Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬ್ಯಾಂಕ್‌ ಸೌಲಭ್ಯಗಳ ಮಾಹಿತಿ : ಡಿಸಿಸಿ ಡಿಜಿಟಲ್ ಮಾಹಿತಿ ಫಲಕ ಅನಾವರಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬ್ಯಾಂಕ್‌ ಸೌಲಭ್ಯಗಳ ಮಾಹಿತಿ : ಡಿಸಿಸಿ ಡಿಜಿಟಲ್ ಮಾಹಿತಿ ಫಲಕ ಅನಾವರಣ

ಜನವರಿ 30, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.30 : ನಗರದಲ್ಲಿರುವ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನಲ್ಲಿ ಬ್ಯಾಂಕ್ ನ ಸಮಗ್ರ ಸೌಲಭ್ಯಗಳ ಮಾಹಿತಿ ಒಳಗೊಂಡ ‘ಡಿಜಿಟಲ್ ಮಾಹಿತಿ ಪ್ರಚಾರ’ ಫಲಕಕ್ಕೆ ಚಾಲನೆ ನೀಡಲಾಯಿತು.
ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಡಿಜಿಟಲ್ ಪ್ರಚಾರ ಫಲಕವನ್ನು ಉದ್ಘಾಟಿಸಿ ಮಾತನಾಡಿ, ಮಡಿಕೇರಿಯಲ್ಲಿರುವ ಕೇಂದ್ರ ಬ್ಯಾಂಕ್ ನಲ್ಲಿ ಕೇಂದ್ರೀಕೃತಗೊಂಡಿರುವ ಡಿಜಿಟಲ್ ವ್ಯವಸ್ಥೆಯ ಮಾಹಿತಿಯು ಜಿಲ್ಲೆಯಾದ್ಯಂತ ಡಿಸಿಸಿ ಬ್ಯಾಂಕ್‍ಗಳ 22 ಶಾಖೆಗಳಲ್ಲಿಯೂ ಟಿವಿ ಪರದೆಯ ಮೂಲಕ ಕಾಣಲಿದೆ. ಈ ಮೂಲಕ ಬ್ಯಾಂಕ್ ಗ್ರಾಹಕರಿಗೆ ಸುಲಭವಾಗಿ ಬ್ಯಾಂಕ್‍ನಿಂದ ದೊರಕುವ ಸಾಲ ಸೌಲಭ್ಯಗಳು, ಠೇವಣಿ ಬಡ್ಡಿದರಗಳು, ವಿವಿಧ ರೀತಿಯ ಸೌಲಭ್ಯಗಳ ಸಮಗ್ರ ಮಾಹಿತಿ ದೊರಕುವುದು ಸುಲಭ ಸಾಧ್ಯವಾಗಲಿದೆ ಎಂದರು.
19 ಲಕ್ಷ ರೂ. ವೆಚ್ಚದಲ್ಲಿ ಡಿಜಿಟಲ್ ತಂತ್ರಜ್ಞಾನದ ಮಾಹಿತಿ ಫಲಕ ಅಳವಡಿಸಿದ್ದೇವೆ, ಅಂತೆಯೇ ರಾತ್ರಿ,ಯಲ್ಲಿಯೂ ಜನರ ಗಮನ ಸೆಳೆಯುವ ಡಿಜಿಟಲ್ ಫಲಕವನ್ನೂ 1.60 ಲಕ್ಷ ರೂ. ವೆಚ್ಚದಲ್ಲಿ ಅಳವಡಿಸಲಾಗಿದೆ ಎಂದು ಬಾಂಡ್ ಗಣಪತಿ ಅವರು ಹೇಳಿದರು.
ಕೊಡಗು ಜಿಲ್ಲೆಯಲ್ಲಿರುವ 23 ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‍ಗಳ 174 ಶಾಖೆಗಳ ಪೈಕಿ ಕೆಡಿಸಿಸಿ ಬ್ಯಾಂಕ್ ತನ್ನ ಗ್ರಾಹಕ ಸ್ನೇಹಿ ಯೋಜನೆಗಳು. ನಿರಖು ಠೇವಣಿ ಮತ್ತು ಸಾಲ ವಿತರಣೆಯಲ್ಲಿ ಪ್ರಥಮ ಸ್ಥಾನದಲ್ಲಿರುವುದು ಹೆಗ್ಗಳಿಕೆಯಾಗಿದೆ ಎಂದು ಕೊಡಂದೇರ ಗಣಪತಿ ಅವರು ತಿಳಿಸಿದರು.
ವಾಣಿಜ್ಯ ಬ್ಯಾಂಕ್‍ಗಳಿಗೆ ಡಿಸಿಸಿ ಬ್ಯಾಂಕ್ ಪ್ರಬಲ ಸ್ಪರ್ಧೆ ನೀಡುತ್ತಿದ್ದು, ಸದಾ ಗ್ರಾಹಕರ ಒಳಿತನ್ನು ಕೆಡಿಸಿಸಿ ಬ್ಯಾಂಕ್ ಬಯಸುತ್ತಾ ಬಂದಿದೆ ಎಂದು ವಿವರಿಸಿದರು.
ಕೊಡಗು ಡಿಸಿಸಿ ಬ್ಯಾಂಕ್ ರೈತರ ಹಿತ ಕಾಯುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಿದೆ. ಆ ನಿಟ್ಟಿನಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ಕಲ್ಪಿಸುವುದು, ಸಾಲ ಮರುಪಾವತಿ ಸೇರಿದಂತೆ ಇಡೀ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿ ಕೊಡಗು ಡಿಸಿಸಿ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.
101 ವರ್ಷಗಳನ್ನು ಪೂರೈಸಿರುವ ಕೊಡಗು ಡಿಸಿಸಿ ಬ್ಯಾಂಕ್‍ನ ಶತಮಾನೋತ್ಸವ ಕಟ್ಟಡ ಕಾಮಗಾರಿಯು ಇದೇ ಡಿಸೆಂಬರ್ ಅಂತ್ಯದೊಳಗೆ ಮುಕ್ತಾಯಗೊಳ್ಳಲಿದ್ದು, ಬ್ಯಾಂಕ್‍ನ ಗ್ರಾಹಕರಿಗೆ ವಿಶಾಲವಾದ ಕಟ್ಟಡದಲ್ಲಿ ಮತ್ತಷ್ಟು ಸೌಲಭ್ಯಗಳು ಸುಲಭವಾಗಿ ದೊರಕಲಿದೆ ಎಂದು ಬಾಂಡ್ ಗಣಪತಿ ಅವರು ವಿವರಿಸಿದರು.
ಕೆಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರಾದ ಬಿ.ಡಿ.ಮಂಜುನಾಥ್ ಮಾತನಾಡಿ, ಸಮಾಜದಲ್ಲಿ ಎಲ್ಲಾ ರಂಗಗಳು ನಾಗಾಲೋಟದಲ್ಲಿ ಡಿಜಿಟಲ್ ವ್ಯವಸ್ಥೆ ಅಳವಡಿಸಿಕೊಳ್ಳುತ್ತಿರುವಾಗ ಕೆಡಿಸಿಸಿ ಬ್ಯಾಂಕ್ ಕೂಡ ಇದೀಗ ಗ್ರಾಹಕರಿಗೆ ಡಿಜಿಟಲ್ ಮಾಧ್ಯಮದ ಮೂಲಕ ಸಮಗ್ರ ಮಾಹಿತಿ ನೀಡಲು ಮುಂದಾಗಿದೆ. ಪ್ರತೀ ಬ್ಯಾಂಕ್‍ಗಳು ವಿವಿಧ ಮಾಧ್ಯಮಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿರುವ ಸಂದರ್ಭ ಕೆಡಿಸಿಸಿ ಬ್ಯಾಂಕ್ ಅತ್ಯಾಧುನಿಕವಾದ ಡಿಜಿಟಲ್ ಮಾಹಿತಿ ಫಲಕದೊಂದಿಗೆ ಗ್ರಾಹಕರಿಗೆ ಸೂಕ್ತ ಮಾಹಿತಿ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಬ್ಯಾಂಕ್ ಉಪಾಧ್ಯಕ್ಷರಾದ ಕೇಟೋಳಿರ ಎಸ್.ಹರೀಶ್ ಪೂವಯ್ಯ, ನಿರ್ದೇಶಕರಾದ ಬಿ.ಕೆ.ಚಿಣ್ಣಪ್ಪ, ಎಸ್.ಬಿ.ಭರತ್‍ಕುಮಾರ್, ಹೊಟ್ಟೇಂಗಡ ಎಂ.ರಮೇಶ್, ಪಟ್ರಪಂಡ ಬಿ.ರಘುನಾಣಯ್ಯ, ಹೊಸೂರು ಜೆ.ಸತೀಶ್ ಕುಮಾರ್, ಕನ್ನಂಡ ಎ.ಸಂಪತ್, ಕೋಲತಂಡ ಎ.ಸುಬ್ರಮಣಿ, ಕಿಮ್ಮುಡೀರ ಎ.ಜಗದೀಶ್, ಕೆ.ಅರುಣ್ ಭೀಮಯ್ಯ, ಎ.ಗೋಪಾಲ ಕೃಷ್ಣ, ಕೇಕಡ ಎ.ದೇವಯ್ಯ, ಸಹಕಾರ ಸಂಘಗಳ ಉಪ ನಿಬಂಧಕರಾದ ಎಂ.ಎಸ್.ಕೃಷ್ಣಪ್ರಸಾದ್, ಪ್ರಧಾನ ವ್ಯವಸ್ಥಾಪಕರಾದ ಎ.ಎಸ್.ಪಾರ್ವತಿ, ಉಪ ಪ್ರಧಾನ ವ್ಯವಸ್ಥಾಪಕರಾದ ಕೆ.ಕೆ.ಗೋವಿಂದರಾಜು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಖರ್ಗೆ ಹೇಳಿಕೆಗೆ ಸೋಮವಾರಪೇಟೆ ಬಿಜೆಪಿ ಮಂಡಲ ಖಂಡನೆ

ಅಕ್ಟೋಬರ್ 26, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.25: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಡಿಕೇರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ…

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.