆಯೆಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮದ್, ಮಡಿಕೇರಿ ತಾಲ್ಲೂಕು ಗೌರವ ಕಾರ್ಯದರ್ಶಿಗಳಾದ ಕೆ.ಯು.ರಂಜಿತ್, ಕಡ್ಲೇರ ತುಳಸಿ ಮೋಹನ್, ಸಂಘಟನಾ ಕಾರ್ಯದರ್ಶಿ ಪುದಿಯನೆರವನ ರಿತೀಶ್ ಮಾದಯ್ಯ, ಬೆಟ್ಟಗೇರಿ ಉದಯ ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.7 NEWS DESK : ಸ್ವದೇಶಿ ವಿಜ್ಞಾನ ಆಂದೋಲನ-ಕರ್ನಾಟಕ, ಚಾಮರಾಜನಗರ ವಿಶ್ವವಿದ್ಯಾಲಯ, ಚಾಮರಾಜನಗರ ಹಾಗೂ ಕೊಡಗು ವಿಶ್ವವಿದ್ಯಾಲಯ ಇವುಗಳ…

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*

ಮಾರ್ಚ್ 7, 2026

*ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*

ಮಾರ್ಚ್ 7, 2026

*ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*

ಮಾರ್ಚ್ 7, 2026

*ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*

ಮಾರ್ಚ್ 7, 2026

*ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*

ಮಾರ್ಚ್ 7, 2026

*ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.