ಬಹುಜನ ಸಮಾಜ ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಮೋಹನ್ ಮೌರ್ಯ ಜೆಡಿಎಸ್ ಗೆ ಸೇರ್ಪಡೆ
06/02/2023

ಮಡಿಕೇರಿ ಫೆ.6 : ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರ ನೇತೃತ್ವದಲ್ಲಿ ಬಿ ಎಸ್ ಪಿ ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಮೋಹನ್ ಮೌರ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೋಹನ್ ಮೌರ್ಯ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
