Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*
  • *ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ : ಕವಯತ್ರಿ ಸ್ಮಿತಾ ಅಮೃತಾರಾಜ್*
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ‘ಪರಶುರಾಮ’ ನಾಟಕ ಪ್ರದರ್ಶನ : ಕೊಡಗಿನಲ್ಲಿ ನಾಟಕೋತ್ಸವ ಆಯೋಜಿಸುವ ಚಿಂತನೆ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ‘ಪರಶುರಾಮ’ ನಾಟಕ ಪ್ರದರ್ಶನ : ಕೊಡಗಿನಲ್ಲಿ ನಾಟಕೋತ್ಸವ ಆಯೋಜಿಸುವ ಚಿಂತನೆ : ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್

ಫೆಬ್ರವರಿ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.7 : ಮುಂದಿನ ದಿನಗಳಲ್ಲಿ ಕೊಡಗಿನಲ್ಲೂ ನಾಟಕೋತ್ಸವ ಆಯೋಜಿಸುವ ಚಿಂತನೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದರು.

ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ‘ಪರಶುರಾಮ’ ನಾಟಕ ಪ್ರದರ್ಶನ ಸಂದರ್ಭದಲ್ಲಿ ಮಾತನಾಡಿದರು.

ಮೈಸೂರು ಮತ್ತಿತರ ಭಾಗಗಳಿಗೆ ಹೋಲಿಸಿದರೆ ಕೊಡಗಿನಲ್ಲಿ ನಾಟಕ ನೋಡುವವರ ಸಂಖ್ಯೆ ಕಡಿಮೆ ಇದೆ. ಇತರ ಜಿಲ್ಲೆಗಳಲ್ಲಿ ನವರಾತ್ರಿ ಸಂದರ್ಭ 9 ದಿನಗಳೂ ನಾಟಕ ಪ್ರದರ್ಶನ ಏರ್ಪಡಿಸಲಾಗುತ್ತದೆ. ಸಾಧ್ಯವಾದರೆ ಮಡಿಕೇರಿಯಲ್ಲೂ ಮುಂದಿನ ದಿನಗಳಲ್ಲಿ ಇಂತಹ ಪ್ರಯೋಗ ಮಾಡುವ ಪ್ರಯತ್ನ ನಡೆಸಲಾಗುವುದು ಎಂದರು.

ಪರಶುರಾಮ ನಾಟಕದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಪ್ರದರ್ಶನದ ಬಗ್ಗೆ ಮೆಚ್ಚುಗೆಯ ಮಾತನಾಡಿದರು. ಪುರಾಣದ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಲು ಇಂತಹ ನಾಟಕಗಳು ಸಹಾಯ ಮಾಡುತ್ತದೆ ಎಂದು ಹೇಳಿದರು.
ಕೊಡಗು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್‍ಕುಟ್ಟಪ್ಪ ಜಿಲ್ಲಾಧಿಕಾರಿ ಚಿಂತನೆಗೆ ಪೂರಕವಾಗಿ ಮಾತನಾಡಿ, ಸ್ಥಳೀಯ, ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ನಾಟಕೋತ್ಸವವನ್ನು ಎಲ್ಲರೂ ಸೇರಿ ಆಯೋಜನೆ ಮಾಡಬಹುದು. ವೈಯಕ್ತಿಕ ಮತ್ತು ವೃತ್ತಿಕಾರಣದಿಂದ ಒತ್ತಡದಲ್ಲಿ ಇರುವ ಇಂದಿನ ದಿನಗಳಲ್ಲಿ ಎಲ್ಲರೂ ಸೇರುವ ಮತ್ತು ಮನೋರಂಜನೆ ಪಡೆಯುವ ಅವಕಾಶಗಳು ಕಡಿಮೆ ಆಗುತ್ತಿದೆ.ನಾಟಕಗಳ ಮೂಲಕ ಮನೋಲ್ಲಾಸದ ಅವಕಾಶಗಳು ದೊರೆಯುವಂತಾಗಲಿ ಎಂದರು.

ಇದಕ್ಕೂ ಮೊದಲು ನಾಟಕ ಪ್ರದರ್ಶನ ಉದ್ಘಾಟಿಸಿದ ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿಮಹೋತ್ಸವ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ.ಪೂವಯ್ಯ ಮಾತನಾಡಿ, ಪ್ರೆಸ್‍ಕ್ಲಬ್ ಬೆಳ್ಳಿ ಮಹೋತ್ಸವ ಹಿನ್ನೆಲೆಯಲ್ಲಿ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಸಮಾಜಮುಖಿ ಮತ್ತು ಜನಪರ ಕಾರ್ಯಕ್ರಮಗಳು ಸೆಪ್ಟೆಂಬರ್ ತನಕವೂ ಮುಂದುವರಿಯಲಿದೆ ಎಂದರು.
ಕೊಡಗು ಪ್ರೆಸ್‍ಕ್ಲಬ್ ಬೆಳ್ಳಿಮಹೋತ್ಸವ ಸಮಿತಿ ಮಹಾಪೋಷಕ ಜಿ.ರಾಜೇಂದ್ರ ಮಾತನಾಡಿ, ಪರಶುರಾಮ ಕ್ಷೇತ್ರದಿಂದ ಬಂದಿರುವ ಜೀವನ್‍ರಾಂ ಸುಳ್ಯ ಅವರ ನಾಟಕ ಮನೋರಂಜನ ಒದಗಿಸುವುದರ ಜೊತೆಗೆ ಅರ್ಥಗ್ರಹಿಸುವ ಶಕ್ತಿ ಮೂಲಕ ಪುರಾಣ ಲೋಕಕ್ಕೆ ಕರೆದುಕೊಂಡು ಹೋಯಿತು ಎಂದು ಹೇಳಿದರು.

ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ನಾಟಕದ ನಿರ್ದೇಶಕ ಡಾ.ಜೀವನ್‍ರಾಂ ಸುಳ್ಯ, ಕೊಡಗು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾರೈ, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ ಮಾತನಾಡಿದರು.

ಕಲಾ ಶಿಕ್ಷಕ ಉ.ರಾ.ನಾಗೇಶ್, ಲೇಖಕಿ ಕೊಟ್ಟಕೇರಿಯನ ಲೀಲಾದಯಾನಂದ ಹಾಗೂ ಪುಟಾಣಿ ತಿಷ್ಯಾ ಪೊನ್ನೇಟಿ ನಾಟಕದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ಕೊಡಗು ಪ್ರೆಸ್‍ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್‍ಕುಮಾರ್ ಗುಹ್ಯ ಕಾರ್ಯಕ್ರಮ ನಿರ್ವಹಿಸಿದರು.

ಮಡಿಕೇರಿಯ ಚಳಿಯ ವಾತಾವರಣ ಮಧ್ಯೆ ಕಾರ್ಕಳದ ಯಕ್ಷರಂಗಾಯಣ ಪ್ರಸ್ತುತಪಡಿಸಿದ ಕರಾವಳಿ ಸೃಷ್ಟಿಯಕತೆ ಹೇಳುವ ಪರಶುರಾಮ ನಾಟಕ ರಂಗಾಸಕ್ತರ ಮೆಚ್ಚುಗೆಗೆ ಪಾತ್ರವಾಯಿತು. ಡಾ. ಜೀವನ್‍ರಾಂ ಸುಳ್ಯ ನಿರ್ದೇಶನದಲ್ಲಿ ಪೈಪೋಟಿಗೆ ಬಿದ್ದಂತೆ ಅಭಿನಯಿಸಿದ ಕಲಾವಿದರು ಸುಮಾರು 2 ಗಂಟೆ ಕಾಲ ಸಂತಜೋಸೆಫರ ವಿದ್ಯಾಸಂಸ್ಥೆ ಸಭಾಂಗಣಬತುಂಬಾತುಂಬಿದ್ದ ಪ್ರೇಕ್ಷಕರನ್ನು ಹಿಡಿದಿಡುವಲ್ಲಿ ಸಫಲರಾದರು.

ಕಾಂತಾರ ಸಿನಿಮಾದ ವರಾಹರೂಪಂಗೀತೆ ರಚನೆಕಾರ ಶಶಿರಾಜ್ ಕಾವೂರು ಪರಶುರಾಮ ನಾಟಕವನ್ನು ರಚಿಸಿದ್ದಾರೆ. ಪುರಾಣದ ಎಳೆ ಇಟ್ಟುಕೊಂಡು ರಚನೆಯಾಗಿರುವ ನಾಟಕದಲ್ಲಿ ವರ್ತಮಾನದ ಸಂಗತಿಗಳಾದ ನದಿ ತಿರುವುಯೋಜನೆ, ಗೋಹತ್ಯೆ, ಜಾತಿ ಪದ್ಧತಿ, ನಮ್ಮನ್ನಾಳುವವರ ದುರಾಡಳಿತ, ಭ್ರಷ್ಟ ವ್ಯವಸ್ಥೆಯ ವಿರುದ್ಧಆಕ್ರೋಶ ಸೂಕ್ಷ್ಮವಾಗಿ ಕಾಣಿಸಿಕೊಳ್ಳುತ್ತದೆ. ಪರಶುರಾಮ ಸೃಷ್ಟಿಯ ತುಳುನಾಡು, ಅಲ್ಲಿಯ ಭೂತಾರಾಧನೆಯ ಹಿನ್ನೆಲೆಯ ಅರಿವನ್ನೂ ಮೂಡಿಸುತ್ತದೆ.

ಕಲಾವಿದರ ಅಭಿನಯಕ್ಕೆ ರಂಗಸಜ್ಜಿಕೆ, ಬೆಳಕು ವಿನ್ಯಾಸ, ಧ್ವನಿ ವ್ಯವಸ್ಥೆಯೂ ಪೂರಕವಾಗಿ ಇದ್ದಕಾರಣ ನಾಟಕ ಎಲ್ಲೂ ಬೇಸರ ಹುಟ್ಟಿಸಲಿಲ್ಲ. ಕೊನೆಯತನಕವೂ ಕುಳಿತಿದ್ದ ಪ್ರೇಕ್ಷಕರ ಸಂಖ್ಯೆಯೇ ಇದಕ್ಕೆ ಸಾಕ್ಷಿಆಗಿತ್ತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಕೊಡವ ಮಹಿಳೆಯರ ಸಬಲೀಕರಣಕ್ಕಾಗಿ ಸಿಎನ್‌ಸಿಯಿಂದ ಹಕ್ಕೊತ್ತಾಯ ಮಂಡನೆ*

ಮಾರ್ಚ್ 8, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*

ಮಾರ್ಚ್ 8, 2026

*ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 8, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪನೆ ಕುರಿತ ಸಭೆ*

ಮಾರ್ಚ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.8 NEWS DESK  : ಶಾಲಾ ಶಿಕ್ಷಣ ಇಲಾಖೆಯಡಿಯಲ್ಲಿ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶನಾಲಯದ…

*ಗೋಣಿಕೊಪ್ಪಲು : ಮಹಿಳೆಯರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಿ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 8, 2026

*ಮಡಿಕೇರಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಸಾಮಾಜಿಕ ಬೆಂಬಲ ಅತ್ಯಗತ್ಯ : ಕವಯತ್ರಿ ಸ್ಮಿತಾ ಅಮೃತಾರಾಜ್*

ಮಾರ್ಚ್ 8, 2026

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.