Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ 74ನೇ ಗಣರಾಜ್ಯೋತ್ಸವದ ಸಂಭ್ರಮ : ಸಂವಿಧಾನದ ಆಶಯದಂತೆ ತಾರತಮ್ಯ ಮುಕ್ತ ಆಡಳಿತ : ಸಚಿವ ಬಿ.ಸಿ.ನಾಗೇಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ 74ನೇ ಗಣರಾಜ್ಯೋತ್ಸವದ ಸಂಭ್ರಮ : ಸಂವಿಧಾನದ ಆಶಯದಂತೆ ತಾರತಮ್ಯ ಮುಕ್ತ ಆಡಳಿತ : ಸಚಿವ ಬಿ.ಸಿ.ನಾಗೇಶ್

ಜನವರಿ 26, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.26 : ರಾಷ್ಟ್ರದ ಪ್ರತಿಯೊಬ್ಬ ಪ್ರಜೆಯು ಪ್ರಗತಿಯನ್ನು ಸಾಧಿಸಿ, ಗೌರವಯುತ ಜೀವನ ನಡೆಸಬೇಕು. ಯಾರೊಬ್ಬರಿಗೂ ತಾರತಮ್ಯ ಮಾಡಬಾರದು ಎನ್ನುವುದು ನಮ್ಮ ಸಂವಿಧಾನದ ಮೂಲ ಆಶಯವಾಗಿದ್ದು, ಇದಕ್ಕೆ ಅನುಗುಣವಾಗಿ ಸರ್ವರ ಕಲ್ಯಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಶಿಕ್ಷಣ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಜಿಲ್ಲಾಡಳಿತದ ವತಿಯಿಂದ ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿತ 74ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.
‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಘೋಷ ವಾಕ್ಯದಂತೆ ದೇಶದ ಸಮಗ್ರ ಅಭಿವೃದ್ಧಿಗಾಗಿ ಅನೇಕ ಕ್ರಾಂತಿಕಾರಕ ಬದಲಾವಣೆಗಳನ್ನು ಕೇಂದ್ರ ಸರ್ಕಾರ ತಂದಿದೆ. ಮುಂದಿನ 25 ವರ್ಷಗಳು ಭಾರತಕ್ಕೆ ‘ಅಮೃತ ಕಾಲ’. ಈ ನಿಟ್ಟಿನಲ್ಲಿ ರೂಪಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ನಾವೆಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ. ಕೈಗಾರಿಕೆ, ಕೃಷಿ, ನೀರಾವರಿ, ಉದ್ಯಮ, ಉದ್ಯೋಗ, ಸಂಪರ್ಕ, ಸಾರಿಗೆ, ವಿಜ್ಞಾನ-ತಂತ್ರಜ್ಞಾನ ಕ್ಷೇತ್ರದ ವೇಗದ ಬೆಳವಣಿಗೆಗೆ ಒತ್ತು ನೀಡುವ ಮೂಲಕ ಪ್ರತಿಯೊಬ್ಬ ವ್ಯಕ್ತಿಯ ಜೀವನ ಮಟ್ಟವನ್ನು ಮೇಲಕ್ಕೆತ್ತುವ ಗುರಿಯನ್ನು ಹೊಂದಲಾಗಿದೆ. ಅದಕ್ಕಾಗಿ ದೇಶದ ಅಭಿವೃದ್ಧಿಗೆ ಹೊಸ ದಿಕ್ಕು ತೋರಿಸಲಿರುವ ಬೃಹತ್ ಮಾಸ್ಟರ್ ಪ್ಲಾನ್ ‘ಗತಿ ಶಕ್ತಿ’ ಮೂಲಕ ನವ ಭಾರತ ನಿರ್ಮಾಣದ ಕಡೆ ದಾಪುಗಾಲು ಇಡಲಾಗುತ್ತಿದೆಯೆಂದರು.
ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ರಾಜ್ಯವು ಪ್ರಗತಿಯ ಹಾದಿಯಲ್ಲಿದ್ದು, ಸಮಗ್ರ ಅಭಿವೃದ್ಧಿಗೆ ಅನೇಕ ಜನಪರ ಯೋಜನೆಗಳನ್ನು ರೂಪಿಸಲಾಗಿದೆಯೆಂದು ಹೇಳಿದರು.
ಮಹಾತ್ಮರ ಉದ್ಯಾನವನ- ಗಾಂಧಿ ಮಂಟಪದಲ್ಲಿ 30 ಸೆಂಟ್ ಜಾಗದಲ್ಲಿ ಮಹಾತ್ಮ ಗಾಂಧೀಜಿ ಉದ್ಯಾನವನ ನಿರ್ಮಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸದ್ಯದಲ್ಲಿಯೇ ಚಾಲನೆ ದೊರೆಯಲಿದೆಯೆಂದು ಮಾಹಿತಿಯನ್ನಿತ್ತರು.
ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಜೇನುಕುರುಬ ಜನಾಂಗದ 485 ಫಲಾನುಭವಿಗಳಿಗೆ ಮನೆ ನಿರ್ಮಿಸಲು ತಲಾ 3.50 ಲಕ್ಷದಂತೆ ಒಟ್ಟು 1,697.50 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆಯೆಂದರು.
13 ಸಾವಿರ ಶಿಕ್ಷಕರ ಸೇರ್ಪಡೆಗೆ ಕ್ರಮ-ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮತ್ತು ಸುಧಾರಣೆ ತರಲಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ನ್ನು ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಹಂತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಣೆಗಾಗಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ.15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆಯ್ಕೆಯಾಗಿರುವ 13 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲೇ ಸೇವೆಗೆ ಸೇರ್ಪಡೆಗೊಳಿಸುವ ಗುರಿ ಹೊಂದಲಾಗಿದೆಯೆಂದು ತಿಳಿಸಿದರು.
::: ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮ :::
ರಾಷ್ಟ್ರ ಪ್ರೇಮ ಉದ್ದೀಪನಗೊಳಿಸುವ, ನಾಡಿನ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅತ್ಯಾಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜಿಲ್ಲಾಡಳಿತದಿಂದ ಆಯೋಜಿತ 74ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಶಾಲಾ ತಂಡಗಳು ಪ್ರದರ್ಶಿಸುವ ಮೂಲಕ ಗಮನ ಸೆಳೆದವು.
ಜವಾಹರ್ ನವೋದಯ ವಿದ್ಯಾಲಯ ತಂಡ ಕೊಡಗಿನ ಇತಿಹಾಸ ಮತ್ತು ಸಂಸ್ಕೃತಿಯ ಮೇಲೆ ಬೆಳಕು ಚೆಲ್ಲುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಿ ಜನ ಮೆಚ್ಚುಗೆಗೆ ಪಾತ್ರವಾಯಿತಾದರೆ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮಕ್ಕಳು, ಕೋವಿಡ್ ಸಂದರ್ಭ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ರೂಪಿಸಿದ ಕ್ರಮಗಳು, ಕೋವಿಡ್ ನಂತರ ಸರ್ಕಾರ ಶೈಕ್ಷಣಿಕ ಉತ್ತೇಜನಕ್ಕಾಗಿ ರೂಪಿಸಿದ ಯೋಜನೆಗಳನ್ನು ತಿಳಿಸಿಕೊಡುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಪ್ರಸ್ತುತ ಪಡಿಸಿ ಗಮನ ಸೆಳೆಯಿತು.
ನಗರದ ಸಂತ ಜೋಸೆಫರ ಶಾಲೆ, ಲಿಟ್ಲ್ ಫ್ಲವರ್, ಬ್ಲಾಸಂ ಶಾಲೆ, ಸಂತ ಮೈಕೆಲರ ಶಾಲೆ, ಜನರಲ್ ತಿಮ್ಮಯ್ಯ ಶಾಲಾ ತಂಡಗಳು ವಿವಿಧ ದೇಶ ಭಕ್ತಿ ಗೀತೆಗಳಿಗೆ ಅತ್ಯಾಕರ್ಷಕವಾದ ನೃತ್ಯವನ್ನು ಪ್ರಸ್ತುತ ಪಡಿಸಿ ಗಮನ ಸೆಳೆದವು.
::: ರಾಣಿ ಮಾಚಯ್ಯರಿಗೆ ಸನ್ಮಾನ :::
ಕೊಡವ ಸಾಂಪ್ರದಾಯಿಕ ‘ಉಮ್ಮತ್ತಾಟ್’ ಕಲಾ ಪ್ರದರ್ಶನವನ್ನು ದೇಶ, ವಿದೇಶಗಳಲ್ಲಿ ಪಸರಿಸುವಲ್ಲಿ ಶ್ರಮಿಸಿ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ರಾಣಿ ಮಾಚಯ್ಯ ಅವರನ್ನು ಗಣರಾಜ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಶಾಲು, ಫಲ ತಾಂಬೂಲ ನೀಡಿ ಗೌರವಿಸಿದರು.
ಜಿಲ್ಲೆಯಲ್ಲಿ ಗ್ರಾಮ ಒನ್ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಫ್ರ್ರಾಂಚೈಸಿಗಳಿಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
::: ಆಕರ್ಷಕ ಪಥ ಸಂಚಲನ :::
ಗಣರಾಜ್ಯೋತ್ಸವ ಸಮಾರಂಭದಲ್ಲಿ ಪೆರೇಡ್ ಕಮಾಂಡರ್ ಚನ್ನನಾಯಕ್ ನೇತೃತ್ವದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ನಾಗರಿಕ ಸೇವಾ ಪೊಲೀಸ್ ತಂಡ, ಅರಣ್ಯ ಇಲಾಖೆ, ಗೃಹ ರಕ್ಷಕ ದಳ ಸೇರಿದಂತೆ ವಿವಿಧ ಶಾಲೆಗಳ ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳದ ಒಟ್ಟು 22 ತಂಡಗಳು ಪಥ ಸಂಚಲನದಲ್ಲಿ ಪಾಲ್ಗೊಂಡು ಗಮನ ಸೆಳೆದವು.
ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ ಪೂವಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.