Advertisement
11:19 AM Monday 4-December 2023

ಫೆ.12 ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ

06/02/2023

ಮಡಿಕೇರಿ ಫೆ.6 : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಫೆ.12 ರಂದು 2021-22ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಕೊಡಗು ಗೌಡ ವಿದ್ಯಾ ಸಂಘದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸರ್ಕಾರಿ ಜಮೀನುಗಳ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಉದ್ಘಾಟಿಸಲಿದ್ದು, ಕೊಡಗು ವಿದ್ಯಾ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕುಂದಲ್ಪಾಡಿ ಜೆ.ದಿವಾಕರ, ಅತಿಥಿಗಳಾಗಿ ರಾಜ್ಯ ಲೆಕ್ಕಪತ್ರ ಇಲಾಖೆ ನಿವೃತ್ತ ಸಹಾಯಕ ನಿಯಂತ್ರಕ ಸೂದನ ಎ.ಜಾಜಯ್ಯ, ಚೆಟ್ಟಿಮಾನಿ ಕುಂದಚೇರಿ ಗ್ರಾಮದ ಕೆದಂಬಾಡಿ ಪುಷ್ಪಾವೇಣಿ ಶಿವಾಜಿ, ಮಡಿಕೇರಿ ಆರೋಗ್ಯ ಇಲಾಖೆಯ ನಿವೃತ್ತ ಫಾರ್ಮಸಿಸ್ಟ್ ಕಲ್ಲಂಬಿ ಯು.ವೆಂಕಪ್ಪ ಹಾಗೂ ತಾಳತ್ತಮನೆಯ ಪಾಣತ್ತಲೆ ಭೀಮಯ್ಯ ಪಾಲ್ಗೊಂಡು ಪ್ರತಿಭಾ ಪುರಸ್ಕಾರ ನಡೆಸಿಕೊಡಲಿದ್ದಾರೆ.
::: 1908 ರಲ್ಲಿ ಸ್ಥಾಪನೆ :::
ಶತಮಾನೋತ್ಸವ ಕಂಡ ಸಂಸ್ಥೆಯು 1908ರಲ್ಲಿ ಜನ್ಮ ತಳೆದಲ್ಲಿಂದಲೂ ಗೌಡ ಸಮುದಾಯದ ಶೈಕ್ಷಣಿಕ ಪ್ರಗತಿಗಾಗಿ ಶ್ರಮಿಸುತ್ತಿದೆ. ಪತ್ರಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸುವುದರೊಂದಿಗೆ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕೆಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬರಲಾಗುತ್ತಿದೆ ಎಂದು ಕೊಡಗು ವಿದ್ಯಾ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ತಿಳಿಸಿದ್ದಾರೆ.