Advertisement
3:21 AM Saturday 2-December 2023

ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ವಿಶೇಷ ಪೂಜೆ

07/02/2023

ಮಡಿಕೇರಿ ಫೆ.7 : ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.18 ರಂದು ವಿವಿಧ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಧರ್ಮದರ್ಶಿ ಗೋವಿಂದ ಸ್ವಾಮಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ 9 ಗಂಟೆಯಿಂದ ಕಾಶಿಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಂತರ ಭಕ್ತಾಧಿಗಳಿಂದ ಪಂಚಲಿಂಗಕ್ಕೆ ಪವಿತ್ರ ಗಂಗಾಜಲದಿoದ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆಯಾಗಲಿದೆ. ಸಂಜೆ 7 ಗಂಟೆಗೆ ಭಕ್ತಾಧಿಗಳಿಗೆ ದೀಪಲಂಕಾರ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ 8 ಗಂಟೆಗೆ ತಾಯಿಯ ದರ್ಶನ ಇರುತ್ತದೆ.
ಮಧ್ಯಾಹ್ನ ಹಾಗೂ ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಂಜೆ ಭಕ್ತಿ ಪ್ರಧಾನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
::: ಗಂಗಾಜಲ ಅಭಿಷೇಕ :::
ಪಂಚಲಿಂಗಕ್ಕೆ ಪವಿತ್ರ ಗಂಗಾಜಲದಿಂದ ಅಭಿಷೇಕ ಮತ್ತು ಶಿವನಮೂರ್ತಿಗೆ ಪುಷ್ಪಾರ್ಚನೆಯನ್ನು ಖುದ್ದು ತಾವೇ ಮಾಡಲಿಚ್ಛಿಸುವವರು ದೇವಾಲಯದ ಕಚೇರಿಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ 08272 295668, 9480730523, 9481959080 ಗೆ ಕರೆ ಮಾಡಬಹುದೆಂದು ಹೇಳಿದ್ದಾರೆ.
ದೇವಾಲಯದಲ್ಲಿ 52 ಅಡಿ ಎತ್ತರದ ಶಿವನ ವಿಗ್ರಹವನ್ನು 2016 ರಲ್ಲಿ ಪ್ರತಿಷ್ಠಾಪಿಸಲಾಗಿದೆ. ಗರ್ಭಗುಡಿಯಲ್ಲಿ ಕಾಶಿಲಿಂಗ, ವಿಗ್ರಹದ ಸುತ್ತ ಪಂಚಲಿಂಗಗಳು ಮತ್ತು 109 ಲಿಂಗಗಳಿರುವುದು ಕ್ಷೇತ್ರದ ವಿಶೇಷ.