ಸೋಮವಾರಪೇಟೆ,ಜ.28: ಟ್ಯಾಕ್ಸಿ ಡ್ರೈವರ್ಸ್ ಆರ್ಗನೈಸೇಷನ್‍ನ ತಾಲೂಕು ಘಟಕದ ವತಿಯಿಂದ ಗಣರಾಜ್ಯೋತ್ಸವ ಅಂಗವಾಗಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಚಾಲಕ ಚೈತನ್ಯೋಭವ ಕಾರ್ಯಕ್ರಮ ನಡೆಯಿತು.
ರಾಮನಗರದ ಗೆಜ್ಜೆಗಾರಗುತ್ತೆ ಮುರಾರಿ ಸ್ವಾಮಿಗಳ ಪುಣ್ಯಕ್ಷೇತ್ರದ ಪೀಠಾಧಿಪತಿ ಡಾ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಚಾಲಕರು ಪ್ರಯಾಣಿಕರ ಹಿತದೃಷ್ಟಿಯನ್ನು ಕಾಪಾಡುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ವಿ.ರವಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ವಿನ್ಸೆಂಟ್ ಬಾಬು, ಪೊಲೀಸ್ ಸಿಬ್ಬಂದಿ ನವೀನ್, ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕ ಆದಿಲ್ ಅವರುಗಳನ್ನು ಸನ್ಮಾನಿಸಲಾಯಿತು. ಪಟ್ಟಣದ ಪುರುಷೋತ್ತಮ್, ಜನಾರ್ದನ್, ಸುಭಾಷ್, ಅನಿಲ್, ಕವಿತ ಪೀಟರ್ ಸೇರಿದಂತೆ ಇತರರನ್ನು ಒಳಗೊಂಡ ವಿಶ್ವರೂಪಂ ಕಲಾವಿದರ ತಂಡದಿಂದ ಮೂಡಿಬಂದ ಸಂಗೀತ ರಸಸಂಜೆ ಕಾರ್ಯಕ್ರಮ ಎಲ್ಲರನ್ನು ರಂಜಿಸಿತು.
ಕಾರ್ಯಕ್ರಮದಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷ ಇಕ್ಬಾಲ್, ಉದ್ಯಮಿ ಅವಿನಾಶ್ ಕೇಸರಿ, ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಉದ್ಯಮಿ ಅರುಣ್ ಕಾಳಪ್ಪ, ಬಿಜೆಪಿ ಮುಖಂಡ ಬಿ.ಬಿ. ಭಾರತೀಶ್, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು ಸೇರಿದಂತೆ ಇತರರು ಉಪಸ್ಥಿತರಿದ್ದರು.







