Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*
  • *ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*
  • *ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*
  • *ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
  • *ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*
  • *ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*
  • *ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*
  • *ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*
  • *ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*
  • *ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕರ್ನಾಟಕ ಪಬ್ಲಿಕ್ ಶಾಲೆಯ ನೂತನ  ಕಟ್ಟಡ ಉದ್ಘಾಟನೆ :  ಸಮಾಜದಲ್ಲಿ ಸ್ವಾಭಿಮಾನಿಯಾಗಿ ಬದುಕಲು ಶಿಕ್ಷಣ ಮುಖ್ಯ : ಸಚಿವ ಬಿ.ಸಿ.ನಾಗೇಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕರ್ನಾಟಕ ಪಬ್ಲಿಕ್ ಶಾಲೆಯ ನೂತನ  ಕಟ್ಟಡ ಉದ್ಘಾಟನೆ :  ಸಮಾಜದಲ್ಲಿ ಸ್ವಾಭಿಮಾನಿಯಾಗಿ ಬದುಕಲು ಶಿಕ್ಷಣ ಮುಖ್ಯ : ಸಚಿವ ಬಿ.ಸಿ.ನಾಗೇಶ್

ಜನವರಿ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.27 :  ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ 2.76 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ವಿವಿಧ ಶಾಲಾ ಕಟ್ಟಡಗಳನ್ನು ಶಾಲಾ ಶಿಕ್ಷಣ ಸಾಕ್ಷರತಾ ಮತ್ತು ಸಕಾಲ ಖಾತೆ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಬಿ.ಸಿ ನಾಗೇಶ್ ಉದ್ಘಾಟಿಸಿದರು.

ನಂತರ ನಡೆದ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಬಡ ಮತ್ತು ಮಧ್ಯಮ ವರ್ಗದ ಸರ್ಕಾರಿ ಶಾಲೆಯ ಮಕ್ಕಳಿಗೆ ಆಂಗ್ಲಭಾಷೆ ಶಿಕ್ಷಣ ದೊರಕಬೇಕೆಂಬ ಉದ್ದೇಶದಿಂದ ಗ್ರಾಮೀಣ ಪ್ರದೇಶದಲ್ಲಿ ಕೆಪಿಎಸ್ ಶಾಲೆಯನ್ನು ನಿರ್ಮಾಣ ಮಾಡಲಾಗಿದೆ. ದಿವಂಗತ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಿನಂತೆ ಎಲ್ಲಾ ಮಕ್ಕಳಿಗೂ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ಸರ್ವ ಶಿಕ್ಷಣ ಅಭಿಯಾನವನ್ನು ಎರಡು ಸಾವಿರ ಇಸವಿಯಲ್ಲಿ ಪ್ರಾರಂಭಿಸಲಾಗಿದೆ.  ನಮ್ಮ ದೇಶದ ಪ್ರತಿಯೊಬ್ಬ ಹೆಣ್ಣು ಮಗು ಸ್ವಾವಲಂಬಿಯಾಗಿ, ಸ್ವಾಭಿಮಾನಿಯಾಗಿ ಬದುಕಬೇಕಾದರೆ ಒಳ್ಳೆಯ ಶಿಕ್ಷಣವನ್ನು ಕೊಡಬೇಕು. ಅದಕ್ಕೆ ಆದ್ಯತೆಯನ್ನು ನೀಡಲು “ಭೇಟಿ ಪಡಾವೊ ಭೇಟಿ ಬಚಾವೊ” ಆಂದೋಲನವನ್ನು  ಪ್ರಧಾನಮಂತ್ರಿಯವರು ಪ್ರಾರಂಭಿಸಿದೆ.ಅದರಂತೆ ಎಲ್ಲಾ ಶಾಲೆಗಳಲ್ಲೂ ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಉತ್ತಮವಾದ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪ್ರಾಕೃತಿಕ ವಿಕೋಪ ಮತ್ತು ಕೋವಿಡ್ ನಿಂದ ಜಿಲ್ಲೆಯಲ್ಲಿ ಅಪಾರ ನಷ್ಟಸಂಭವಿಸಿದೆ. ಆದರೂ ರಾಜ್ಯದಲ್ಲಿ ಈ ವರ್ಷ 9 ಸಾವಿರಕ್ಕೂ ಅಧಿಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದರು. ರಾಜ್ಯದಲ್ಲಿ ಶಿಕ್ಷಣಕ್ಕೆ ಬಿಜೆಪಿ ಸರ್ಕಾರ ಒತ್ತುನೀಡಿದಷ್ಟು ಬೇರೆ ಯಾವ ಸರ್ಕಾರ ಒತ್ತು ನೀಡಿಲ್ಲ, ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದೆ.  ಶಿಕ್ಷಕರು ಪದವಿ ಪಡೆದರು ಅನೇಕ ಪರೀಕ್ಷೆಗಳನ್ನು ಬರೆದು ಸರ್ಕಾರಿ ಶಾಲೆಯಲ್ಲಿ ನೇಮಕ ಮಾಡಲಾಗುತ್ತದೆ.ಮುಂದಿನ ಶೈಕ್ಷಣಿಕ ವರ್ಷದೊಳಗೆ ಎಲ್ಲಾ ಶಾಲೆಗಳಿಗೆ ಶಿಕ್ಷಕರನ್ನು ನೇಮಕ ಮಾಡಿ ಶಿಕ್ಷಕರ ಕೊರತೆ ನಿಗಿಸಲಾಗುವುದು ಎಂದರು.

ಸರ್ಕಾರದಿಂದ ಶಿಕ್ಷಣಕ್ಕೆ ಅನೇಕ ರೀತಿಯ ಸೌಲಭ್ಯಗಳು ದೊರಕುತ್ತಿದ್ದು ಯಾವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲೆಯ ಅಧ್ಯಕ್ಷರು ಹಾಗೂ ವಿಧಾನಸಭಾ ಕ್ಷೇತ್ರದ ಶಾಸಕ  ಕೆ.ಜಿ ಬೋಪಯ್ಯ, ಶಿಕ್ಷಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಅವರ ಕ್ಷೇತ್ರದಲ್ಲಿ ಮಾಡಿದೆ ಅನ್ನುವುದಕ್ಕೆ ಇದೆ ಶಾಕ್ಷಿ ಎಂದರು. ಈ ಸಂದರ್ಭ ಶಾಲೆಯ ಸ್ವಚ್ಛತೆ ಉತ್ತಮ ವ್ಯವಸ್ಥೆಯನ್ನು ಕಂಡು ಪಬ್ಲಿಕ್ ಶಾಲೆಯ ಆಡಳಿತ ಮಂಡಳಿಯನ್ನು ಪ್ರಶಂಶಿಸಿದರು.

ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಶಿಕ್ಷಣಕ್ಕೆ ಒತ್ತಾಸೆಯನ್ನು ನೀಡಬೇಕು, ಯಾವಸಮಾಜ ಶಿಕ್ಷಣಭರಿತವಾಗಿರುತ್ತದೊ ಅದರಿಂದ ಒಳ್ಳೆಯ ಸಮಾಜ ನಿರ್ಮಾಣವಾಗಿ ದೇಶದ ಅಭಿವೃದ್ಧಿ ಸಾಧ್ಯ ಎಂದರು. ಈ ಹಿಂದೆ ಶಾಲೆಗಳಲ್ಲಿ ಸೌಚಾಲಯ ಹಾಗೂ ಕಟ್ಟಡಗಳ ಕೊರತೆಯಿಂದ ಹೆಣ್ಣು ಮಕ್ಕಳು ಶಿಕ್ಷಣವನ್ನು ಮೊಟುಕುಗೊಳಿಸುತ್ತಿದ್ದರು. ಇದನ್ನು ಹೋಗಲಾಡಿಸಲು ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದರು.

ಈ ಸಂದರ್ಭ ಅತಿಥಿಗಳಾಗಿ ಆಗಮಿಸಿದ ಗಣ್ಯರನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾಧಿಕಾರಿ ಬಿ.ಸಿ. ಸತೀಶ್, ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್.ಆಕಾಶ್, ನಿವೃತ್ತ ನ್ಯಾಯಾಧೀಶ  ವಿ.ಜಿ. ಬೋಪಯ್ಯ, ಜೀವವೈವಿಧ್ಯಮಂಡಳಿ ಅಧ್ಯಕ್ಷ ರವಿ ಕಾಳಪ್ಪ, ಶಾಲೆಯ ಎಸ್‍ಡಿಎಂಸಿ ಉಪಾಧ್ಯಕ್ಷ ಕೆ.ಎ. ಹಾರಿಸ್, ಉಪಸಮಿತಿಯ ಜಿನ್ನು ನಾಣಯ್ಯ, ಎನ್. ಎಸ್. ಉದಯಶಂಕರ್, ಶಿಕ್ಷಣ ಇಲಾಖೆಯ ಸಿ.ಪುಟ್ಟರಾಜು, ಸಿ.ರಂಗದಾಮಯ್ಯ, ಎಂ. ಕೃಷ್ಣಪ್ಪ,ಲೋಕೋಪಯೋಗಿ ಇಲಾಖೆ ಅಭಿಯಂತರ ಕೆ.ಟಿ. ರವಿಕುಮಾರ್, ಡಿ. ನಾಗರಾಜ್, ದ್ರುವ ರಾಜ, ಪಿ. ಸತೀಶ್, ಗುತ್ತಿಗೆದಾರ ಟಿ.ಎನ್ ಬಾಬು ಹಾಗೂ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಾಲೆಯ ಎಲ್ಲಾ ಶಿಕ್ಷಕ ವೃಂದ, ಸಿಬ್ಬಂದಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಮತ್ತಿತರರು ಹಾಜರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕಿ ಉಷಾರಾಣಿ ನಿರೂಪಿಸಿದರು. ಪ್ರಾಂಶುಪಾಲೆ ಅವನಿಜ ಸೋಮಯ್ಯ ಸ್ವಾಗತಿಸಿ, ಉಪಾಪ್ರಾಂಶುಪಾಲ ಶಿವಣ್ಣ ವಂದಿಸಿದರು. ಬಳಿಕ ನಡೆದ ವಿದ್ಯಾರ್ಥಿಗಳ ವಿವಿಧ ನೃತ್ಯ ವೈಭವದ ಸಾಂಸ್ಕೃತಿಕ ಕಾರ್ಯಕ್ರ ನೋಡುಗರನ್ನು ರಂಜಿಸಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ನಗರಸಭೆ ಹಾಗೂ ನಗರ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಭೇಟಿ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ರಾಜ್ಯ ಮಟ್ಟದ ಲೇಖನ ಸ್ಪರ್ಧೆಯಲ್ಲಿ ಸಿದ್ದರಾಜು ಬೆಳ್ಳಯ್ಯರಿಗೆ ದ್ವಿತೀಯ ಸ್ಥಾನ*

ಜುಲೈ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.15 NEWS DESK : ಮೈಸೂರು ದೇಸಿರಂಗ ಸಾಂಸ್ಕøತಿಕ ಸಂಸ್ಥೆ ಇವರು ವಿಚಾರವಾದಿ ಪ್ರೊ.ಕೆ.ರಾಮದಾಸ್ ಅವರ ನೆನಪಿನಲ್ಲಿ ಇತ್ತೀಚೆಗೆ…

*ಅಗ್ನಿ ಅವಘಡ : ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಡಿಕೇರಿಯಲ್ಲಿ ಜಾಗೃತಿ ಅಣಕು ಪ್ರದರ್ಶನ*

ಜುಲೈ 15, 2026

*ಕೊಡಗು : ಆದಿವಾಸಿಗಳು ಮತದಾರರ ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಿ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ಜುಲೈ 15, 2026

*ಎಸ್.ಜಾನಕಿಯವರಿಗೆ ‘ಸಮರ್ಥ ಕನ್ನಡಿಗರು’ ಕೊಡಗು ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ*

ಜುಲೈ 15, 2026

*ಬರಪೊಳೆಯಲ್ಲಿ ಪತ್ರಕರ್ತರ ಸಾಹಸಮಯ ಜಲಕ್ರೀಡೆ*

ಜುಲೈ 15, 2026

*ಬಿಳಿಗೇರಿಯಲ್ಲಿ ಜು.18 ಮತ್ತು 19 ರಂದು ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ : ನೋಂದಣಿಗೆ ಜು.17 ಕೊನೆಯ ದಿನ*

ಜುಲೈ 15, 2026

*ಚಂದನಕೇರೆ ಹಾಡಿ ರಸ್ತೆ ಕಾಮಗಾರಿಗೆ ಚಾಲನೆ*

ಜುಲೈ 15, 2026

*ಮಾನವ ವನ್ಯಜೀವಿಗಳ ಸಂಘರ್ಷ : ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಗ್ರಾಮಸ್ಥರೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ*

ಜುಲೈ 15, 2026

*ಎಸ್.ವಡ್ಡಳ್ಳಿ ಗ್ರಾಮದಲ್ಲಿ ಕ್ಷೇತ್ರೋತ್ಸವ ಬೆಣ್ಣೆ ಹಣ್ಣಿನ ಕ್ಷೇತ್ರೋತ್ಸವ*

ಜುಲೈ 15, 2026

*ಬಿ.ಕೆ.ಹರಿಪ್ರಸಾದ್ ರನ್ನು ಭೇಟಿಯಾದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ : ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಯ ಕುರಿತು ಚರ್ಚೆ*

ಜುಲೈ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.