ಮಡಿಕೇರಿ ಫೆ.2 : ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಅವರು ಫೆ.3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಭಾಪತಿ ಅವರು ಫೆ.3 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯುವ ತಾಲ್ಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಭಾಪತಿಯವರ ಆಪ್ತ ಕಾರ್ಯದರ್ಶಿ ಡಾ.ಜಿ.ವಿಶ್ವನಾಥ ಅವರು ತಿಳಿಸಿದ್ದಾರೆ.







