Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಫೀ.ಮಾ.ಕಾರ್ಯಪ್ಪ ಅವರ ಶಿಸ್ತು, ಸಮಯ ಪ್ರಜ್ಞೆ ಎಲ್ಲರಿಗೂ ಮಾದರಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 124 ನೇ ಜನ್ಮ ದಿನಾಚರಣೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಫೀ.ಮಾ.ಕಾರ್ಯಪ್ಪ ಅವರ ಶಿಸ್ತು, ಸಮಯ ಪ್ರಜ್ಞೆ ಎಲ್ಲರಿಗೂ ಮಾದರಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 124 ನೇ ಜನ್ಮ ದಿನಾಚರಣೆ

ಜನವರಿ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.28 : ಸ್ವಾತಂತ್ರ್ಯ ಭಾರತದ ಮೊದಲ ಸೇನಾ ಮಹಾ ದಂಡನಾಯಕರಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 124 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಆಚರಿಸಲಾಯಿತು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಕಾರ್ಯಪ್ಪ ಅವರ ಪ್ರತಿಮೆಗೆ ಶಾಸಕರಾದ ಎಂ.ಪಿ.ಅಪ್ಪಚ್ಚುರoಜನ್, ಕೆ.ಜಿ.ಬೋಪಯ್ಯ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಜಿ.ಕಣ್ಣನ್, ಕರ್ನಲ್ ನಾರಾಯಣ ಮೂರ್ತಿ(ನಿವೃತ್ತ), ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಐಮುಡಿಯಂಡ ರಾಣಿ ಮಾಚಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುoಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇತರರು ಪುಷ್ಪಗುಚ್ಛ ಇರಿಸಿ, ಗೌರವ ನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ತಮ್ಮ ಬದುಕಿನುದ್ದಕ್ಕೂ ಶಿಸ್ತು, ಪ್ರಾಮಾಣಿಕತೆ, ಸಮಯಪ್ರಜ್ಞೆಗೆ ಪ್ರಥಮ ಆದ್ಯತೆ ನೀಡಿದ್ದರು. ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಮೈಗೂಡಿಸಿಕೊಂಡಿದ್ದರು, ಅವರ ಆದರ್ಶ ಬದುಕು ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರೂ ಪಾಲಿಸುವಂತಾಗಬೇಕು ಎಂದರು.
ಯುವ ಜನರು ದೇಶವನ್ನು ಪ್ರೀತಿಸಬೇಕು. ರಾಷ್ಟç ಮೊದಲು, ನಂತರ ಉಳಿದವು ಎಂಬುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಈ ಬಗ್ಗೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಸದಾ ಹೇಳುತ್ತಿದ್ದರು. ಭಾರತ ಸೇನೆಯ ಹೆಮ್ಮೆಯ ಪುತ್ರ. ಭಾರತೀಯ ಸೇನೆಗೆ ತನ್ನದೇ ಆದ ಇತಿಹಾಸ ನಿರ್ಮಿಸಿದ ಕೀರ್ತಿ ರಾಷ್ಟçದ ಪ್ರಥಮ ಮಹಾದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರಿಗೆ ಸಲ್ಲುತ್ತದೆ ಎಂದರು.
ರಾಷ್ಟ್ರಕ್ಕೆ ಶಿಸ್ತು, ದೇಶ ಪ್ರೇಮ, ರಾಷ್ಟ್ರಭಕ್ತಿ ಹೆಚ್ಚಿಸುವಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಆದರ್ಶಗಳನ್ನು ಶಿಸ್ತಿನ ಜೀವನವನ್ನು ಸದಾ ಅನುಸರಿಸಬೇಕು. ಆ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಆಚರಿಸಲಾಗುತ್ತದೆ ಎಂದರು.
ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಶಿಸ್ತಿನ ಸಿಪಾಯಿ ಆಗಿದ್ದರು, ಕಾರ್ಯಪ್ಪ ಅವರ ಶಿಸ್ತು, ಸಮಯ ಪ್ರಜ್ಞೆ ಎಲ್ಲರಿಗೂ ಮಾದರಿ ಎಂದರು.
ಸ್ವಾತಂತ್ರö್ಯ ಭಾರತದ ಮಹಾ ದಂಡನಾಯಕರಾಗಿ ರಾಷ್ಟç ರಕ್ಷಣೆ ಹಾಗೂ ಭದ್ರತೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸೇನಾ ಕ್ಷೇತ್ರದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಮಹತ್ತರ ಸಾಧನೆ ಮಾಡಿದ್ದಾರೆ ಎಂದರು.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಕೊಡಗು ಜಿಲ್ಲೆಯ ಸುಪುತ್ರರಾಗಿ ರಾಷ್ಟç ಮತ್ತು ಅಂತರರಾಷ್ಟಿçÃಯ ಮಟ್ಟದಲ್ಲಿ ಜಿಲ್ಲೆಗೆ ಹೆಸರು ತಂದು ಕೊಟ್ಟಿದ್ದಾರೆ ಎಂದು ಕೆ.ಜಿ.ಬೋಪಯ್ಯ ಅವರು ಸ್ಮರಿಸಿದರು.
ಜಿಲ್ಲಾ ಪೊಲೀಸ್ ವಾದ್ಯ ತಂಡ ಸಿದ್ದೇಶ್ ಅವರ ನೇತೃತ್ವದಲ್ಲಿ ವೀರ ಸೇನಾನಿಗೆ ಗೌರವ ನಮನ ಸಲ್ಲಿಸಿ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಕೂಡಿಗೆ ಸೈನಿಕ ಶಾಲೆ, ಮಡಿಕೇರಿಯ ಸಂತ ಮೈಕೆಲರ ಶಾಲೆ, ಕೊಡಗು ವಿದ್ಯಾಲಯ, ಜನರಲ್ ತಿಮ್ಮಯ್ಯ, ಬ್ಲಾಸಂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಪ್ರಶಸ್ತಿ ಪತ್ರ ವಿತರಣೆ; ಫೀ.ಮಾ.ಕೆ.ಎಂ.ಕಾರ್ಯಪ್ಪ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಂತ ಮೈಕೆಲರ ಶಾಲೆಯ ಭೂಮಿಕ ಎನ್., ದ್ವಿತೀಯ ಸ್ಥಾನ ಪಡೆದ ಕೊಡಗು ವಿದ್ಯಾಲಯದ ಕೀರ್ತಿ ಅಯ್ಯಪ್ಪ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೆನೆತ್ ರಾಯ್ ಅವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ, ಮಡಿಕೇರಿ ಕೊಡವ ಸಮಾಜದ ಗೌರವ ಕಾರ್ಯದರ್ಶಿ ಕನ್ನಂಡ ಸಂಪತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿದೇಶಕರಾದ ಪುಟ್ಟರಾಜು, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೆದ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ಅಜ್ಜಿಕುಟ್ಟಿರ ಗಿರೀಶ್ ಅವರು ಸ್ವಾಗತಿಸಿದರು, ಕಡಗದಾಳು ಪ್ರೌಢಶಾಲೆಯ ಮುಖ್ಯಸ್ಥರಾದ ಅನಿತಾ ಚೋಕಿರ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.16ರಂದು ಮಕ್ಕಳ ದಸರಾ ಸಂಭ್ರಮ – ಮಕ್ಕಳಿಂದ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ಕೊಡ್ಲಿಪೇಟೆಯಲ್ಲಿ ಅ.17ರಂದು ಕಾವೇರಿ ಆರತಿ, ಬಾಗಿನ ಅರ್ಪಣೆ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಅ.15: ಕಾವೇರಿ ತೀರ್ಥೋದ್ಭವದ ಪ್ರಯುಕ್ತ ಕೊಡ್ಲಿಪೇಟೆಯ ನಂದಿಪುರ ಕೆರೆ ಆವರಣದ ನೇಸರ ಉದ್ಯಾನದಲ್ಲಿ ಅಕ್ಟೋಬರ್ 17ರಂದು…

ಕುಶಾಲನಗರದಲ್ಲಿ ಅದ್ದೂರಿ ಹನುಮ ಜಯಂತಿ ಆಚರಣೆಗೆ ಪೂರ್ವಸಿದ್ಧತೆ; ಡಿಸೆಂಬರ್ 22ರಂದು ಹನುಮ ಜಯಂತಿ ಆಚರಣೆ; ದಶಮಂಟಪಗಳ ಸಮಿತಿಯಿಂದ ಸಿದ್ಧತೆ

ಅಕ್ಟೋಬರ್ 15, 2026

ನಾಪೋಕ್ಲುವಿನಲ್ಲಿ ಅ. 20ರಂದು 34ನೇ ವರ್ಷದ ಅದ್ಧೂರಿ ಆಯುಧ ಪೂಜೆ; ಅಲಂಕೃತ ವಾಹನಗಳ ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ; ನಿವೃತ್ತ ವೈದ್ಯ ಡಾ. ಹೆಚ್.ವಿ. ದೇವದಾಸ್ ಅವರಿಗೆ ಸನ್ಮಾನ

ಅಕ್ಟೋಬರ್ 15, 2026

ಮಡಿಕೇರಿ ದಸರಾ ದೀಪಾಲಂಕಾರ : ಅಲಂಕಾರ ಸಮಿತಿಗೆ ಪೂರ್ಣ ಜವಾಬ್ದಾರಿ ನೀಡಿಲ್ಲ : ಮುನೀರ್ ಮಾಚಾರ್ ಸ್ಪಷ್ಟನೆ : ಮುಂದಿನ ದಸರಾ ಟೆಂಡರ್ ಪ್ರಕ್ರಿಯೆಯಲ್ಲಿ ಎಲ್ಲಾ ಸಮಿತಿಗಳ ಅಭಿಪ್ರಾಯ ಪಡೆಯಲು ಒತ್ತಾಯ

ಅಕ್ಟೋಬರ್ 15, 2026

ರಜನಿ ರೈ ಅವರಿಗೆ ಡಾಕ್ಟರೇಟ್ ಪದವಿ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ಬಾಂಗ್ಲಾದೇಶದ ನಾಲ್ವರು ಅಕ್ರಮ ವಲಸಿಗರು ಪತ್ತೆ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮಾಹಿತಿ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಅ.16 ಮತ್ತು 17ರಂದು ಸೂರ್ಯ ಘರ್ ಯೋಜನೆಯ ವಿಶೇಷ ಅಭಿಯಾನ

ಅಕ್ಟೋಬರ್ 14, 2026

ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾದೇಶಿ ವಲಸಿಗರು ಪತ್ತೆ; ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಹಿಂದೂ ಜಾಗರಣಾ ವೇದಿಕೆ ಆಗ್ರಹ

ಅಕ್ಟೋಬರ್ 14, 2026

ಮಡಿಕೇರಿ : ಅ.15 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 14, 2026

ಮಡಿಕೇರಿಯಲ್ಲಿ ಕಾಫಿ ದಸರಾ : ಕಾಫಿ ಕೃಷಿಗೆ ಹೆಚ್ಚಿನ ಉತ್ತೇಜನ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.