Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಐಮಂಗಲದಲ್ಲಿ ವಾರ್ಷಿಕ ಕ್ರೀಡಾಕೂಟ : ಕ್ರೀಡೆ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ : ಎಂ.ಬಿ. ಮಾಚಮ್ಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಐಮಂಗಲದಲ್ಲಿ ವಾರ್ಷಿಕ ಕ್ರೀಡಾಕೂಟ : ಕ್ರೀಡೆ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ : ಎಂ.ಬಿ. ಮಾಚಮ್ಮ

ಜನವರಿ 30, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ ಜ.30 : ಕ್ರೀಡಾ ಚಟುವಟಿಕೆಗಳು ಕ್ರೀಡಾಪಟುಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ, ಗೆಳೆತನ ಹಾಗೂ ಸವಾಲನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸಿ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತದೆ ಎಂದು ಚಾಣಕ್ಯ ಎಜುಕೇಷನ್  ಟ್ರಸ್ಟ್‌ನ ಕಾರ್ಯದರ್ಶಿ ಎಂ.ಬಿ. ಮಾಚಮ್ಮ ಅಭಿಪ್ರಾಯಪಟ್ಟರು.
ಪಟ್ಟಣದ ಚಾಣಕ್ಯ ಎಜುಕೇಷನ್ ಟ್ರಸ್ಟ್‌ ವತಿಯಿಂದ  ಐಮಂಗಲದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ  ಮಾತನಾಡಿದರು.
ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ವಿದ್ಯಾಸಂಸ್ಥೆಗಳು ಅವಕಾಶ ನೀಡಿದಾಗ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಪಠ್ಯೇತರ ಚಟುವಟಿಕೆಗಳು ಪಠ್ಯಕ್ಕೆ ಪೂರಕವಾಗಿ ಆಯೋಜನೆಗೊಂಡರೆ ಇನ್ನಷ್ಟು ಉತ್ತಮ ಫಲಿತಾಂಶವನ್ನು ಕಾಣಲು ಸಾಧ್ಯ ಎಂದರು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಾಣಕ್ಯ ಎಜುಕೇಷನ್ ಟ್ರಸ್ಟ್ ಅಧ್ಯಕ್ಷೆ  ಸಿ.ಎನ್.ಕವಿತಾ   ಫಲಿತಾಂಶವನ್ನು ಸಕಾರಾತ್ಮಕವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆ ಅಥವಾ ಕ್ರೀಡಾಕೂಟಗಳು ಬೆಳೆಸುತ್ತವೆ. ಕ್ರೀಡೆಗಳು ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಗಟ್ಟಿಗೊಳಿಸಲು ಸಹಕಾರ ನೀಡುತ್ತವೆ ಎಂದರು.
ಸಂಸ್ಥೆಯ ಹಿರಿಯ ಉಪನ್ಯಾಸಕ ಎಂ.ಎಸ್.ಸುಬ್ಬಯ್ಯ  ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಸೇರಿದಂತೆ ಸಾಮಾಜಿಕ ಜಾಲತಾಣಗಳಿಂದ ದೂರವಿದ್ದಷ್ಟು ಒಳಿತು. ಇದು ಶಿಕ್ಷಣದೊಂದಿಗೆ ಏಳಿಗೆಯನ್ನು ಹೊಂದಲು ಸಾಕಷ್ಟು ಸಮಯಾವಕಾಶವನ್ನು ಒದಗಿಸಿಕೊಡುತ್ತದೆ. ಮೊಬೈಲ್ ಮುಂತಾದವುಗಳಿಂದ ದೂರವಿದ್ದು ದೈಹಿಕ ಸಾಮರ್ಥ್ಯ ವನ್ನು ಹೆಚ್ಚಿಸುವ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದಿನನಿತ್ಯ ಲವಲವಿಕೆಯಿಂದಿರಲು ಸಾಧ್ಯ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಗ್ರಾಮದ ಹಿರಿಯರಾದ ಕುಂಡ್ರಂಡ ಶಂಕರಿ, ಉಪನ್ಯಾಸಕರಾದ ಪಾರ್ವತಿ ಎಂ.ಎಂ, ರಮ್ಯಾ ಮಂಜುನಾಥ್ ಹಾಗೂ ಮಾಣಿಕ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಹರ್ಷಿತಾ ಸ್ವಾಗತಿಸಿದರು. ವಿದ್ಯಾರ್ಥಿನಿ ಕೌಶಲ್ಯ ವಂದಿಸಿದರು.

ವಿಜೇತರು: ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಸಂಸ್ಥೆಯ ಬಾಲಕರಿಗೆ ನಡೆದ ಕಬಡ್ಡಿ ಪಂದ್ಯವನ್ನು ಭಗತ್ ಸಿಂಗ್ ತಂಡ ಗೆದ್ದುಕೊಂಡಿತು. ಫುಟ್ಬಾಲ್ ಪಂದ್ಯದಲ್ಲಿ ಸಂಗೊಳ್ಳಿ ರಾಯಣ್ಣ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಕ್ರಿಕೆಟ್  ಪಂದ್ಯದಲ್ಲಿ ಭಗತ್ ಸಿಂಗ್ ತಂಡ 8 ವಿಕೇಟ್‍ಗಳಿಂದ ಗೆಲುವು ದಾಖಲಿಸುವ ಮೂಲಕ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಬಾಲಕಿಯರಿಗಾಗಿ ನಡೆದ ಹಗ್ಗಾಜಗ್ಗಾಟ ಸ್ಪರ್ಧೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ತಂಡ ಗೆಲುವು ದಾಖಲಿಸಿತು. ಬಾಲಕಿಯರಿಗೆ ನಡೆದ ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಹರ್ಷಿತಾ ಪ್ರಥಮ ಸ್ಥಾನ ಪಡೆದರೆ, ಕೌಶಲ್ಯ ದ್ವಿತೀಯ ಹಾಗೂ ಕಾವೇರಮ್ಮ ತೃತೀಯ ಸ್ಥಾನ ಪಡೆದುಕೊಂಡರು. ವಿಷದ ಚೆಂಡು ಸ್ಪರ್ಧೆಯಲ್ಲಿ ಆದಿತ್ಯ ಪ್ರಥಮ ಸ್ಥಾನ ಪಡೆದರೆ, ನಿತ್ಯ ದ್ವಿತೀಯ ಹಾಗೂ ಯಶ್ವಂತ್ ತೃತೀಯ ಸ್ಥಾನ ಪಡೆದುಕೊಂಡರು.

Follow us Follow us
Share. WhatsApp Facebook Twitter Email Telegram Copy Link

Related Posts

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.25: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ…

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.