Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪೊನ್ನಂಪೇಟೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಅಧಿಕಾರ : ಸಹಕಾರ ಸಚಿವ ಎಸ್.ಟಿ.ಸೋಮಶೇಖರ್  
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಪೊನ್ನಂಪೇಟೆ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಅಧಿಕಾರ : ಸಹಕಾರ ಸಚಿವ ಎಸ್.ಟಿ.ಸೋಮಶೇಖರ್  

ಜನವರಿ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ಜ.25 : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ವ್ಯವಹಾರ ಕ್ಷೇತ್ರ ವಿಸ್ತರಿಸಿಕೊಳ್ಳಲು ಅನುಕೂಲವಾಗುವಂತೆ ನಿಬಂಧನೆಗಳನ್ನು ತಿದ್ದುಪಡಿ ಮಾಡುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದೆ. ಇದರಿಂದ ಪೆಟ್ರೋಲಿಯಂ ಉತ್ಪನ್ನ ಮಾರಾಟ, ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಅನುಕೂಲವಾಗಲಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡಿ ಅವುಗಳನ್ನು ಆರ್ಥಿಕವಾಗಿ ಶಕ್ತಿಯುತವಾಗಿ ಮಾಡುವುದು ಮತ್ತು ಸಂಘದ ಮುಖಾಂತರ ಗ್ರಾಮೀಣ ಜನತೆಯ ಸಮಸ್ಯೆ ಬಗೆಹರಿಸುವ ಆಶಯವನ್ನು ಕೇಂದ್ರ ಸಹಕಾರ ಸಚಿವರಾದ ಅಮಿತ್ ಶಾ ಅವರು ಹೊಂದಿದ್ದಾರೆ ಎಂದು ಹೇಳಿದರು.
ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪದ ತಂತ್ರಾಂಶ ಅಳವಡಿಸಲಾಗುತ್ತಿದೆ. ಇದರಿಂದ ಸಾಲ ವಿತರಣೆ ಬಗ್ಗೆ ನಿಗಾ ವಹಿಸಲು ಅನುಕೂಲವಾಗಲಿದೆ. 25 ಲಕ್ಷ ಹಾಲು ಒಕ್ಕೂಟಗಳಿದ್ದು, ಪ್ರತಿ ಗ್ರಾಮಕ್ಕೊಂದು ಹಾಲು ಒಕ್ಕೂಟ ಸ್ಥಾಪನೆ ಮಾಡಬೇಂಬ ಉದ್ದೇಶವನ್ನು ಅಮಿತ್ ಶಾ ಅವರು ಹೊಂದಿದ್ದಾರೆ.
ದೇಶದ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕಮಾದರಿ ಬೈಲಾ ಜಾರಿಗೆ ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಕೇಂದ್ರ ಸರ್ಕಾರದಿಂದ ಪ್ರತಿ ಬಂದಿದ್ದು ಅಧಿಕಾರಿಗಳು ಅದರ ಅಧ್ಯಯನದಲ್ಲಿ ತೊಡಗಿದ್ದಾರೆ. ಅತಿ ಶೀಘ್ರದಲ್ಲಿ ಅದನ್ನು ಸಹಕಾರ ಸಂಘಗಳಿಗೆ ಕಳುಹಿಸಿ ಕೊಡಲಾಗುವುದು ಎಂದರು.
ಯಶಸ್ವಿನಿ ಯೋಜನೆಯನ್ನು ಮರುಜಾರಿ ಮಾಡಲಾಗಿದ್ದು 33 ಲಕ್ಷ ಸದಸ್ಯರು ನೋಂದಣಿ ಮಾಡಿಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದ್ದು, 1 ಸಾವಿರ ಆಸ್ಪತ್ರೆಗಳೊಂದಿಗೆ ಒಪ್ಪಂದ ಆಗಿದೆ. ಇದರಿಂದ ಗ್ರಾಮೀಣ ಜನರಿಗೆ ಅನುಕೂಲವಾಗಲಿದೆ.
 ಸ್ವಸಹಾಯ ಗುಂಪುಗಳು ನೂರಕ್ಕೆ ನೂರರಷ್ಟು ಸಾಲ ಮರುಪಾವತಿ ಮಾಡುತ್ತಿವೆ. ಕೊಡಗಿನಲ್ಲಿರುವ ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಬಹಳ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದರು.
33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆ ಮಾಡುವುದಾಗಿ ಘೋಷಣೆ ಮಾಡಲಾಗಿತ್ತು. ಇದುವರೆಗೂ 16 ಸಾವಿರ ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ ಎಂದು ಹೇಳಿದರು.
*ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಕಟ್ಟಡ, ವಾಣಿಜ್ಯ ಮಳಿಗೆಗಳ ಕಟ್ಟಡ ಉದ್ಘಾಟನೆ*
ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಪೊನ್ನಂಪೇಟೆ ತಾಲೂಕಿನ ಹಾತೂರ ಪ್ರಾಥಮಿಕ ಕೃಷಿ ಪತ್ತಿನ ನೂತನ ಸಹಕಾರ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ಕಟ್ಟಡ ಹಾಗೂ ಪೊನ್ನಪ್ಪಸಂತೆಯಲ್ಲಿ ಬಾಳೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳ ಕಟ್ಟಡವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ಮಡಿಕೇರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಾಂಡ್ ಗಣಪತಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಅ.15: ಕಾವೇರಿ ತೀರ್ಥೋದ್ಭವದ ಪ್ರಯುಕ್ತ ಕೊಡ್ಲಿಪೇಟೆಯ ನಂದಿಪುರ ಕೆರೆ ಆವರಣದ ನೇಸರ ಉದ್ಯಾನದಲ್ಲಿ ಅಕ್ಟೋಬರ್ 17ರಂದು…

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026

ಮಡಿಕೇರಿ ದಸರಾ ದೀಪಾಲಂಕಾರ : ಅಲಂಕಾರ ಸಮಿತಿಗೆ ಪೂರ್ಣ ಜವಾಬ್ದಾರಿ ನೀಡಿಲ್ಲ : ಮುನೀರ್ ಮಾಚಾರ್ ಸ್ಪಷ್ಟನೆ : ಮುಂದಿನ ದಸರಾ ಟೆಂಡರ್ ಪ್ರಕ್ರಿಯೆಯಲ್ಲಿ ಎಲ್ಲಾ ಸಮಿತಿಗಳ ಅಭಿಪ್ರಾಯ ಪಡೆಯಲು ಒತ್ತಾಯ

ಅಕ್ಟೋಬರ್ 15, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.