ಸೋಮವಾರಪೇಟೆ : ಎ.ಆರ್.ಮಮತ ಗೆ ಏಷ್ಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆಯಿಂದ ಪ್ರಶಸ್ತಿ
03/02/2023

ಸೋಮವಾರಪೇಟೆ ಫೆ.3 : ಏಷ್ಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆ ವತಿಯಿಂದ ನೀಡುವ ಪ್ರಶಸ್ತಿಗೆ ಸೋಮವಾರಪೇಟೆಯ ನಿವಾಸಿ, ಸಿವಿಲ್ ಇಂಜಿನಿಯರ್ ಹಾಗೂ ಪುಷ್ಪಗಿರಿ ಜೇಸಿ ಸಂಸ್ಥೆ ಪೂರ್ವ ವಲಯ ಉಪಾಧ್ಯಕ್ಷರಾದ ಎ.ಆರ್.ಮಮತ ಭಾಜನರಾಗಿದ್ದಾರೆ.
ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕಾಗಿ ಈ ಪ್ರಶಸ್ತಿ ನೀಡಿ ಗೌರವಿಸಿದೆ
ತುಮಕೂರು ಜೆಸಿಐ ಮೆಟ್ರೋ ವತಿಯಿಂದ ತುಮಕೂರು ಚೇತನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದರು.