Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಹುತಾತ್ಮರ ದಿನಾಚರಣೆ : ಮಹಾತ್ಮ ಗಾಂಧಿ ಸ್ಮರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಹುತಾತ್ಮರ ದಿನಾಚರಣೆ : ಮಹಾತ್ಮ ಗಾಂಧಿ ಸ್ಮರಣೆ

ಜನವರಿ 30, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.30 : ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ ನಗರದಲ್ಲಿ ಜರುಗಿತು.
ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಣೆ ಮಾಡಲಾಯಿತು.
ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪದಲ್ಲಿರಿಸಿ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಮರ್ಪಿಸಲಾಯಿತು.
ಇದೇ ವೇಳೆ ಪೊಲೀಸ್ ಮೀಸಲು ಪಡೆಯ  ಸಬ್​ ಇನ್ಸ್​ಪೆಕ್ಟರ್​ ರಾಕೇಶ್ ಮತ್ತು ತಂಡದವರು ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಲಾಯಿತು. ನಂತರ ಮೌನಾಚರಣೆ ನಡೆಯಿತು. ಪೊಲೀಸ್ ವಾದ್ಯವು ಸಿದ್ದೇಶ್ ಅವರ ನೇತೃತ್ವದಲ್ಲಿ ಪೊಲೀಸ್ ತಂಡದವರು ರಾಷ್ಟ್ರಗೀತೆ ಹಾಡಿ ಗಮನ ಸೆಳೆದರು.
ಗಾಂಧಿ ಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮವನ್ನು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಲಿಯಾಕತ್ ಅಲಿ ಹಾಗೂ ಸಂತ ಮೈಕಲರ ಶಾಲೆಯ ಗೈಡ್ಸ್ ತಂಡದ ವಿದ್ಯಾರ್ಥಿಗಳು ನಡೆಸಿಕೊಟ್ಟರು, ಸರ್ವಧರ್ಮ ಗುರುಗಳಿಂದ ಭಗವದ್ಗೀತೆ(ಸಂತೋಷ್ ಭಟ್), ಬೈಬಲ್(ಸಗಾಯ ಮೇರಿ), ಕುರಾನ್(ಇಸಾಕ್ ಮೌಲ್ವಿ) ಸಂದೇಶಗಳ ಪಠಣ ಮಾಡಲಾಯಿತು.
ಸರ್ಕಾರಿ ಗೌರವಾರ್ಪಣೆ ಹಾಗೂ ಮೌನಾಚರಣೆಯ ನಂತರ ಮೆರವಣಿಗೆಯಲ್ಲಿ ಗಾಂಧೀಜಿ ಚಿತಾಭಸ್ಮವನ್ನು ಮತ್ತೆ ಜಿಲ್ಲಾ ಖಜಾನೆಯಲ್ಲಿಟ್ಟು ಭದ್ರಗೊಳಿಸಲಾಯಿತು.
ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಸರ್ವೋದಯ ಸಮಿತಿ ಅಧ್ಯಕ್ಷ  ಅಂಬೆಕಲ್ಲು ಕುಶಾಲಪ್ಪ, ನಿಕಟ ಅಧ್ಯಕ್ಷ  ಟಿ.ಪಿ.ರಮೇಶ್, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನಿರ್ ಅಹ್ಮದ್, ಸದಸ್ಯ ತೋರೇರ ಮುದ್ದಯ್ಯ, ಕೆ.ಟಿ.ಬೇಬಿ ಮ್ಯಾಥ್ಯು, ಅಂಬೆಕಲ್ಲು ನವೀನ್, ಎಸ್.ಪಿ.ವಾಸುದೇವ, ಎಂ.ಎನ್.ಸುಬ್ರಮಣಿ, ಜಿ.ಸಿ.ರಮೇಶ್, ಸೂರಯ್ಯ ಅಬ್ರಾರ್, ಚಂದ್ರಶೇಖರ್, ರೇವತಿ ರಮೇಶ್, ಮಿನಾಜ್, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಸಹಾಯಕ ಖಜಾನಾಧಿಕಾರಿ ಕಲ್ಪನ, ಶ್ಯಾಮ್ ಸುಂದರ್, ಪೊಲೀಸ್ ಇನ್ಸ್‍ಪೆಕ್ಟರ್ ಮೇದಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ್, ನಗರಸಭೆ ಪೌರಾಯುಕ್ತರಾದ ವಿಜಯ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೆದ್, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ದಿವಾಕರ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಸಂಪತ್ ಕುಮಾರ್, ಬಾಷಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್, ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಮ್ಮಿ ಸಿಕ್ವೇರಾ, ದಮಯಂತಿ ಮತ್ತಿತರರು ಇದ್ದರು.
ಬಳಿಕ ಮಾತನಾಡಿದ ಸರ್ವೋದಯ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಇರುವುದು ಇಡೀ ರಾಷ್ಟ್ರದಲ್ಲೇ ವಿಶೇಷವಾಗಿದೆ. ಆ ದಿಸೆಯಲ್ಲಿ ನಗರದ ಗಾಂಧೀ ಮಂಟಪದಲ್ಲಿ ಚಿತಾಭಸ್ಮವಿಟ್ಟು ‘ರಾಜ್‍ಘಾಟ್’ ಮಾದರಿಯಲ್ಲಿ ‘ಗಾಂಧಿ ಸ್ಮಾರಕ ನಿರ್ಮಾಣ’ಕ್ಕೆ ಮುಂದಾಗಲಾಗಿದ್ದು, ಜಿಲ್ಲಾಧಿಕಾರಿ ಅವರು 30 ಸೆಂಟು ಜಾಗವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಸರಿಗೆ ಮಾಡಿದ್ದಾರೆ ಎಂದರು.
ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹಲವು ವರ್ಷಗಳಿಂದ ಹುತಾತ್ಮರ ದಿನಾಚರಣೆ ಆಯೋಜಿಸಿಕೊಂಡು ಬರಲಾಗಿದೆ. ಆ ನಿಟ್ಟಿನಲ್ಲಿ ಗಾಂಧಿ ಮಂಟಪದಲ್ಲಿ ಮಹಾತ್ಮ ಗಾಂಧೀಜಿಯವರ ಸ್ಮಾರಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈಗಾಗಲೇ ನೀಲನಕ್ಷೆ ತಯಾರಿಸಲಾಗಿದೆ ಎಂದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.