ಮಡಿಕೇರಿ ಜ.27 : 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮಡಿಕೇರಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆದ ಕರಿಕೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಟಿ.ಎಸ್.ಶ್ರೀಷ್ಮ ಅವರನ್ನು ಅಭಿನಂದಿಸಲಾಯಿತು.
ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಲ್ಯಾಪ್‍ಟಾಪ್ ಹಾಗೂ ಅಭಿನಂದನಾ ಪತ್ರವನ್ನು ವಿತರಿಸಿ, ಪ್ರಶಂಶಿಸಿದರು.







