Advertisement
1:40 AM Thursday 7-December 2023

ಮಾ.4 ಮತ್ತು 5 ರಂದು ಗೋಣಿಕೊಪ್ಪಲಿನಲ್ಲಿ 16ನೇ ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ

05/02/2023

ಮಡಿಕೇರಿ ಫೆ.5 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 16 ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ.4 ಮತ್ತು 5 ರಂದು ಗೋಣಿಕೊಪ್ಪಲಿನ ಸರಕಾರಿ ಶಾಲಾ ಮೈದಾನದಲ್ಲಿ ನಡೆಸಲು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಪೊನ್ನಂಪೇಟೆ ತಾಲೂಕು ರಚನೆಯಾದ ಬಳಿಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗೋಣಿಕೊಪ್ಪಲಿನಲ್ಲಿ ನಡೆಸುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ವಿಚಾರ ಎಂದು ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟರು. ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ ಈಗಾಗಲೇ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಗೋಣಿಕೊಪ್ಪಲಿನಲ್ಲಿ 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ. ಎಲ್ಲರು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಶಾಸಕ ಕೆ.ಜಿ.ಬೋಪಯ್ಯ, ಗೌರವ ಅಧ್ಯಕ್ಷರಾಗಿ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಶಾಸಕ ಎಂ.ಪಿ.ಅಪ್ಪಚುರoಜನ್, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಕಾರ್ಯಾಧ್ಯಕ್ಷರಾಗಿ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಮಹಾಪ್ರದಾನ ಕಾರ್ಯದರ್ಶಿಯಾಗಿ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಳೆರ ದಯಾ ಚಂಗಪ್ಪ, ಪ್ರದಾನ ಕಾರ್ಯದರ್ಶಿಗಳಾಗಿ ಜಿಲ್ಲಾ ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಸ್ ಐ ಮುನೀರ್ ಅಹಮದ್, ಪುದಿಯನೆರವನ ರೇವತಿ ರಮೇಶ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಡಿ. ರಾಜೇಶ್ ಪದ್ಮನಾಭ, ಮಡಿಕೇರಿ ತಾಲೂಕು ಅಧ್ಯಕ್ಷ ಅಂಬೇಕಲ್ ನವೀನ್,  ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎಸ್ ಡಿ ವಿಜೇತ್, ಕುಶಾಲನಗರ ತಾಲೂಕು ಅಧ್ಯಕ್ಷ ಕೆ ಎಸ್ ಮೂರ್ತಿಯವರನ್ನು ಆರಿಸಲಾಯಿತು. ಜಿಲ್ಲಾ ಸಹ ಕಾರ್ಯದರ್ಶಿಗಳಾದ ಕುಮಾರ್, ಡೆನ್ನಿಸ್ ಡಿಸೋಜ, ಸಂಘಟನಾ ಕಾರ್ಯದರ್ಶಿಗಳಾದ ಎಂ ಇ. ಮೊಹಿದ್ದೀನ್, ಆರ್‌.ಪಿ ಚಂದ್ರಶೇಖರ್ ಮತ್ತು ಹೋಬಳಿ ಅಧ್ಯಕ್ಷರುಗಳನ್ನು ಕಾರ್ಯದರ್ಶಿಗಳಾಗಿ ಆರಿಸಲಾಯಿತು. ಕೋಶಾಧಿಕಾರಿಯಾಗಿ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕುಲ್ಲಚಂಡ ಪ್ರಮೋದ್ ಗಣಪತಿ, ಮತ್ತು ಜಿಲ್ಲಾ ಕೋಶಾಧಿಕಾರಿ ಎಂ.ಬಿ ಜೋಯಪ್ಪ, ಮಹಾಪೋಷಕರುಗಳಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಮತ್ತು ಪೋಷಕರುಗಳಾಗಿ ತಾಲೂಕು ಮಟ್ಟದ ಅಧಿಕಾರಿಗಳನ್ನು ಆರಿಸಲಾಯಿತು. ಕೋಶಾಧಿಕಾರಿಯಾಗಿ ಪೊನ್ನಂಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಮಹಾಪೋಷಕರುಗಳಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪೋಷಕರುಗಳನ್ನಾಗಿ ತಾಲೂಕು ಮಟ್ಟದ ಅಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಕಸಾಪ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಸ್ವಾತಂತ್ರ‍್ಯ ಹೋರಾಟಗಾರರ ಸ್ಮಾರಕ ಭವನದ ಸಂಚಾಲಕ ಕೊಳ್ಳಿಮಾಡ ಅಜಿತ್ ಅಯ್ಯಪ್ಪ, ತಾಲೂಕು ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ ಮತ್ತಿತರರು ಉಪಸ್ಥಿತರಿದ್ದರು.