Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕೊಡಗಿಗೆ ರಾಷ್ಟ್ರೀಯ ರಕ್ಷಣಾ ಕಾಲೇಜಿನ ನಿಯೋಗ ಭೇಟಿ : ಹಲವು ಅಭಿವೃದ್ಧಿ ವಿಷಯ ಕುರಿತು ಚರ್ಚೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿಗೆ ರಾಷ್ಟ್ರೀಯ ರಕ್ಷಣಾ ಕಾಲೇಜಿನ ನಿಯೋಗ ಭೇಟಿ : ಹಲವು ಅಭಿವೃದ್ಧಿ ವಿಷಯ ಕುರಿತು ಚರ್ಚೆ

ಫೆಬ್ರವರಿ 1, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.1 : ನವ ದೆಹಲಿಯ ರಾಷ್ಟ್ರೀಯ ರಕ್ಷಣಾ ಕಾಲೇಜಿನ ನಿಯೋಗವು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರನ್ನು ಭೇಟಿ ಮಾಡಿ, ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂವಾದ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾಹಿತಿ ನೀಡಿ, ಕೊಡಗು ಜಿಲ್ಲೆಯು 5 ತಾಲ್ಲೂಕು, 16 ಹೋಬಳಿ, 103 ಗ್ರಾಮ ಪಂಚಾಯಿತಿ, 531 ಕಂದಾಯ ಗ್ರಾಮಗಳನ್ನು ಒಳಗೊಂಡಿದ್ದು, 6.13 ಲಕ್ಷ ಜನಸಂಖ್ಯೆ ಹೊಂದಿದೆ ಎಂದು ತಿಳಿಸಿದರು.
16 ಹೋಬಳಿ ಕೇಂದ್ರಗಳಲ್ಲಿ ಅಟಲ್ ಜೀ ಜನಸ್ನೇಹಿ ಹಾಗೂ ಸ್ಪಂದನಾ ಕೇಂದ್ರಗಳ ಮೂಲಕ ಆಧಾರ್, ಭೂಮಿ, ಮತ್ತಿತರ ಸೇವೆಗಳನ್ನು ಕಲ್ಪಿಸಲಾಗುತ್ತಿದೆ. ಬೆಳೆಹಾನಿ ಸಂಬಂಧಿಸಿದಂತೆ ಪ್ರಸಕ್ತ ಸಾಲಿನಲ್ಲಿ 46,099 ಫಲಾನುಭವಿಗಳಿಗೆ 133.26 ಕೋಟಿ ರೂ. ವಿತರಿಸಲಾಗಿದೆ ಎಂದರು.
ಗ್ರಾಮ ಒನ್ ಸೇವೆಗಳು ಗ್ರಾ.ಪಂ. ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಸಕಾಲ ಯೋಜನೆಯಡಿ ಹಲವು ಸೇವೆಗಳನ್ನು ಕಾಲ ಮಿತಿಯಲ್ಲಿ ಒದಗಿಸಲಾಗುತ್ತಿದೆ ಎಂದರು.
ಮುಂಗಾರು ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವುದು, ಜಿಲ್ಲೆಯಲ್ಲಿನ ಪ್ರವಾಸಿ ಸ್ಥಳಗಳು, ಮತ್ತಿತರ ಬಗ್ಗೆ ಜಿಲ್ಲಾಧಿಕಾರಿ ಬಿ.ಸಿ.ಸತೀಶ ಅವರು ವಿವರವಾಗಿ ಮಾಹಿತಿ ನೀಡಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ಸ್ವಚ್ಚ ಭಾರತ ಅಭಿಯಾನದಡಿ ಸಮರ್ಪಕವಾಗಿ ಘನ ತ್ಯಾಜ್ಯ ವಿಲೇವಾರಿ ಮಾಡುವುದು, ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿ ನೀರು ಸಂಪರ್ಕ ಕಲ್ಪಿಸುವುದು, ಪ್ರತೀ ಗ್ರಾ.ಪಂ. ವ್ಯಾಪ್ತಿಯಲ್ಲಿ ಡಿಜಿಟಲ್ ಗ್ರಂಥಾಲಯ ಯೋಜನೆಯಡಿ ‘ಓದುವ ಬೆಳಕು’ ಕಾರ್ಯಕ್ರಮ ಅನುಷ್ಠಾನ, ಇ-ಸ್ವತ್ತು ಮತ್ತಿತರ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪೊಲೀಸ್ ಇಲಾಖೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ರಕ್ಷಣೆಗೆ ಒತ್ತು ನೀಡುವುದು, ರಸ್ತೆ ಸುರಕ್ಷತೆ, ಸುಗಮ ಸಾರಿಗೆ ಸಂಚಾರ ಮತ್ತಿತರ ಕಾರ್ಯ ಕೈಗೊಳ್ಳಲಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್ ಅವರು ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಗರ್ಭಿಣಿಯರಿಗೆ ಸಹಾಯಧನದಡಿ ಇದುವರೆಗೆ 14,607 ಫಲಾನುಭವಿಗಳಿಗೆ 637.42 ಲಕ್ಷ ರೂ. ಭರಿಸಲಾಗಿದೆ. ಪೋಷಣಾ ಅಭಿಯಾನ ಯೋಜನೆಯಡಿ ಪೌಷ್ಟಿಕ ಆಹಾರ ವಿತರಣೆ, ಪೋಷಣೆ ಮಾಸಾಚರಣೆ ಚಟುವಟಿಕೆಯಡಿ ಅರಿವು ಮೂಡಿಸಲಾಗುತ್ತದೆ ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್ ಅವರು ಫ್ರೂಟ್ಸ್ ತಂತ್ರಾಂಶದ ಮೂಲಕ ಕೃಷಿ ಮತ್ತು ಸಂಬಂಧಿಸಿದ ಇಲಾಖೆಗಳ ವಿವಿಧ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದರು. .
ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ ಅವರು ಜಿಲ್ಲೆಯಲ್ಲಿ ನೋಂದಾಯಿತ 4,527 ನಿವೃತ್ತ ಸೈನಿಕರಿದ್ದಾರೆ ಎಂದು ತಿಳಿಸಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರ ಅವರು ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ‘ಸಾರಥಿ’ ಯೋಜನೆಯಡಿ ಸಾರ್ವಜನಿಕರಿಗೆ ಹಲವು ಸೇವೆ ಕಲ್ಪಿಸಲಾಗುತ್ತದೆ ಎಂದರು.
ಮುದ್ರಾಂಕ ಮತ್ತು ನೋಂದಣಿ ಇಲಾಖೆಯ ಸಬ್ ರಿಜಿಸ್ಟ್ರಾರ್ ಸೌಮ್ಯಲತಾ ಇಲಾಖೆಯಿಂದ ಕಾವೇರಿ ಸಾಪ್ಟ್‍ವೇರ್ ಮೂಲಕ ಆಸ್ತಿ ನೋಂದಣಿ, ವಿವಿಧ ಸಂಘ ಸಂಸ್ಥೆಗಳ ನೋಂದಣಿ, ಮದುವೆ ರಿಜಿಸ್ಟ್ರೇಷನ್ ಇತರೆ ಕಾರ್ಯಗಳನ್ನು ಮಾಡಲಾಗುತ್ತದೆ ಎಂದರು.
ಸರ್ಕಾರದ ವಿವಿಧ ಇಲಾಖೆಗಳ ಅಭಿವೃದ್ಧಿ ಮತ್ತು ಪ್ರಗತಿಯ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಏರ್‍ವೈಸ್ ಮಾರ್ಷಲ್ ತೇಜ್‍ಬೀರ್ ಸಿಂಗ್, ಎವಿಎಸ್‍ಎಂ ಅವರು ರಾಷ್ಟ್ರೀಯ ರಕ್ಷಣೆ ಮತ್ತು ಶೈಕ್ಷಣಿಕ ಅಧ್ಯಯನ ಸಂಬಂಧಿಸಿದಂತೆ ರಕ್ಷಣೆ, ಸಿವಿಲ್ ಸೇವೆಗಳು ಸೇರಿದಂತೆ ಹಲವು ರಾಜ್ಯಗಳ ಪ್ರವಾಸ ಕೈಗೊಂಡು ಆರ್ಥಿಕ ಹಾಗೂ ಗ್ರಾಮೀಣ ಅಭಿವೃದ್ಧಿ, ಮಾಹಿತಿ ತಂತ್ರಜ್ಞಾನ ಮತ್ತಿತರ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆಯುವುದು ನಿಯೋಗದ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂವಾದದಲ್ಲಿ ಗ್ರಾಮೀಣ ಅಭಿವೃದ್ಧಿ, ಸ್ವಚ್ಚತೆ, ಶೈಕ್ಷಣಿಕ ಚಟುವಟಿಕೆ, ಘನ ತ್ಯಾಜ್ಯ ಸಮರ್ಪಕ ವಿಲೇವಾರಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನ, ಪ್ರವಾಸೋದ್ಯಮ ಅಭಿವೃದ್ಧಿ ಹೀಗೆ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ, ಭೂದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಕೆಪಿಟಿಸಿಎಲ್ ಇಇ ಮಾದೇಶ್, ಸೆಸ್ಕ್ ಇಇ ಅನಿತಾ ಬಾಯಿ ಇತರರು ತಮ್ಮ ಇಲಾಖೆಯ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.
18 ಜನರನ್ನು ಒಳಗೊಂಡ ರಾಷ್ಟ್ರೀಯ ರಕ್ಷಣಾ ಕಾಲೇಜಿನ ನಿಯೋಗವು ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ, ಕೋಟೆ, ರಾಜಸೀಟು ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.